ಗೌತವಳ್ಳಿ ಗ್ರಾಮವು ಬೇಲೂರು ತಾಲೂಕಿನ ಮಾಡಗೋಡು – ಚುಂಗನಹಳ್ಳಿ ಗಡಿ ವ್ಯಾಪ್ತಿಗೆ ಸೇರಿದ್ದು, ಅರಣ್ಯ ಪ್ರದೇಶಕ್ಕೆ ಸಮೀಪದಲ್ಲಿರುವುದರಿಂದ ಚಿರತೆಗಳ ಸಂಚಾರ ಹೆಚ್ಚಾಗಿದೆ. ತಾಲೂಕಿನ ಗೌತವಳ್ಳಿ ಗ್ರಾಮದ ಎಬಿಸಿ ಚಂದ್ರೇಗೌಡ ಎಂಬುವವರ ಕಾಫಿ ತೋಟದಲ್ಲಿ ಬೆಳಿಗ್ಗೆ ಕೂಲಿ ಕಾರ್ಮಿಕರು ಸುಣ್ಣ ಚೆಲ್ಲುವ ಕೆಲಸದಲ್ಲಿ ತೊಡಗಿದ್ದಾಗ, ತೋಟದೊಳಗಿನಿಂದ ಏಕಾಏಕಿ ಎರಡು ಚಿರತೆಗಳು ದಾಳಿ ನಡೆಸಿವೆ. ಈ ದಾಳಿಯಲ್ಲಿ ಸುಲ್ತಾನ ಹಾಗೂ ಸಬೀನಾ ಎಂಬ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿರತೆಗಳ ದಾಳಿಯಿಂದ ಕಾರ್ಮಿಕರು ನೆಲಕ್ಕೆ ಬಿದ್ದಿದ್ದು, ಅವರ ಕೂಗು ಕೇಳಿ ಇತರ ಕಾರ್ಮಿಕರು ಧಾವಿಸಿ ಬಂದು ಚಿರತೆಗಳನ್ನು ಓಡಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೇಲೂರು
ತಾಲೂಕಿನ ಗಡಿ ಗ್ರಾಮವಾದ ಗೌತಹಳ್ಳಿಯಲ್ಲಿ ಸೋಮವಾರ ಬೆಳಿಗ್ಗೆ ಇಬ್ಬರು ಕೂಲಿ ಕಾರ್ಮಿಕರ ಮೇಲೆ ಚಿರತೆ ದಾಳಿ ಮಾಡಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.ಗೌತವಳ್ಳಿ ಗ್ರಾಮವು ಬೇಲೂರು ತಾಲೂಕಿನ ಮಾಡಗೋಡು – ಚುಂಗನಹಳ್ಳಿ ಗಡಿ ವ್ಯಾಪ್ತಿಗೆ ಸೇರಿದ್ದು, ಅರಣ್ಯ ಪ್ರದೇಶಕ್ಕೆ ಸಮೀಪದಲ್ಲಿರುವುದರಿಂದ ಚಿರತೆಗಳ ಸಂಚಾರ ಹೆಚ್ಚಾಗಿದೆ. ತಾಲೂಕಿನ ಗೌತವಳ್ಳಿ ಗ್ರಾಮದ ಎಬಿಸಿ ಚಂದ್ರೇಗೌಡ ಎಂಬುವವರ ಕಾಫಿ ತೋಟದಲ್ಲಿ ಬೆಳಿಗ್ಗೆ ಕೂಲಿ ಕಾರ್ಮಿಕರು ಸುಣ್ಣ ಚೆಲ್ಲುವ ಕೆಲಸದಲ್ಲಿ ತೊಡಗಿದ್ದಾಗ, ತೋಟದೊಳಗಿನಿಂದ ಏಕಾಏಕಿ ಎರಡು ಚಿರತೆಗಳು ದಾಳಿ ನಡೆಸಿವೆ. ಈ ದಾಳಿಯಲ್ಲಿ ಸುಲ್ತಾನ ಹಾಗೂ ಸಬೀನಾ ಎಂಬ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿರತೆಗಳ ದಾಳಿಯಿಂದ ಕಾರ್ಮಿಕರು ನೆಲಕ್ಕೆ ಬಿದ್ದಿದ್ದು, ಅವರ ಕೂಗು ಕೇಳಿ ಇತರ ಕಾರ್ಮಿಕರು ಧಾವಿಸಿ ಬಂದು ಚಿರತೆಗಳನ್ನು ಓಡಿಸಿದ್ದಾರೆ.
ಗಾಯಗೊಂಡ ಇಬ್ಬರನ್ನೂ ತಕ್ಷಣವೇ ಸ್ಥಳೀಯರ ಸಹಕಾರದಿಂದ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿರುವುದರಿಂದ ವೈದ್ಯರು ಹೆಚ್ಚಿನ ನಿಗಾವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆಗಳ ಸಂಚಾರ ಇರುವುದರಿಂದ ತೋಟ ಪ್ರದೇಶಗಳಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರು ಹಾಗೂ ಗ್ರಾಮಸ್ಥರು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ. ಜೊತೆಗೆ, ಚಿರತೆಗಳನ್ನು ಹಿಡಿದು ಸುರಕ್ಷಿತವಾಗಿ ಸ್ಥಳಾಂತರಿಸುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.ಈ ಚಿರತೆ ದಾಳಿಯಿಂದ ಗೌತವಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಯದ ವಾತಾವರಣವಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಮಯದಲ್ಲಿ ತೋಟದ ಕೆಲಸಕ್ಕೆ ತೆರಳಲು ಜನರು ಹಿಂಜರಿಯುತ್ತಿದ್ದಾರೆ. ಅರಣ್ಯ ಇಲಾಖೆ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.