ಮುಂಡರಗಿ: ಇದೀಗ ಜರುಗುತ್ತಿರುವ ವಿಧಾನ ಪರಿಷತ್ನ 4 ಪದವೀಧರ ಕ್ಷೇತ್ರಗಳ ಚುನಾವಣೆ ಕರ್ನಾಟಕ ರಾಜ್ಯದ ಮುಂದಿನ ರಾಜಕೀಯ ಬದಲಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಮಾಜಿ ಸಿಎಂ ಹಾವೇರಿ-ಗದಗ ಲೋಕಸಭ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಮಾಜಿ ಸಚಿವ ಕಳಕಪ್ಪ ಬಂಡಿ ಮಾತನಾಡಿ, ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಒಗ್ಗಟ್ಟಾಗಿ ಶ್ರಮಿಸಬೇಕು. ಮತದಾರರ ಮನೆ-ಮನೆ ಪ್ರಚಾರದಲ್ಲಿ ಕಾರ್ಯಕರ್ತರ ಪಾತ್ರವೇ ನಿರ್ಣಾಯಕ. ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತದಾನಕ್ಕೆ ಕರೆತಂದು ಗರಿಷ್ಠ ಪ್ರಮಾಣದಲ್ಲಿ ಮತದಾನ ಆಗುವಂತೆ ಪ್ರಯತ್ನಿಸುವ ಮೂಲಕ ಪಕ್ಷದ ಅಭ್ಯರ್ಥಿಯನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಬೇಕು ಎಂದವರು ಮನವಿ ಮಾಡಿದರು.
ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಪ್ರಾಸ್ತಾವಿಕವಾಗಿ ಮಾತನಾಡಿ, ಮುಂಡರಗಿ ಮತ್ತು ಡಂಬಳ ಮಂಡಲಗಳ ವ್ಯಾಪ್ತಿಯಲ್ಲಿ ಒಟ್ಟು 1,220 ಮತದಾರರಿದ್ದು, ಈಗಾಗಲೇ ಪಕ್ಷದ ಘಟ ನಾಯಕರು ಹಾಗೂ ಕಾರ್ಯಕರ್ತರು ಪ್ರತಿ ಮತದಾರರ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ್ದಾರೆ ಎಂದರ.ಕಾರ್ಯಕ್ರಮದಲ್ಲಿ ಧಾರವಾಡ ಕೆಸಿಸಿ ಬ್ಯಾಂಕ್ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ, ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಜು ಕುರಡಗಿ, ಜಿಲ್ಲಾ ಕಾರ್ಯದರ್ಶಿ ಲಿಂಗರಾಜ ಪಾಟೀಲ ಮಲ್ಲಾಪೂರ, ಜಿಲ್ಲಾ ಉಪಾಧ್ಯಕ್ಷರಾದ ಆನಂದಗೌಡ ಪಾಟೀಮ, ಮಲ್ಲಿಕಾರ್ಜುನ ಹಣಜಿ, ಡಂಬಳ ಮಂಡಲ ಅಧ್ಯಕ್ಷ ಅಂದಪ್ಪ ಹಾರೋಗೇರಿ, ಮಹಿಳಾ ಬಿಜೆಪಿ ಅಧ್ಯಕ್ಷೆ ಪವಿತ್ರಾ ಕಲ್ಲಕುಟಗರ್, ಬಿಜೆಪಿ ಮುಖಂಡರಾದ ಕರಬಸಪ್ಪ ಹಂಚಿನಾಳ, ಎಂ.ಎಸ್.ಕರಿಗೌಡ್ರ, ರವೀಂದ್ರ ಉಪ್ಪಿನಬೆಟಗೇರಿ, ಹೇಮಗಿರೀಶ ಹಾವಿನಾಳ, ಕೊಟ್ರೇಶ ಅಂಗಡಿ, ಎಸ್.ವಿ.ಪಾಟೀಲ, ಜಯತೀರ್ಥ ಕಟ್ಟಿ, ಬಸವರಾಜ ಬಿಳಿಮಗ್ಗದ, ಪ್ರಭು ಕರಮುಡಿ, ಪಂಚಾಕ್ಷರಿ ಹರ್ಲಾಪೂರಮಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಉಮೇಶ ಮಲ್ಲಾಪೂರ ಸ್ವಾಗತಿಸಿ, ಫಕ್ಕೀರೇಶ ರಟ್ಟೀಹಳ್ಳಿ ನಿರೂಪಿಸಿ, ಪ್ರಶಾಂತ ಗುಡದಪ್ಪನವರ ವಂದಿಸಿದರು.