ಉಪಚುನಾವಣೆಯಲ್ಲಿ ಕಾರ್ಯಕರ್ತರು ಮತದಾರರ ಮನಸ್ಸು ಗೆಲ್ಲಲಿ

KannadaprabhaNewsNetwork |  
Published : Aug 20, 2024, 12:53 AM IST
ಪೊಟೋ ಪೈಲ್ ನೇಮ್  ೧೪ಎಸ್‌ಜಿವಿ೩ ತಾಲೂಕಿನ ದುಂಡಶಿ ಹೊಸೂರು ಪಂಚಾಯತಿ ಮಟ್ಟದ ಜನಪ್ರತಿನಿಧಿ,  ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿದರು. | Kannada Prabha

ಸಾರಾಂಶ

ಕ್ಷೇತ್ರದ ಉಪಚುನಾವಣೆಯಲ್ಲಿ ಕಾರ್ಯಕರ್ತರು ಪ್ರತಿ ಬೂತ್‌ ಮಟ್ಟದ ಮತದಾರರ ಮನಸ್ಸು ಗೆಲ್ಲಬೇಕು. ಬೂತ್‌ ಮಟ್ಟದ ಅಧ್ಯಕ್ಷರು ಮತ್ತು ಸದಸ್ಯರು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ ಹೇಳಿದರು.

ಶಿಗ್ಗಾಂವಿ: ಕ್ಷೇತ್ರದ ಉಪಚುನಾವಣೆಯಲ್ಲಿ ಕಾರ್ಯಕರ್ತರು ಪ್ರತಿ ಬೂತ್‌ ಮಟ್ಟದ ಮತದಾರರ ಮನಸ್ಸು ಗೆಲ್ಲಬೇಕು. ಬೂತ್‌ ಮಟ್ಟದ ಅಧ್ಯಕ್ಷರು ಮತ್ತು ಸದಸ್ಯರು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ ಹೇಳಿದರು.

ತಾಲೂಕಿನ ದುಂಡಶಿ ಹೊಸೂರು ಪಂಚಾಯಿತಿ ಮಟ್ಟದ ಜನಪ್ರತಿನಿಧಿ, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ಸಂಘಟನೆ ಮಾಡಬೇಕು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸುವ ಮುಂಚೂಣಿಯ ಪಕ್ಷವಾಗಿ ಬಿಂಬಿಸಿದ್ದು, ಇಂದು ಕರ್ನಾಟಕದಲ್ಲಿ ಬಲಿಷ್ಠ ಪಕ್ಷವಾಗಿ, ಸಾಮಾನ್ಯ ಜನರ ಪರ ಆಡಳಿತ ನಡೆಸುತ್ತಿದೆ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ, ಬಸವರಾಜ ಬೊಮ್ಮಾಯಿ ಸತತ ಎರಡು ಅವಧಿಗೂ ಶಾಸಕರಾಗಿ ಕಾರ್ಯ ನಿರ್ವಹಿಸಿದ್ದರೂ ಹಲವು ಸಮಸ್ಯೆಗಳು ಈ ಕ್ಷೇತ್ರದಲ್ಲಿವೆ. ಕೇವಲ ಅಧಿಕಾರ ಪಡೆಯಬೇಕು ಎಂದು ಕ್ಷೇತ್ರ ಬಿಟ್ಟು ಕೇಂದ್ರಕ್ಕೆ ಹೋಗಿದ್ದಾರೆ. ಇಂತಹ ವ್ಯಕ್ತಿಯನ್ನು ನೀವು ಬೆಂಬಲಿಸಿ ತಪ್ಪು ಮಾಡಿದಿರಿ. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆ ಬಡವರ ಪರವಾಗಿದ್ದು, ತಾವೆಲ್ಲ ಪಕ್ಷಕ್ಕೆ ದುಡಿಯಬೇಕು ಎಂದರು.

ಯಾಸಿರ್ ಖಾನ್ ಪಠಾಣ್ ಮಾತನಾಡಿ, ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಪಣ ತೊಟ್ಟಿದೆ. ಬಡವರ ಪರ ಯೋಜನೆಗಳನ್ನು ಜಾರಿಗೆ ತರುತಿದ್ದು, ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಹಕಾರ, ಸಹಮತ ನೀಡಿ ಎಂದರು.

ಕಾರ್ಯಕ್ರಮದಲ್ಲಿ ಗಡಿ ಪ್ರದೇಶಾಭಿವೃದ್ಧಿ ಅಧ್ಯಕ್ಷ ಸೋಮಣ್ಣ ಬೇವಿನಮರದ, ಮಾಜಿ ಸಚಿವ ಆರ್. ಶಂಕರ, ಮಾಜಿ ಶಾಸಕ ಅಜ್ಜಂಪೀರ ಖಾದ್ರಿ, ಮಂಜುನಾಥ ಕುನ್ನೂರ, ರಾಜು ಕುನ್ನೂರ, ವಿನೋದ ಅಸೋಟಿ, ರಾಜೇಶ್ವರಿ ಪಾಟೀಲ, ಪ್ರೇಮಾ ಪಾಟೀಲ್ ಪಕ್ಷದ ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಾರ್ಥನೆ ಮಾತಿನ ಬೆನ್ನಲ್ಲೇ ಡಿಕೆಶಿ ಇಂದು ದಿಲ್ಲಿ ಭೇಟಿ ಕುತೂಹಲ
ಧಮ್ಕಿ ರಾಜೀವ್‌ಗೌಡ ವಿರುದ್ಧ 2 ಕೇಸ್‌, ಬೆನ್ನಲ್ಲೇ ನಾಪತ್ತೆ