ಜಿಲ್ಲೆಯಲ್ಲಿ ಪ್ರತಿ ವರ್ಷ ಎರಡು ವಸತಿ ನಿಲಯಗಳ ನಿರ್ಮಾಣ ಗುರಿ-ಶಾಸಕ ರುದ್ರಪ್ಪ ಲಮಾಣಿ

KannadaprabhaNewsNetwork | Published : Jun 27, 2024 1:02 AM

ಸಾರಾಂಶ

ಹಾವೇರಿ ಜಿಲ್ಲೆಯಲ್ಲಿ ಪ್ರತಿ ವರ್ಷ ಎರಡು ವಸತಿ ನಿಲಯಗಳ ನಿರ್ಮಾಣ ಮಾಡುವ ಗುರಿ ಹೊಂದಲಾಗಿವೆ. ಈ ವರ್ಷ ಮೂರು ವಸತಿ ನಿಲಯಗಳು ನಿರ್ಮಾಣ ಹಂತದಲ್ಲಿವೆ. ಶೀಘ್ರದಲ್ಲಿ ವಸತಿ ನಿಲಯಗಳ ಕಾಮಗಾರಿ ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿ ಕೊಡಲಾಗುವುದು ಎಂದು ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.

ಹಾವೇರಿ: ಜಿಲ್ಲೆಯಲ್ಲಿ ಪ್ರತಿ ವರ್ಷ ಎರಡು ವಸತಿ ನಿಲಯಗಳ ನಿರ್ಮಾಣ ಮಾಡುವ ಗುರಿ ಹೊಂದಲಾಗಿವೆ. ಈ ವರ್ಷ ಮೂರು ವಸತಿ ನಿಲಯಗಳು ನಿರ್ಮಾಣ ಹಂತದಲ್ಲಿವೆ. ಶೀಘ್ರದಲ್ಲಿ ವಸತಿ ನಿಲಯಗಳ ಕಾಮಗಾರಿ ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿ ಕೊಡಲಾಗುವುದು ಎಂದು ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.ನಗರದ ಸೃಷ್ಟಿ ಬಡಾವಣೆಯಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ರು.೩.೩೫.ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾದ ಶ್ರೀ ಡಿ.ದೇವರಾಜ್ ಅರಸು ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುವ ಮೂಲಕ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಡಿ ದೇವರಾಜ್ ಅರಸರ ಅಪಾರ ಕೊಡುಗೆ ನೀಡಿದ್ದಾರೆ. ಅವರ ದೂರದೃಷ್ಟಿಯಿಂದ ಫಲವಾಗಿ ವಿದ್ಯಾರ್ಥಿ ವಸತಿನಿಲಯಗಳನ್ನು ಕಾಣುತ್ತಿದ್ದೇವೆ ಎಂದು ಹೇಳಿದರು.ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜೀಗೌಡ್ರ ಮಾತನಾಡಿ, ವಸತಿ ನಿಲಯಗಳು ವಿದ್ಯಾರ್ಥಿಗಳಿಗೆ ಉತ್ತಮ ಕಲಿಕೆ ಹಾಗೂ ಸಂಸ್ಕಾರ ಬೆಳೆಸಿಕೊಳ್ಳಲು ಸಹಕಾರಿಯಾಗಿವೆ. ಬೇಡಿಕೆ ಇರುವ ವಸತಿ ನಿಲಯಗಳ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದರು.ಧಾರವಾಡ ಕೆ.ಸಿ.ಸಿ.ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ ಮಾತನಾಡಿ, ನಾವೆಲ್ಲರೂ ವಸತಿ ನಿಲಯಗಳಲ್ಲಿದ್ದುಕೊಂಡು ಶಿಕ್ಷಣ ಪಡೆದುಕೊಂಡಿದ್ದೇವೆ. ಆದರೆ ಅಂದು ಇಷ್ಟು ಸೌಕರ್ಯಗಳು ಇರಲಿಲ್ಲ. ಇಂದು ಸರ್ಕಾರ ಉತ್ತಮ ಗುಣಮಟ್ಟದ ವಸತಿ ನಿಲಯಗಳ ನಿರ್ಮಾಣಮಾಡಿದ್ದು, ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಜೊತೆಗೆ ವಸತಿಗೂ ಆದ್ಯತೆ ನೀಡಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉನ್ನತ ಶಿಕ್ಷಣ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರವೀಣ ಕೆ ಎನ್., ತಾಲೂಕಾಧಿಕಾರಿ ಗೀತಾ ಕುಂದಾಪುರ, ಗೃಹ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಮಣ್ಣ ನಂದಿ ಇತರರು ಉಪಸ್ಥಿತರಿದ್ದರು.

Share this article