ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ
ಕುಷ್ಠ ರೋಗದ ಲಕ್ಷಣ, ಸ್ವರೂಪದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಶಾಲೆ ಹಾಗೂ ಹಾಸ್ಟೆಲ್‍ಗಳಲ್ಲಿ ಮಕ್ಕಳ ತಪಾಸಣೆ ಕೈಗೊಳ್ಳುವುದರ ಮೂಲಕ ಅರಿವು ಮೂಡಿಸಬೇಕು. ಕೊಳಚೆ ಪ್ರದೇಶಗಳು ಹಾಗೂ ಈ ಹಿಂದೆ ಕುಷ್ಠ ರೋಗ ಪತ್ತೆಯಾದ ಪ್ರದೇಶಗಳಲ್ಲಿ ಹೆಚ್ಚಿನ ತಪಾಸಣೆ ಕಾರ್ಯ ನಡೆಸಬೇಕು. ತಾಯಂದಿರು ಹಾಗೂ ಗರ್ಭಿಣಿಯರಿಗೂ ಈ ಕುರಿತು ಮಾಹಿತಿ ನೀಡಬೇಕು. ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಈ ವಿಶೇಷ ಅಭಿಯಾನದ ಯಶಸ್ವಿಗೆ ಕೈಜೋಡಿಸಬೇಕು ಎಂದರು.
ತಾಲೂಕು ಮಟ್ಟದ ಅಧಿಕಾರಿಗಳ ಸಭೆ:ಅಭಿಯಾನವನ್ನು ಯಶಸ್ವಿಗೊಳಿಸುವ ಹಿನ್ನಲೆಯಲ್ಲಿ ತಾಲೂಕು ಮಟ್ಟದಲ್ಲಿ ತಹಸೀಲ್ದಾರ್, ತಾಪಂ ಇಒ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ನೇತೃತ್ವದಲ್ಲಿ ಅಂತರ್ ಇಲಾಖೆಗಳ ಸಭೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಗ್ರಾಮ ಹಾಗೂ ವಾರ್ಡ್‍ವಾರು ಸಮೀಕ್ಷೆ ಕಾರ್ಯ ನಡೆಸಿ, ತಪಾಸಣೆ ನಿಖರವಾಗಿರಬೇಕು, ಅಲ್ಲದೆ ಈ ಬಗ್ಗೆ ದತ್ತಾಂಶವನ್ನು ಸಂಗ್ರಹಿಸಬೇಕು. ನಗರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯತಿ ಕಸ ಸಂಗ್ರಹಿಸುವ ವಾಹನಗಳಲ್ಲಿ ಅಭಿಯಾನದ ಕುರಿತು ಮಾಹಿತಿಯನ್ನು ಧ್ವನಿವರ್ಧಕದ ಮೂಲಕ ಪ್ರಚಾರ ಮಾಡಬೇಕು. ಬಹಳಷ್ಟು ಜನರು ಕುಷ್ಠ ರೋಗದ ಬಗ್ಗೆ ಕೀಳರಿಮೆ, ಮಾಹಿತಿಯ ಕೊರತೆ ಹಾಗೂ ಮೂಢನಂಬಿಕೆ ಹೊಂದಿ, ವೈದ್ಯರ ಬಳಿ ಬಾರದೆ ಜೀವಕ್ಕೆ ಕುತ್ತು ತಂದುಕೊಳ್ಳುತ್ತಾರೆ.ಕೆಲವು ಘಟನೆಗಳಲ್ಲಿ ಶಾಶ್ವತ ಅಂಗವೈಕಲ್ಯವು ಉಂಟಾಗಬಹುದು. ಇದಕ್ಕೆ ಅವಕಾಶ ಕೊಡದೆ, ಕುಷ್ಠರೋಗವು ಸಂಪೂರ್ಣ ಗುಣಮುಖವಾಗುವ ಕಾಯಿಲೆಯಾಗಿದೆ ಎಂಬುದನ್ನು ಜನರಿಗೆ ತಿಳಿಸಬೇಕು. ಸರ್ಕಾರ ಉಚಿತವಾಗಿ ಔಷದೋಪಚಾರಗಳನ್ನು ನೀಡುವುದು. ಆರಂಭದಲ್ಲಿಯೇ ಚಿಕಿತ್ಸೆ ಪಡೆದರೆ ಕುಷ್ಠರೋಗದಿಂದ ಮುಕ್ತಿ ಹೊಂದಬಹುದು ಎಂಬುದನ್ನು ಮನವರಿಕೆ ಮಾಡಿಕೊಡುವಂತೆ ಅವರು ಹೇಳಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಕಾಂತರಾಜ್, ಆರೋಗ್ಯ ಇಲಾಖೆಯ ಡಾ.ಸಿ.ಓ.ಸುಧಾ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ವಿ.ವಿ.ಗಿರೀಶ್, ಜಿಲ್ಲಾ ಆಸ್ಪತ್ರೆ ನಿವಾಸಿ ವೈದ್ಯಾಧಿಕಾರಿ ಡಾ.ಆನಂದ್ ಪ್ರಕಾಶ್, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಅಭಿಯಾನದ ಪೊ ಸ್ಟ್‌ರ್‌ಗಳನ್ನು ಬಿಡುಗಡೆ ಮಾಡಲಾಯಿತು.