ಬಸಪ್ಪನ ದೊಡ್ಡಿಯಲ್ಲಿ ಚಿರತೆ ದಾಳಿ: ನಾಲ್ಕು ಮೇಕೆಗಳು ಬಲಿ

KannadaprabhaNewsNetwork |  
Published : Sep 24, 2026, 01:45 AM IST
ಬಸಪ್ಪನ ದೊಡ್ಡಿಯಲ್ಲಿ ಚಿರತೆ ದಾಳಿ: ನಾಲ್ಕು ಮೇಕೆಗಳು ಬಲಿ .. | Kannada Prabha

ಸಾರಾಂಶ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಅಧಿಕಾರಿಗಳಾದ ಡಿ.ಆರ್.ಎಸ್. ನಂದೀಶ್ ಮತ್ತು ಅವರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲೇ ಮಹಜರು ನಡೆಸಿ, ಸಂತ್ರಸ್ತ ರೈತ ಮಹಿಳೆಗೆ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಹನೂರು

ತಾಲೂಕಿನ ಬಸಪ್ಪನ ದೊಡ್ಡಿ ಗ್ರಾಮದಲ್ಲಿ ಚಿರತೆ ದಾಳಿ ಮಾಡಿ ನಾಲ್ಕು ಮೇಕೆಗಳನ್ನು ಬಲಿ ಪಡೆದಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.

ಗ್ರಾಮದ ಶಿವಮ್ಮ ಕೋಂ ಚೆನ್ನೇಗೌಡ ಅವರಿಗೆ ಸೇರಿದ ಮೇಕೆಗಳಾಗಿದ್ದು ಸ್ಥಳದಲ್ಲಿಯೇ ಮೃತಪಟ್ಟಿವೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಅಧಿಕಾರಿಗಳಾದ ಡಿ.ಆರ್.ಎಸ್. ನಂದೀಶ್ ಮತ್ತು ಅವರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲೇ ಮಹಜರು ನಡೆಸಿ, ಸಂತ್ರಸ್ತ ರೈತ ಮಹಿಳೆಗೆ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

ಅರಣ್ಯದಂಚಿನ ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ರಾತ್ರಿ ವೇಳೆ ಜಾನುವಾರುಗಳನ್ನು ಸುರಕ್ಷಿತ ಸ್ಥಳದಲ್ಲಿ ಕಟ್ಟುವಂತೆ ಹಾಗೂ ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮಸ್ಥರಿಗೆ ಸೂಚನೆ ನೀಡಿದ್ದಾರೆ.

ಪರಿಹಾರಕ್ಕೆ ಅಗ್ರಹ: ಕಷ್ಟಪಟ್ಟು ಜೀವನ ನಿರ್ವಹಣೆಗಾಗಿ ಸಾಕಣೆ ಮಾಡಲಾಗುತ್ತಿದ್ದ ಮೇಕೆಗಳ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವುದರಿಂದ ರೈತರಿಗೆ ನಷ್ಟ ಉಂಟಾಗಿದೆ. ಅರಣ್ಯ ಇಲಾಖೆ ಸೂಕ್ತ ಪರಿಹಾರ ನೀಡಬೇಕು ಜೊತೆಗೆ ಕ್ರೂರ ಪ್ರಾಣಿಗಳು ರೈತರ ಜಮೀನಿಗೆ ಬರದಂತೆ ಎಚ್ಚರಿಕೆವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡ ಅಮ್ಜಾದ್ ಖಾನ್ ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನ ಸಮಸ್ಯೆ ಪರಿಹಾರಕ್ಕೆ ಡಿಸಿ ಸೂಚನೆ
ತರಳಬಾಳು ಸಂಸ್ಥೆಯಲ್ಲಿ ಸಮಗ್ರ ಬದುಕು ರೂಪಿಸುವ ಶಿಕ್ಷಣ: ಬಸವ ಮರುಳಸಿದ್ಧ ಸ್ವಾಮೀಜಿ