ಮಳಗಾಳು ಗ್ರಾಮದಲ್ಲಿ ಚಿರತೆ ಸೆರೆ

KannadaprabhaNewsNetwork |  
Published : May 17, 2026, 01:15 AM IST
16ಕೆಆರ್ ಎಂಎನ್ 6.ಜೆಪಿಜಿಚಿರತೆ ಬೋನಿನಲ್ಲಿ ಸೆರೆಯಾಗಿರುವುದು. | Kannada Prabha

ಸಾರಾಂಶ

ಕನಕಪುರ : 15 ಅಡಿ ಎತ್ತರದ ಕಾಂಪೌಂಡ್ ಹಾರಿ ಮೇಕೆ, ಕುರಿಗಳ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿರುವ ಘಟನೆ ತಾಲೂಕಿನ ಮಳಗಾಳು ಗ್ರಾಮದಲ್ಲಿ ನಡೆದಿದೆ

ಕನಕಪುರ : 15 ಅಡಿ ಎತ್ತರದ ಕಾಂಪೌಂಡ್ ಹಾರಿ ಮೇಕೆ, ಕುರಿಗಳ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿರುವ ಘಟನೆ ತಾಲೂಕಿನ ಮಳಗಾಳು ಗ್ರಾಮದಲ್ಲಿ ನಡೆದಿದೆ.

ಕಳೆದ ಮೂರು ದಿನಗಳ ಹಿಂದೆ ಗ್ರಾಮದ ರೈತ ರಾಕೇಶ್ ಎಂಬವರ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕುರಿ, ಮೇಕೆಗಳ ಮೇಲೆ ದಾಳಿ ಮಾಡಿದ್ದ ಪರಿಣಾಮ ಎರಡು ಕುರಿ, ಎರಡು ಮೇಕೆಗಳನ್ನ ಕೊಂದುಹಾಕಿತ್ತು. 15 ಅಡಿ ಎತ್ತರದ ಕಾಂಪೌಂಡ್ ಇದ್ದರೂ ಕೂಡಾ ಚಿರತೆ ಕೊಟ್ಟಿಗೆಗೆ ನುಗ್ಗಿ ದಾಳಿ ಮಾಡಿದೆ.

ಇನ್ನೂ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ ವೇಳೆ ಗ್ರಾಮಸ್ಥರು ಚಿರತೆ ಸೆರೆಗೆ ಒತ್ತಾಯಿಸಿದ್ದರು. ಶುಕ್ರವಾರ ಮಾಳಗಾಳು ಗ್ರಾಮದ ಹೊರವಲಯದಲ್ಲಿ ಅರಣ್ಯಾಧಿಕಾರಿಗಳು ಬೋನ್ ಅಳವಡಿಸಿದ್ದರು. ಇಂದು ಅರಣ್ಯ ಇಲಾಖೆ ಬೋನಿಗೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದ್ದು, ಚಿರತೆ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

16ಕೆಆರ್ ಎಂಎನ್ 6.ಜೆಪಿಜಿ

ಚಿರತೆ ಬೋನಿನಲ್ಲಿ ಸೆರೆಯಾಗಿರುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಠ್ಯೇತರ ಚಟುವಟಿಕೆಗಳು ನಾಯಕತ್ವ ಗುಣ ಬೆಳೆಸುತ್ತದೆ
ರೈತರಲ್ಲಿ ಸಂತಸ ತಂದ ಬೀನ್ಸ್, ಸೌತೆಕಾಯಿ