ಕೆದಂಬಾಡಿ ಎಂಆರ್‌ಎಫ್ ಘಟಕಕ್ಕೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಭೇಟಿ

KannadaprabhaNewsNetwork |  
Published : Aug 08, 2025, 02:00 AM IST
ಫೋಟೋ: ೬ಪಿಟಿಆರ್-ಎಂಆರ್ ಎಫ್ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಕೆದಂಬಾಡಿ ಎಂಆರ್‌ಎಫ್ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ಸಮಗ್ರ ಘನತ್ಯಾಜ್ಯ ನಿರ್ವಹಣಾ ಘಟಕವು(ಎಂಆರ್‌ಫ್) ಪುತ್ತೂರು ತಾಲೂಕಿನ ಕೆದಂಬಾಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪುತ್ತೂರು: ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳ ವ್ಯಾಪ್ತಿಯ ೬೮ ಗ್ರಾಮ ಪಂಚಾಯತಿಗಳಿಂದ ಒಣ ಕಸ ಸಂಗ್ರಹಿಸುತ್ತಿರುವ ಸಮಗ್ರ ಘನತ್ಯಾಜ್ಯ ನಿರ್ವಹಣಾ ಘಟಕವು(ಎಂಆರ್‌ಫ್) ಪುತ್ತೂರು ತಾಲೂಕಿನ ಕೆದಂಬಾಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಗ್ರಾಮ ಪಂಚಾಯತಿಗಳಿಂದ ನಿರಂತರವಾಗಿ ಒಣ ಕಸ ಸಂಗ್ರಹಣೆ ಆಗದಿರುವುದರಿಂದ ಉಂಟಾಗುತ್ತಿರುವ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಶೀಲಿಸುವ ಹಾಗೂ ಘಟಕದ ಕಾರ್ಯವೈಖರಿ ಅಧ್ಯಯನ ಮಾಡುವ ಉದ್ದೇಶದಿಂದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭ ಘಟಕದ ಪ್ರಸ್ತುತ ಕಾರ್ಯಾಚರಣೆ, ತಾಂತ್ರಿಕ ಸವಾಲುಗಳು ಹಾಗೂ ನಿರ್ವಹಣಾ ತೊಂದರೆಗಳ ಕುರಿತು ವಿವರ ನೀಡಲಾಯಿತು. ಘಟಕಕ್ಕೆ ಅಗತ್ಯವಿರುವ ತ್ಯಾಜ್ಯ ಸಂಗ್ರಹಣಾ ವಾಹನ ಹಾಗೂ ನಿರಂತರ ವಿದ್ಯುತ್ ಪೂರೈಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ‘ಸ್ವಚ್ಛ ಭಾರತ್’ ಅಭಿಯಾನದ ದೃಷ್ಟಿಕೋನ ಕೇವಲ ಶೌಚಾಲಯ ನಿರ್ಮಾಣಕ್ಕೆ ಮಾತ್ರ ಸೀಮಿತವಲ್ಲ, ಅದು ಸ್ವಚ್ಛತೆ, ಆರೋಗ್ಯ, ಪರಿಸರ ಸಂರಕ್ಷಣೆ ಮತ್ತು ಸ್ಥಳೀಯ ಸಮುದಾಯದ ಹಿತಚಿಂತನೆಯ ದೊಡ್ಡ ದೃಷ್ಟಿಕೋನವಾಗಿದೆ ಎಂದು ತಿಳಿಸಿದರು. ಕೆದಂಬಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತಾ, ಉಪಾಧ್ಯಕ್ಷೆ ಜಯಲಕ್ಷ್ಮಿ, ಸದಸ್ಯರಾದ ರತನ್ ಕುಮಾರ್, ಕೃಷ್ಣ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಜಿತ್ ಕುಮಾರ್, ಪಂಚಾಯತ್ ಸಿಬ್ಬಂದಿ, ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ ಶರತ್ ಕುಮಾರ್ ಹಾಗೂ ಘಟಕದ ವ್ಯವಸ್ಥಾಪಕ ಪ್ರಶಾಂತ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