ಕನ್ನಡಪ್ರಭ ವಾರ್ತೆ, ಉಡುಪಿ
ಈ ಸಂದರ್ಭದಲ್ಲಿ ಮತಗಟ್ಟೆ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ಹಾಗೂ ಚುನಾವಣಾ ಅಭ್ಯರ್ಥಿ / ಬೆಂಬಲಿಗರು ಸೇರಿ 5 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವುದನ್ನು ನಿಷೇಧಿಸಲಾಗಿರುತ್ತದೆ.
ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರ ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿರುತ್ತದೆ ಹಾಗೂ ಈ ಪ್ರದೇಶ ವ್ಯಾಪ್ತಿಯ ಝೆರಾಕ್ಸ್ ಅಂಗಡಿ, ಬುಕ್‌ಸ್ಟಾಲ್, ಸೈಬರ್ ಕೆಫೆಗಳನ್ನುನಿರ್ಬಂಧಿಸಲಾಗಿದೆ.
ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದ್ದು, ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ/ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ ಹಾಗೂ ಈ ಅವಧಿಯಲ್ಲಿ ಧ್ವನಿವರ್ಧಕ ಬಳಸಲು ಅನುಮತಿ ಇರುವುದಿಲ್ಲ.
ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿರುತ್ತದೆ.
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳಲ್ಲಿ, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಕ್ರಮ ವಹಿಸಬೇಕು.
ಮತದಾನದ ದಿನದಂದು ಮತಗಟ್ಟೆಗಳ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್, ಕಾರ್ಡ್ಲೆಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿರುತ್ತದೆ.ಮತದಾನ ದಿನದಂದು ಮತಗಟ್ಟೆಗಳ ಸುತ್ತ 200 ಮೀಟರ್ ಪರಿಮಿತಿಯಲ್ಲಿ
ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು, ಹೋಟೆಲ್‌ಗಳು ಮತ್ತು ಅತಿಥಿ ಗೃಹಗಳಲ್ಲಿ ವಾಸ್ತವ್ಯ ಮಾಡಿರುವವರ ಪಟ್ಟಿಗಳ ಪರಿಶೀಲನೆ ಮಾಡಿ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ವ್ಯಕ್ತಿಗಳನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.