ವಿಧಾನ ಪರಿಷತ್ ಚುನಾವಣೆ: ಮರು ಎಣಿಕೆ ಕುರಿತು ಮುಖಂಡರು, ಕಾರ್ಯಕರ್ತರ ಸಭೆ

KannadaprabhaNewsNetwork |  
Published : Feb 26, 2025, 01:04 AM IST
ಚಿಕ್ಕಮಗಳೂರು ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಭೆ ಸೇರಿ ಮರು ಮತದಾನ ಪ್ರಕ್ರಿಯೆ ಬಗ್ಗೆ ಚರ್ಚಿಸಿದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಫೆ. ೨೮ ರಂದು ವಿಧಾನ ಪರಿಷತ್ ಚುನಾವಣೆ ಮರು ಮತ ಎಣಿಕೆ ನಗರದ ಐಡಿಎಸ್‌ಜಿ ಕಾಲೇಜಿ ನಲ್ಲಿ ನಡೆಯಲಿದ್ದು, ಈ ಸಂಬಂಧ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಭೆ ಸೇರಿ ಮರು ಎಣಿಕೆ ಬಗ್ಗೆ ಪ್ರಕ್ರಿಯೆ ಬಗ್ಗೆ ಚರ್ಚಿಸಿದರು.ಫೆ. ೨೮ ರಂದು ವಿಧಾನ ಪರಿಷತ್ ಚುನಾವಣೆ ಮರು ಮತ ಎಣಿಕೆ ನಗರದ ಐಡಿಎಸ್‌ಜಿ ಕಾಲೇಜಿ ನಲ್ಲಿ ನಡೆಯಲಿದ್ದು, ಈ ಸಂಬಂಧ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಭೆ ಸೇರಿ ಮರು ಎಣಿಕೆ ಬಗ್ಗೆ ಪ್ರಕ್ರಿಯೆ ಬಗ್ಗೆ ಚರ್ಚಿಸಿದರು.

ಮಾ. ೪ರಂದು ಅಂತಿಮ ತೀರ್ಪು

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಫೆ. ೨೮ ರಂದು ವಿಧಾನ ಪರಿಷತ್ ಚುನಾವಣೆ ಮರು ಮತ ಎಣಿಕೆ ನಗರದ ಐಡಿಎಸ್‌ಜಿ ಕಾಲೇಜಿ ನಲ್ಲಿ ನಡೆಯಲಿದ್ದು, ಈ ಸಂಬಂಧ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಭೆ ಸೇರಿ ಮರು ಎಣಿಕೆ ಬಗ್ಗೆ ಪ್ರಕ್ರಿಯೆ ಬಗ್ಗೆ ಚರ್ಚಿಸಿದರು.ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿಯಾಗಿದ್ದ ಎ.ವಿ.ಗಾಯತ್ರಿ ಶಾಂತೇಗೌಡ ಮರು ಮತಎಣಿಕೆ ಬಗ್ಗೆ ವಿವರಿಸಿ ಮಾತನಾಡಿ, ನ್ಯಾಯಾಲಯದ ಅಂತಿಮ ತೀರ್ಪು ಮಾರ್ಚ್ ೦೪ ರಂದು ಬರುವ ತನಕ ಪಕ್ಷದ ಮುಖಂಡರು ಹಾಗೂ ಕಾರ್ಯ ಕರ್ತರು ತಾಳ್ಮೆಯಿಂದ ಇರಬೇಕೆಂದು ಮನವಿ ಮಾಡಿದರು.ಜಿಲ್ಲಾ ಕಾಂಗ್ರೆಸ್ ಹಾಗೂ ಭದ್ರಾ ಕಾಡಾ ನಿಗಮದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿ, ವಿಧಾನ ಪರಿಷತ್ ಮರು ಮತಎಣಿಕೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರ ಗೆಲುವು ಆಗುವರೆಂದು ಆಶಾ ಭಾವನೆ ವ್ಯಕ್ತಪಡಿಸಿದರು.ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಫೆ.೨೮ ರಂದು ನಡೆಯಲಿರುವ ಎಣಿಕೆಯಲ್ಲಿ ಗಾಯತ್ರಿ ಶಾಂತೇಗೌಡ ಜಯಶೀಲರಾಗಲಿದ್ದು, ನಮ್ಮ ಜಿಲ್ಲೆಗೆ ಹೆಚ್ಚಿನ ಶಕ್ತಿ ಬರಲಿದೆ. ಎಲ್ಲರೂ ಸಹನೆಯಿಂದ ಇರಬೇಕೆಂದು ಹೇಳಿದರು.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ಮಾ. ೦೪ ರಂದು ಅಂತಿಮ ತೀರ್ಪು ಬರುವವರೆಗೂ ಕಾರ್ಯಕರ್ತರು ಶಾಂತ ಚಿತ್ತದಿಂದ ಇರುವಂತೆ ತಿಳಿಸಿದರು.ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ, ಡಾ.ಡಿ.ಎಲ್.ವಿಜಯಕುಮಾರ್, ರೇಖಾ ಹುಲಿಯಪ್ಪ ಗೌಡ, ಕೆಫೆಕ್ಸ್ ನಿಗಮ ಅಧ್ಯಕ್ಷ ಬಿ.ಎಚ್‌.ಹರೀಶ್, ಸಿಡಿಎ ಅಧ್ಯಕ್ಷ ನಯಾಜ್ ಅಹಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ನಗರ ಕಾಂಗ್ರೆಸ್ ಅಧ್ಯಕ್ಷ ತನೋಜ್ ಕುಮಾರ್ ನಾಯ್ಡು, ನಗರಸಭಾ ಸದಸ್ಯರು, ವಿವಿಧ ಘಟಕಗಳ ಅಧ್ಯಕ್ಷರು, ನಾಮಿನಿ ಸದಸ್ಯರುಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''