ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ತಾಲೂಕಿನ ಬೆಳಗೊಳ ಗ್ರಾಮದ ಕಿತ್ತೂರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಹಾಗೂ ಬೆಳಗೊಳ ಆಯುಷ್ಮಾನ್ ಆರೋಗ್ಯ ಕೇಂದ್ರದಿಂದ ಆಯೋಜಿಸಿದ್ದ ಸ್ಪರ್ಶ್ ಕುಷ್ಠ ರೋಗ ಅರಿವು ಆಂದೋಲನದಲ್ಲಿ ಮಾತನಾಡಿದರು.
ಕುಷ್ಠರೋಗ ಲಕ್ಷಣಗಳು ಕಂಡು ಬಂದಲ್ಲಿ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿಕೊಂಡು ಉಚಿತವಾಗಿ ಬಹು ಔಷಧಿ ಚಿಕಿತ್ಸೆ ಪಡೆದು ರೋಗ ತೊಲಗಿಸಬಹುದು ಎಂದರು.ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಯರಾಮ್ ಟಿ.ಬಿ ಮಾತನಾಡಿ, ಜ.30 ರಿಂದ ಫೆಬ್ರವರಿ 13ರವರೆಗೆ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜನರಲ್ಲಿರುವ ಕಪ್ಪು ಕಲ್ಪನೆಗಳನ್ನು ಹೋಗಲಾಡಿಸಿ ಮತ್ತು ಕುಷ್ಠ ರೋಗದಿಂದ ಯಾರು ಬಾರಿತರಾಗದಂತೆ ನೋಡಿ ಕೊಳ್ಳುವುದು ರೋಗ ಲಕ್ಷಣಗಳ ಬಗ್ಗೆ ಜನರಿಗೆ ತಿಳಿವಳಿಕೆ ಮೂಡಿಸಿ ಎಂದರು.
ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಾಂಶುಪಾಲ ಡಿ.ಎಂ. ಅಭಿಲಾಷ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಟಿ.ಟಿ.ಜ್ಯೋತಿ, ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಸಿ.ಚಂದನ, ವಸತಿ ಶಾಲೆ ನರ್ಸಿಂಗ್ ಅಧಿಕಾರಿ ರವಿ ಪ್ರಕಾಶ್ ಎಸ್. ಹಾಗೂ ಆಶಾ ಕಾರ್ಯಕರ್ತೆ ಜಯಂತಿ ಸೇರಿದಂತೆ ಇತರರು ಇದ್ದರು.ಫೆ.೮ರಂದು ಸಂವಿಧಾನ ದಿನಾಚರಣೆ
ಮಂಡ್ಯ: ಕರ್ನಾಟಕ ಸಂವಿಧಾನ ಸೇನೆಯಿಂದ ಫೆ.೮ರಂದು ಬೆಳಗ್ಗೆ ೧೧ ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ ಎಂದು ಸೇನೆಯ ರಾಜ್ಯಾಧ್ಯಕ್ಷ ಎಚ್.ಎನ್.ನರಸಿಂಹಮೂರ್ತಿ ತಿಳಿಸಿದರು.ಉರಿಲಿಂಗಿ ಪೆದ್ದಿ ಮಹಾಸಂಸ್ಥಾನ ಮಠದ ಶ್ರೀಜ್ಞಾನಪ್ರಕಾಶ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಸರ್ಕಾರದ ಯೋಜನಾ ಇಲಾಖೆ ನಿರ್ದೇಶಕ ಡಿ.ಚಂದ್ರಶೇಖರಯ್ಯ ಸಮಾರಂಭ ಉದ್ಘಾಟಿಸುವರು. ಹಿರಿಯ ದಲಿತ ಹೋರಾಟಗಾರ ಬಿ.ಗೋಪಾಲ್, ಜಿಲ್ಲಾಕಾರಿ ಡಾ.ಕುಮಾರ, ಸಂವಿಧಾನ ಸೇನೆ ರಾಜ್ಯಾಧ್ಯಕ್ಷ ನರಸಿಂಹಮೂರ್ತಿ, ಲೋಕೋಪಯೋಗಿ ಇಲಾಖೆ ನಿವತ್ತ ಕಾರ್ಯಪಾಲಕ ಅಭಿಯಂತರ ಟಿ.ಆರ್.ಶಿವರಾಮು ಸಮಾರಂಭದಲ್ಲಿ ಭಾಗವಹಿಸುವರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ೧೦ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು.
ಗೋಷ್ಠಿಯಲ್ಲಿ ಲೋಕೇಶ್, ಜಿ.ಕೆ.ಕುಮಾರ್, ಎಚ್.ಡಿ.ಪ್ರದೀಪ್, ಅಭಿಗೌಡ, ಪ್ರಮೋದ್ ಇದ್ದರು.