ನಂದಿಗಿರಿಧಾಮದಲ್ಲಿ ಚಿರತೆ ಪ್ರತ್ಯಕ್ಷ

KannadaprabhaNewsNetwork |  
Published : Sep 03, 2025, 01:00 AM IST

ಸಾರಾಂಶ

ನಂದಿ ಬೆಟ್ಟದ ಕ್ರಾಸ್​​ನಿಂದ ಚಿಕ್ಕಬಳ್ಳಾಪುರದ ಕಡೆ ಬರುವ ರಸ್ತೆಯಲ್ಲಿ ಸ್ಥಳೀಯ ನಿವಾಸಿಗಳಿಗೆ ಇತ್ತೀಚೆಗೆ ಚಿರತೆ ಕಾಣಿಸಿಸಿದೆ. ಚಿಕ್ಕಬಳ್ಳಾಪುರದ ನಿವಾಸಿಯೊಬ್ಬರು ನಂದಿಗಿರಿಧಾಮಕ್ಕೆ ಹೋಗಿ ವಾಪಸ್ ಬರುವಾಗ ಅವರ ಕಾರಿಗೆ ಚಿರತೆ ಅಡ್ಡ ಬಂದಿದೆ. ಈಗ ಚಿಕ್ಕಬಳ್ಳಾಪುರ- ನಂದಿಗಿರಿಧಾಮದ ರಸ್ತೆಯಲ್ಲಿ ರಾತ್ರಿಯಾದರೆ ಬೈಕ್ ಸವಾರರು ರಸ್ತೆಯಲ್ಲಿ ಸಂಚಾರ ಮಾಡುವುದನ್ನೇ ಬಿಟ್ಟಿದ್ದಾರೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ವಿಶ್ವವಿಖ್ಯಾತ ಪ್ರವಾಸಿತಾಣ ನಂದಿಗಿರಿಧಾಮದಲ್ಲಿ ಪ್ರವಾಸಿಗರೊಬ್ಬರಿಗೆ ಚಿರತೆ ಕಾಣಿಸಿಕೊಂಡಿದೆ. ಚಿರತೆ ಪ್ರತ್ಯಕ್ಷ ದಿಂದ ಪ್ರವಾಸಿಗರು ಮತ್ತು ಸ್ಥಳೀಯರಲ್ಲಿ ಆತಂಕ ಉಂಟಾಗಿದೆ.

ವಾರಾಂತ್ಯ ಬಂತೆಂದರೆ ಸಾಕು, ಬೆಂಗಳೂರಿನ ಹೆಚ್ಚಿನವರು ಭೇಟಿ ನೀಡುವ ನೆಚ್ಚಿನ ತಾಣ ತಾಲೂಕಿನ ವಿಶ್ವವಿಖ್ಯಾತ ಪ್ರವಾಸಿತಾಣ ನಂದಿಗಿರಿಧಾಮವಾಗಿದೆ. ಆದರೆ, ಇದೀಗ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ನಂದಿಗಿರಿಧಾಮಕ್ಕೆ ಸಂಜೆ ವೇಳೆ ಅಥವಾ ಮುಂಜಾನೆ ಹೋಗುವುದಾದರೆ, ಅದೂ ದ್ವಿಚಕ್ರ ವಾಹನದಲ್ಲಿ ಹೋಗುವುದಾದರೆ ಬಹಳ ಎಚ್ಚರಿಕೆ ಅಗತ್ಯ.

