ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌತಹಳ್ಳಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳಾ ಕೂಲಿ ಕಾರ್ಮಿಕರ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ನಡೆದಿದೆ.
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌತಹಳ್ಳಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳಾ ಕೂಲಿ ಕಾರ್ಮಿಕರ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ನಡೆದಿದೆ.
ದಾಳಿಗೆ ಒಳಗಾದ ಸುಲ್ತಾನ್ (30) ಮತ್ತು ಸಬೀನಾ (28) ಅಸ್ಸಾಂ ಮೂಲದವರಾಗಿದ್ದು. ಸೋಮವಾರ ಬೆಳಗ್ಗೆ 8.30ರ ಸುಮಾರಿನಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇವರ ಮೇಲೆ ಚಿರತೆ ದಾಳಿ ಮಾಡಿದೆ. ದಾಳಿಯಿಂದ ಮಹಿಳೆಯರ ಕಾಲು ಮತ್ತು ಕೈಗಳಿಗೆ ಗಾಯವಾಗಿದ್ದು, ಚಿಕ್ಕಮಗಳೂರು ನಗರದಲ್ಲಿರುವ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ನೀಡಿರುವ ವೈದ್ಯರು ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ ಎಂದು ತೋಟದ ಮಾಲೀಕರು ಮಾಹಿತಿ ನೀಡಿದ್ದಾರೆ.
ಚಿರತೆ ದಾಳಿಗೆ ಒಳಗಾದ ಕೂಲಿ ಕಾರ್ಮಿಕ ಮಹಿಳೆಯರ ಪೈಕಿ ಸುಲ್ತಾನ್ ಗರ್ಭಿಣಿ ಎಂದು ತಿಳಿದು ಬಂದಿದೆ.
ಘಟನೆ ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ದಾಳಿಯಿಂದ ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದ್ದು, ಚಿರತೆಯನ್ನು ಕೂಡಲೇ ಸೆರೆ ಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಕಳೆದ ಬಾರಿ ಇದೇ ಗೌತಹಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿ ನಡೆದಿತ್ತು. ಇದೀಗ ಚಿರತೆ ದಾಳಿ ಆಗಿದೆ. ಈ ಘಟನೆಯಿಂದ ಮೂಡಿಗೆರೆ ತಾಲೂಕಿನಲ್ಲಿ ಮತ್ತೆ ಭೀತಿ ಹೆಚ್ಚಿಸಿದ್ದು, ಕಾರ್ಮಿಕರು ಹಾಗೂ ಗ್ರಾಮಸ್ಥರು ಆತಂಕದಲ್ಲಿದ್ದಾರೆ.
-- ಬಾಕ್ಸ್ --ಆರೋಗ್ಯ ವಿಚಾರಿಸಿದ ಸಿ.ಟಿ.ರವಿಸೋಮವಾರ ಗೌತಹಳ್ಳಿಯಲ್ಲಿ ಚಿರತೆ ದಾಳಿಗೆ ಒಳಗಾದ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು ಸಿ.ಟಿ.ರವಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ವೇಳೆ ಚಿರತೆ ದಾಳಿಗೆ ಒಳಗಾದವರ ಆರೋಗ್ಯವನ್ನು ವಿಚಾರಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.