ಲಿಯೋ ಕ್ಲಬ್‌ನ ಸಮಾಜಮುಖಿ ಕಾರ್ಯ ಶ್ಲಾಘನೀಯ

KannadaprabhaNewsNetwork |  
Published : Aug 11, 2026, 02:00 AM IST
ಹುಬ್ಬಳ್ಳಿಯ ಲಯನ್ಸ್ ಇಂಗ್ಲಿಷ್ ಮೀಡಿಯಂ ಶಾಲೆಯ ಸಭಾಂಗಣದಲ್ಲಿ ಭಾನುವಾರ ನಡೆದ ‘ಹಿಯರ್ ದಿ ಚೇಂಜ್’ ಶ್ರವಣ ಸಾಧನ ವಿತರಣಾ ಕಾರ್ಯಕ್ರಮವನ್ನು ಸ್ವರ್ಣ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ವಿ.ಎಸ್.ವಿ. ಪ್ರಸಾದ ಉದ್ಘಾಟಿಸಿದರು.  | Kannada Prabha

ಸಾರಾಂಶ

ಸ್ವರ್ಣ ಸಮೂಹ ಸಂಸ್ಥೆ ಹಾಗೂ ಲಿಯೋ ಕ್ಲಬ್‌ಗಳು ಜಂಟಿಯಾಗಿ ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆಯಾದ 20 ಅರ್ಹ ಫಲಾನುಭವಿಗಳಿಗೆ ತಲಾ ₹20,999 ಮೌಲ್ಯದ ಅತ್ಯಾಧುನಿಕ ಡಿಜಿಟಲ್ ಶ್ರವಣ ಸಾಧನಗಳನ್ನು ಉಚಿತವಾಗಿ ವಿತರಿಸಿವೆ.

ಹುಬ್ಬಳ್ಳಿ:

ಲಿಯೋ ಕ್ಲಬ್ ಆಫ್ ಹುಬ್ಬಳ್ಳಿ ಸದಾ ಜನಸಾಮಾನ್ಯರಿಗೆ ನೆರವಾಗುವ ಸಮಾಜಮುಖಿ ಕಾರ್ಯ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ಸ್ವರ್ಣ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ವಿ.ಎಸ್.ವಿ. ಪ್ರಸಾದ ಹೇಳಿದರು.

ನಗರದ ಲಯನ್ಸ್ ಇಂಗ್ಲಿಷ್ ಮೀಡಿಯಂ ಶಾಲೆಯ ಸಭಾಂಗಣದಲ್ಲಿ ಭಾನುವಾರ ಲಿಯೋ ಕ್ಲಬ್ ಆಫ್ ಹುಬ್ಬಳ್ಳಿ ಹಾಗೂ ಸ್ವರ್ಣ ಸಮೂಹ ಸಂಸ್ಥೆಯ ಸಹಯೋಗದಲ್ಲಿ ಎಸ್‌ಡಿಎಂ ಆಸ್ಪತ್ರೆಯ ಸ್ಪೀಚ್ ಆ್ಯಂಡ್ ಹಿಯರಿಂಗ್ ವಿಭಾಗದ ವತಿಯಿಂದ ಆಯೋಜಿಸಿದ್ದ ‘ಹಿಯರ್ ದಿ ಚೇಂಜ್’ ಶ್ರವಣ ಸಾಧನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸ್ವರ್ಣ ಸಮೂಹ ಸಂಸ್ಥೆ ಹಾಗೂ ಲಿಯೋ ಕ್ಲಬ್‌ಗಳು ಜಂಟಿಯಾಗಿ ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆಯಾದ 20 ಅರ್ಹ ಫಲಾನುಭವಿಗಳಿಗೆ ತಲಾ ₹20,999 ಮೌಲ್ಯದ ಅತ್ಯಾಧುನಿಕ ಡಿಜಿಟಲ್ ಶ್ರವಣ ಸಾಧನಗಳನ್ನು ಉಚಿತವಾಗಿ ವಿತರಿಸಿವೆ. ಒಟ್ಟು ₹4,19,980 ಮೌಲ್ಯದ ಸಾಧನಗಳನ್ನು ನೆರವಿನ ರೂಪದಲ್ಲಿ ನೀಡಲಾಗಿದೆ ಎಂದರು.

ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ ಅತಿಥಿಯಾಗಿ ಪಾಲ್ಗೊಂಡಿದ್ದರು. ಎಸ್‌ಡಿಎಂ ಸ್ವಿಚ್ ಆ್ಯಂಡ್ ಹಿಯರಿಂಗ್ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ. ವಸೀಮ್, ವೇಮನ್ ಮಂಕಾಣಿ, ಲಯನ್ಸ್ ಕ್ಲಬ್ ಆಫ್ ಹುಬ್ಬಳ್ಳಿ ಸಿಟಿ ಅಧ್ಯಕ್ಷ ಲಯನ್ ಎಸ್.ಆರ್. ಓಂಕಾರಿ, ಲಿಯೋ ಕ್ಲಬ್ ಆಫ್ ಹುಬ್ಬಳ್ಳಿ ಅಧ್ಯಕ್ಷ ಮುರಳೀಧರ ದಿವಟೆ, ಟೆರನ್ಸ್ ಇರ್ಕಲ್, ಸಂಯೋಜಕ ಆರ್ಯನ್ ಹಿರೇಗೌಡರ, ಪ್ರಜ್ವಲ್ ಹರವಿ, ಓಂಕಾರ ಹರ್ಲಾಪುರ, ಚಿರಾಗ್ ಕಲಾಲ್ ಸೇರಿ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀರ್ಘ ಹೋರಾಟಕ್ಕೆ ಇಲ್ಲ ನ್ಯಾಯ: ಮಂತ್ರಿ, ಶಾಸಕರನ್ನು ನಿಲ್ಲಿಸಿ ಕೇಳೋಣ
ಗುತ್ತಿಗೆ ಕಾರ್ಮಿಕರ ಸೇವೆ ಕಾಯಂ ಮಾಡಿ: ಸಿಐಟಿಯು ಪ್ರತಿಭಟನೆ