- 5ನೇ ರಾಷ್ಟ್ರಮಟ್ಟದ ಮುಕ್ತ ಕರಾಟೆ ಸ್ಪರ್ಧೆಯಲ್ಲಿ ವಿನಯ್ ಕುಮಾರ್ ಇಂಗಿತ
ಕನ್ನಡಪ್ರಭ ವಾರ್ತೆ ದಾವಣಗೆರೆ
ಪ್ರಕಾಶ್ ಪಡುಕೋಣೆ, ದ್ರಾವಿಡ್ ಕ್ರೀಡಾ ಅಕಾಡೆಮಿಯಂತೆಯೇ ದಾವಣಗೆರೆಯಲ್ಲಿಯೂ ಒಲಂಪಿಯನ್ಸ್ ನ ಸೃಷ್ಟಿ ಮಾಡುವಂಥ ಕ್ರೀಡಾ ಅಕಾಡೆಮಿ ಸ್ಥಾಪನೆಯಾಗಬೇಕಾದ ಅವಶ್ಯಕತೆ ಇದೆ ಎಂದು ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ, ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಪ್ರತಿಪಾದಿಸಿದರು.ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 5ನೇ ರಾಷ್ಟ್ರಮಟ್ಟದ ಮುಕ್ತ ಕರಾಟೆ ಸ್ಪರ್ಧೆ-2024 ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರು, ಸಂಸದರು ಕ್ರೀಡಾ ಅಕಾಡೆಮಿ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಭಾವಿಸುತ್ತೇನೆ ಎಂದರು.
ಲಕ್ಷಾಂತರ ವಿದ್ಯಾರ್ಥಿಗಳು ಕರಾಟೆ ಅಭ್ಯಸಿಸಬೇಕು ಎಂಬ ಉದ್ದೇಶವನ್ನು ಇಟ್ಟುಕೊಂಡು ದಾವಣಗೆರೆಯಲ್ಲಿ ರಾಷ್ಟ್ರಮಟ್ಟದ ಮುಕ್ತ ಕರಾಟೆ ಸ್ಪರ್ಧೆ ನಡೆಸಲಾಗುತ್ತಿದೆ. ಇದು ದೇಶದ ಮೂಲೆ ಮೂಲೆಯನ್ನೂ ತಲುಪುವಂತಾಗಲಿ ಎಂದು ಜಿ. ಬಿ. ವಿನಯ್ ಕುಮಾರ್ ಹಾರೈಸಿದರು.
ವೇದಿಕೆಯಲ್ಲಿ ಕರಾಟೆ ಸ್ಪರ್ಧೆ ಆಯೋಜಕ ರೆನ್ಸಿ ಎಚ್. ಮಲ್ಲಿಕಾರ್ಜುನ್, ಎಚ್.ಎಂ. ಕಾರ್ತಿಕ್, ಚನ್ನಕೇಶವ, ಲೋಹಿತ್ ಕುಮಾರ್, ಸಿದ್ದೇಶ್, ರಘು, ಸುಭಾಷ್ ಎಚ್.ಪಿ., ಕರಾಟೆ ತರಬೇತುದಾರರು ಹಾಜರಿದ್ದರು.
.......8ಕೆಡಿವಿಜಿ45