ಬೈಕ್‌ ಸವಾರರಿಗೆ ಭೀತಿ

ಬೆಟ್ಟದ ಕ್ರಾಸ್​​ನಿಂದ ಚಿಕ್ಕಬಳ್ಳಾಪುರದ ಕಡೆ ಬರುವ ರಸ್ತೆಯಲ್ಲಿ ಸ್ಥಳೀಯ ನಿವಾಸಿಗಳಿಗೆ ಇತ್ತೀಚೆಗೆ ಚಿರತೆ ಕಾಣಿಸಿಸಿದೆ. ಚಿಕ್ಕಬಳ್ಳಾಪುರದ ನಿವಾಸಿಯೊಬ್ಬರು ನಂದಿಗಿರಿಧಾಮಕ್ಕೆ ಹೋಗಿ ವಾಪಸ್ ಬರುವಾಗ ಅವರ ಕಾರಿಗೆ ಚಿರತೆ ಅಡ್ಡ ಬಂದಿದೆ. ಈಗ ಚಿಕ್ಕಬಳ್ಳಾಪುರ- ನಂದಿಗಿರಿಧಾಮದ ರಸ್ತೆಯಲ್ಲಿ ರಾತ್ರಿಯಾದರೆ ಬೈಕ್ ಸವಾರರು ರಸ್ತೆಯಲ್ಲಿ ಸಂಚಾರ ಮಾಡುವುದನ್ನೇ ಬಿಟ್ಟಿದ್ದಾರೆ. ರಾತ್ರಿಯಾದರೆ ಸಾಕು ಚಿರತೆ ಭೀತಿ ಕಾಡುತ್ತಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

ಇತ್ತೀಚಿಗೆ ತಾಲೂಕಿನ ವರ್ಲಕೊಂಡ ಬೆಟ್ಟದ ಬಳಿ, ಚಿರತೆಗಳ ಹಿಂಡು ಪ್ರತ್ಯೇಕ್ಷವಾಗಿ ರೈತರೊಬ್ಬರ ಮೇಲೆ ದಾಳಿ ಮಾಡಿತ್ತು. ಅದಾದ ನಂತರ ತಪ್ಪಿಸಿಕೊಂಡಿದ್ದ ಕೆಲವು ಚಿರತೆಗಳು ಎಲ್ಲಿವೆ ಎಂಬ ಮಾಹಿತಿ ತಿಳಿದಿರಲಿಲ್ಲ. ಆದರೆ, ಈಗ ನಂದಿಗಿರಿಧಾದ ಸುತ್ತಮುತ್ತ ಚಿರತೆಗಳು ಗಿರಕಿ ಹೊಡೆಯುತ್ತಿವೆ. ಅಲ್ಲಲ್ಲಿ ಸ್ಥಳೀಯರ ಕಣ್ಣಿಗೆ ಕಾಣಿಸುತ್ತಿವೆ.

ತಾಲೂಕಿನ ವಿವಿಧೆಡೆ ಪ್ರತ್ಯಕ್ಷ

ತಾಲೂಕಿನ ಅಂಗಟ್ಟ, ಈರೇನಹಳ್ಳಿ ಸೇರಿದಂತೆ ಮೊಕ್ಷಗುಂಡಂ ಸರ್ ಎಂ. ವಿಶ್ವೇಶ್ವರಯ್ಯ ಮಾಸ್ಟರ್ ತರಬೇತಿ ಕೇಂದ್ರದ ಸುತ್ತಮುತ್ತ ಚಿರತೆಗಳು ಜನರಿಗೆ ಕಾಣಸಿಗುತ್ತಿವೆ. ಇದರಿಂದ ಸ್ಥಳೀಯರು ಸಂಜೆಯಾದ ನಂತರ ಮನೆಯಿಂದ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ. ಚಿರತೆಗಳನ್ನು ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಸಹ ಮಾಡಿದ್ದಾರೆ. ಚಿರತೆಗಳು ಪ್ರವಾಸಿಗರು ಹಾಗೂ ಸ್ಥಳಿಯರ ಮೇಲೆ ದಾಳಿ ಮಾಡುವುದಕ್ಕೂ ಮುನ್ನ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಚಿರತೆಗಳ ಸೆರೆ ಹಿಡಿಯಬೇಕಿದೆ.

PREV

Recommended Stories

ಜಾಗತಿಕ ಮಟ್ಟದಲ್ಲಿ ಸಾಧನೆ ನಾರಿ ಶಕ್ತಿಗೆ ಸಾಕ್ಷಿ
ಮಕ್ಕಳ ಕಲಿಕೆಯನ್ನು ಸೃಜನಾತ್ಮಕವಾಗಿಸಲು ನಲಿ-ಕಲಿ