ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿ ತಾಲೂಕಿನ ಮುತಗಾ ಗ್ರಾಮದಲ್ಲಿ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆ ವತಿಯಿಂದ ಶುಕ್ರವಾರ ನಡೆದ ವಿಶೇಷ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರಗೇಶ ನಿರಾಣಿ ಮಾತನಾಡಿ, ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಅಧಿಕಾರದ ಮದ, ಹಣ ಬಲದ ಮೇಲೆ ಮೆರೆಯುತ್ತಿದ್ದವರಿಗೆ ಜಿಲ್ಲೆಯ ಜನತೆ ತಕ್ಕ ಪಾಠ ಕಲಿಸಿದ್ದಾರೆ. ಕಾರ್ಯಕರ್ತರ ಸಂಘಟಿತ ಪರಿಶ್ರಮದ ಫಲವಾಗಿ ಬಿಜೆಪಿಗೆ ಗೆಲುವಾಗಿದೆ ಎಂದು ಹೇಳಿದರು.ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬೇಸತ್ತು ಜನತೆ ಲೋಕಸಭೆ ಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿಗಳಿಗೆ ಮತ ಹಾಕಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿದೆ, ಕಾನೂನು ಬಾಹಿರ ಚಟುವಟಿಕೆ ಹೆಚ್ಚುತ್ತಿದೆ. ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರುಪಾಯಿ ಲೂಟಿ ಹೊಡೆಯಲಾಗಿದೆ. ಈ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.