ರೈತರು, ರಾಸುಗಳಿಗೆ ಕಂಟಕವಾಗಿದ್ದ ಚಿರತೆ ಬೋನಿನಲ್ಲಿ ಸೆರೆ

KannadaprabhaNewsNetwork |  
Published : Jul 14, 2026, 01:45 AM IST
13ಕೆಎಂಎನ್ ಡಿ16 | Kannada Prabha

ಸಾರಾಂಶ

ರೈತರ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿ ಕೊಂದು ತಿಂದು ಹಾಕುತ್ತಿದ್ದ ಚಿರತೆ ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿನಲ್ಲಿ ಸೆರೆಯಾಗಿರುವ ಘಟನೆ ಕಿಕ್ಕೇರಿ ಹೋಬಳಿಯ ಗೊಲ್ಲರಕೊಪ್ಪಲು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಕಿಕ್ಕೇರಿ:

ರೈತರ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿ ಕೊಂದು ತಿಂದು ಹಾಕುತ್ತಿದ್ದ ಚಿರತೆ ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿನಲ್ಲಿ ಸೆರೆಯಾಗಿರುವ ಘಟನೆ ಹೋಬಳಿಯ ಗೊಲ್ಲರಕೊಪ್ಪಲು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಗ್ರಾಮದ ದಿನೇಶ್‌ ಅವರ ಜಮೀನು ಬಳಿ ಅರಣ್ಯ ಇಲಾಖೆ ಇರಿಸಲಾಗಿದ್ದ ಬೋನಿನಲ್ಲಿ ಸುಮಾರು 5 ವರ್ಷದ ಗಂಡು ಚಿರತೆ ಸೆರೆಯಾಗಿದ್ದು, ಈ ಚಿರತೆ ಗೊಲ್ಲರಕೊಪ್ಪಲು, ತೆಂಗಿನಘಟ್ಟ, ಗೋವಿಂದನಹಳ್ಳಿ ಸುತ್ತಮುತ್ತಲ ಪ್ರದೇಶದಲ್ಲಿ ಆಗಿಂದಾಗ್ಗೆ ಗೋಚರಿಸುತ್ತ ರೈತರ ಜಾನುವಾರುಗಳಾದ ಕುರಿ, ಮೇಕೆ, ಕೋಳಿ, ಸಾಕು ನಾಯಿಗಳ ಮೇಲೆ ದಾಳಿ ಮಾಡಿ ಕೊಂದು ತಿಂದು ಹಾಕುತ್ತಿತ್ತು.

ಚಿರತೆ ಕಾಟಕ್ಕೆ ರೋಸಿ ಹೋಗಿದ್ದ ರೈತಾಪಿ ಜನತೆ ತಾಲೂಕು ವಲಯ ಅರಣ್ಯ ಇಲಾಖೆಯವರಿಗೆ ಚಿರತೆ ಸೆರೆ ಹಿಡಿಯುವಂತೆ ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿ ಮೇರೆ ಸುತ್ತಮುತ್ತಲ ಪ್ರದೇಶ ವೀಕ್ಷಣೆ ಮಾಡಿದ ವಲಯ ಅರಣ್ಯ ಇಲಾಖೆಯವರು ಗೊಲ್ಲರಕೊಪ್ಪಲು ಗ್ರಾಮದಲ್ಲಿ ಚಿರತೆ ಸೆರೆಗಾಗಿ ಈಚೆಗೆ ಬೋನು ಇರಿಸಿದ್ದರು.

ನಿತ್ಯವೂ ಚಿರತೆ ಚಲನವಲನವನ್ನು ಸಿಬ್ಬಂದಿ ಗಮನಿಸುತ್ತಿದ್ದರು. ಭಾನುವಾರ ರಾತ್ರಿ ಬೋನಿನಲ್ಲಿದ್ದ ನಾಯಿ ತಿನ್ನಲು ಬಂದು ಚಿರತೆ ಸೆರೆಯಾಗಿದೆ. ವಿಷಯ ತಿಳಿದ ಗ್ರಾಮಸ್ಥರು ಚಿರತೆ ವೀಕ್ಷಿಸಲು ಸ್ಥಳಕ್ಕೆ ತಂಡೋಪತಂಡವಾಗಿ ಆಗಮಿಸಿದ್ದರು.

ತಾಲೂಕು ವಲಯ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೋನಿನಲ್ಲಿದ್ದ ಚಿರತೆಯನ್ನು ಸುರಕ್ಷಿತವಾಗಿ ತಾಲೂಕು ಅರಣ್ಯ ಇಲಾಖೆ ಕಚೇರಿಗೆ ರವಾನಿಸಿದರು. ಚಿರತೆ ಆರೋಗ್ಯ ತಪಾಸಣೆ ಮಾಡಿ ಮೇಲಾಧಿಕಾರಿಗಳ ಆದೇಶದಂತೆ ಬಂಡೀಪುರ ಅಥವಾ ನಾಗರಹೊಳೆಯಂತಹ ರಕ್ಷಿತಅಭಯಾರಣ್ಯಕ್ಕೆ ಚಿರತೆ ಬಿಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಈ ವೇಳೆ ತಾಲೂಕು ಅರಣ್ಯ ವಲಯಾಧಿಕಾರಿ ವನಿತಾ, ಉಪವಲಯ ಅರಣ್ಯಅಧಿಕಾರಿ ಚೇತನ್, ಅರಣ್ಯಪಾಲಕ ರಕ್ಷಕಿ ಅಭಿ, ಸಿಬ್ಬಂದಿ ರವಿಕುಮಾರ್, ಶ್ರೀನಿವಾಸ್, ಚಿರತೆ ಕಾರ್ಯ ಪಡೆಯ ಸಿಬ್ಬಂದಿ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೀಘ್ರದಲ್ಲೇ ‌ಹಲವು ಅಭಿವೃದ್ಧಿ ಕಾಮಗಾರಿಗಳು ಪೂರ್ಣ: ಕೆ.ಎಂ.ಉದಯ್
ಕಾವೇರಿ ನದಿಯಲ್ಲಿ ಗಾಯಕಿ ಎಸ್.ಜಾನಕಿ ಅಸ್ಥಿ ವಿಸರ್ಜನೆ