ಚಿರತೆ ದಾಳಿ: ಅರ್ಚಕ ಸ್ಥಳದಲ್ಲೇ ಸಾವು

KannadaprabhaNewsNetwork |  
Published : Oct 13, 2026, 01:30 AM IST
1) ಚಿರತೆ ದಾಳಿಯಿಂದ ಮೃತ ಪಟ್ಟ ಪ್ರಧಾನ ಆರ್ಚಕ ಶಿವಸ್ವಾಮಿ.2) ಮಾಗಡಿ ತಾಲೂಕಿನ ಕಲ್ಲುದೇವನಹಳ್ಳಿ ಗ್ರಾಮಕ್ಕೆ ಮಾಜಿ ಶಾಸಕ ಎ ಮಂಜುನಾಥ್ ಭೇಟಿ ನೀಡಿ  | Kannada Prabha

ಸಾರಾಂಶ

ಮಾಗಡಿ: ತಾಲೂಕಿನ ಕಲ್ಲುದೇವನಹಳ್ಳಿ ಗ್ರಾಮದ ಮಹದೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಶಿವಸ್ವಾಮಿ ಮೇಲೆ ಚಿರತೆ ದಾಳಿಗೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ

ಮಾಗಡಿ: ತಾಲೂಕಿನ ಕಲ್ಲುದೇವನಹಳ್ಳಿ ಗ್ರಾಮದ ಮಹದೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಶಿವಸ್ವಾಮಿ ಮೇಲೆ ಚಿರತೆ ದಾಳಿಗೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಾದೇಶ್ವರಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ಶಿವಸ್ವಾಮಿ ಮುಂಜಾನೆ 6 ಗಂಟೆಗೆ ಪೂಜೆಗೆ ಜಮೀನಿನಲ್ಲಿದ್ದ ಹೂವು ಕೊಯ್ಯಲು ಹೋಗಿದ್ದ ಸಂದರ್ಭದಲ್ಲಿ ಏಕಾಏಕಿ ನುಗ್ಗಿದ ಚಿರತೆ ದಾಳಿ ಮಾಡಿದೆ. ಕುತ್ತಿಗೆ ಹಾಗೂ ಕೈ ಭಾಗಕ್ಕೆ ತೀವ್ರವಾಗಿ ಕಚ್ಚಿ, 10 ಅಡಿಗಳಷ್ಟು ದೂರ ಎಳೆದೊಯ್ದ ಪರಿಣಾಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಬೆಳಗ್ಗೆ ಹಾಲು ಹಾಕಲು ತೆರಳುತ್ತಿದ್ದ ಸ್ಥಳೀಯರು, ಜಮೀನಿನಲ್ಲಿ ಅರ್ಚಕರು ಮಲಗಿರುವುದನ್ನು ಕಂಡು ಮಾತನಾಡಿಸಲು ಯತ್ನಿಸಿದ್ದು, ಯಾವುದೇ ಪ್ರತಿಕ್ರಿಯೆ ಬರದಿದ್ದಾಗ ಹತ್ತಿರ ಹೋಗಿ ನೋಡಿದರೆ ರಕ್ತದ ಮಡುವಿನಲ್ಲಿರುವುದು ತಿಳಿದಿದೆ. ತಕ್ಷಣವೇ ಆತ ಗ್ರಾಮಸ್ಥರಿಗೆ ಹಾಗೂ ಅರಣ್ಯ ಮತ್ತು ಪೊಲೀಸ್ ಇಲಾಖೆಗೆ ಮಾಹಿತಿ ಮುಟ್ಟಿಸಿದ್ದಾನೆ.

ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಕೂಡಲೇ ಚಿರತೆ ಸೆರೆಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಮಾಜಿ ಶಾಸಕ ಎ.ಮಂಜುನಾಥ್ ಆಗಮಿಸಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಮಾತನಾಡಿ, ನಾನು ಶಾಸಕನಾಗಿದ್ದ ಅವಧಿಯಲ್ಲೂ ಎರಡು ಭೀಕರ ಘಟನೆಗಳು ನಡೆದಿದ್ದವು. ಸೋಲೂರು ಹೋಬಳಿಯಲ್ಲಿ ವೃದ್ಧೆ ಹಾಗೂ ಮಗುವನ್ನು ಚಿರತೆ ಎಳೆದೊಯ್ದು ಕೊಂದಿತ್ತು. ಇಂತಹ ನರಭಕ್ಷಕ ಪ್ರಾಣಿಗಳ ವಿರುದ್ಧ ತುರ್ತು ಕ್ರಮ ಕೈಗೊಳ್ಳಬೇಕಾದ ಅರಣ್ಯ ಇಲಾಖೆ ಕಣ್ಮುಚ್ಚಿ ಕುಳಿತಿದೆ ಎಂದು ಹರಿಹಾಯ್ದರು.

ಘಟನಾ ಸ್ಥಳಕ್ಕೆ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಚ್.ಎನ್.ಅಶೋಕ್ ಆಗಮಿಸಿ ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿ, ರೈತರು ಚಿರತೆ ಹಾವಳಿ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಿದ ತಕ್ಷಣವೇ ಇಲಾಖೆ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅರಣ್ಯ ಅಧಿಕಾರಿಗಳು ನಿರ್ಲಕ್ಷ ಮಾಡಬಾರದು ವಾಚರ್‌ಗಳು ಪ್ರತಿ ದಿನ ದೂರು ಬಂದ ಸಮಯದಲ್ಲಿ ಆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.

ಮೃತರ ಅಗತ್ಯ ಮಾದರಿಗಳನ್ನು ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಅಲ್ಲಿಂದ ವರದಿ ಬಂದ ನಂತರವಷ್ಟೇ ಸತ್ಯಾಂಶ ಗೊತ್ತಾಗಲಿದೆ. ಒಂದು ವೇಳೆ ವನ್ಯಜೀವಿ ದಾಳಿಯಿಂದ ಸಾವು ಸಂಭವಿಸಿರುವುದು ದೃಢಪಟ್ಟರೆ, ಸರ್ಕಾರದ ನಿಯಮಾನುಸಾರ ಮೃತರ ಕುಟುಂಬಕ್ಕೆ ೨೦ ಲಕ್ಷ ರು. ಪರಿಹಾರ ನೀಡಲಾಗುವುದು ಎಂಐಎಫ್ಎಸ್

ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಮಕೃಷ್ಣಪ್ಪ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರ ಸಚಿವ ವಿ.ಸೋಮಣ್ಣ ಕಾರಿಗೆ ಮುತ್ತಿಗೆ ಯತ್ನ
ಬಿಎಸ್‌ಸಿ ಕುಟುಂಬದ ಶ್ರಮ ನಿಜಕ್ಕೂ ಶ್ಲಾಘನೀಯ: ಬಿ.ಎಸ್. ಯಡಿಯೂರಪ್ಪ