ರೈಲ್ವೆ ನಿಲ್ದಾಣ ಸಮೀಪ ಮರಿಗಳ ಜೊತೆ ಚಿರತೆ ಪ್ರತ್ಯಕ್ಷ...!

KannadaprabhaNewsNetwork |  
Published : Jan 21, 2025, 12:31 AM IST
20ಕೆಎಂಎನ್ ಡಿ35 | Kannada Prabha

ಸಾರಾಂಶ

ಮದ್ದೂರು ಪಟ್ಟಣದ ಶಿವಪುರದ ರೈಲ್ವೆ ನಿಲ್ದಾಣದ ಸಮೀಪ ಮರಿಗಳ ಜೊತೆ ಚಿರತೆ ಓಡಾಟ ನಡೆಸಿರುವುದನ್ನು ವ್ಯಕ್ತಿಯೊಬ್ಬರು ಗಮನಿಸಿದ್ದು, ಇದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಮದ್ದೂರು

ಪಟ್ಟಣದ ಶಿವಪುರದ ರೈಲ್ವೆ ನಿಲ್ದಾಣದ ಸಮೀಪ ಮರಿಗಳ ಜೊತೆ ಚಿರತೆ ಓಡಾಟ ನಡೆಸಿರುವುದನ್ನು ವ್ಯಕ್ತಿಯೊಬ್ಬರು ಗಮನಿಸಿದ್ದು, ಇದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ.

ಪಟ್ಟಣದ ರೈಲು ನಿಲ್ದಾಣ ಹಾಗೂ ಆಶ್ರಯ ಬಡಾವಣೆಯ ನಡುವೆ ಇರುವ ಅರಳೀಮರದ ಬಳಿ ಚಿರತೆ ಮತ್ತು ಎರಡು ಮರಿಗಳು ಸಂಚಾರ ಮಾಡುತ್ತಿರುವುದನ್ನು ವ್ಯಕ್ತಿ ನೋಡಿ ತಕ್ಷಣವೇ ಅಲ್ಲಿಂದ ತೆರಳಿ ಆಶ್ರಯ ಬಡಾವಣೆ ಸಾರ್ವಜನಿಕರು ಮತ್ತು ರೈಲು ನಿಲ್ದಾಣದ ಪ್ರಯಾಣಿಕರಿಗೆ ಸುದ್ದಿ ತಿಳಿಸಿದ್ದಾರೆ.

ಸಾರ್ವಜನಿಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಚಿರತೆ ಸಂಚಾರದ ಬಗ್ಗೆ ತಕ್ಷಣ ಸುದ್ದಿ ತಿಳಿಸಿದ್ದಾರೆ. ಎಚ್ಚೆತ್ತುಕೊಂಡ ಅರಣ್ಯಾಧಿಕಾರಿಗಳು ರಾತ್ರಿಯೇ ಸ್ಥಳದಲ್ಲಿ ಬೋನ್ ಇರಿಸಿದ್ದಾರೆ. ಚಿರತೆ ಸೆರೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಜನರು ರಾತ್ರಿ ಹೊತ್ತು ಒಬ್ಬರೇ ಓಡಾಟ ಮಾಡುವುದು ಹಾಗೂ ರೈತರು ಜಮೀನುಗಳ ತೆರಳುವಾಗ ಎಚ್ಚರಿಕೆಯಿಂದ ಇರುವಂತೆ ವಲಯ ಅರಣ್ಯಾಧಿಕಾರಿ ಗವಿಯಪ್ಪ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ನಾಳೆ ವಿದ್ಯುತ್ ವ್ಯತ್ಯಯ

ಮಂಡ್ಯ:

ತಾಲೂಕಿನ ಚಿಕ್ಕಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಜನವರಿ 22 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಚಿಕ್ಕ ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಒಳಪಡುವ ನಗರ ಪ್ರದೇಶಗಳಾದ ಶಂಕರಪುರ, ಜೈನ ಸ್ಟ್ರೀಟ್, ಬೀಡಿ ಕಾಲೋನಿ, ಜಬರ್ ಸರ್ಕಲ್, ಹೊಳಲು ವೃತ್ತ, ವಿನಾಯಕನಂದ ಬಡಾವಣೆ, ಗ್ರಾಮಾಂತರ ಪ್ರದೇಶಗಳಾದ ಗೋಪಾಲಪುರ, ಚಿಕ್ಕಮಂಡ್ಯ. ಸಾತನೂರು, ಕೊಮ್ಮೇರಹಳ್ಳಿ, ಹುಲಿವಾನ, ಕೆ.ಗೌಡಗೆರೆ. ಎಚ್.ಮಲ್ಲಿಗೆರೆ, ಎಸ್.ಐ.ಕೋಡಿಹಳ್ಳಿ, ಎಚ್.ಕೋಡಿಹಳ್ಳಿ, ಸಂಪಹಳ್ಳಿ, ಗೊರವಾಲೆ, ಬಿ. ಹೊಸಹಳ್ಳಿ, ಬೀರಗೌಡನಹಳ್ಳಿ ಹಾಗೂ ಈ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಗಲಿದೆ ಎಂದು ಸೆಸ್ಕ್ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

PREV

Recommended Stories

ನೀಲಿ ಮೊಟ್ಟೆ ಇಟ್ಟ ಚನ್ನಗಿರಿಯ ನಾಟಿ ಕೋಳಿ: ಸ್ಥಳೀಯರಲ್ಲಿ ತೀವ್ರ ಕುತೂಹಲ
ಸಿಗಂದೂರಿನಲ್ಲಿ ವಾಟರ್ ಏರೋಡ್ರೋಮ್: ವಿಮಾನ ಟೇಕಾಫ್‌, ಲ್ಯಾಂಡಿಂಗ್‌! ಪ್ರವಾಸೋದ್ಯಮಕ್ಕೆ ಹೊಸ ಹೆಜ್ಜೆ?