ಸಂವಿಧಾನ ಆಶಯದ ಎಲ್ಲರೂ ಅರಿತುಕೊಳ್ಳಿ: ಪಿಎಸ್‌ಐ ಸಂಗೀತಾ

KannadaprabhaNewsNetwork |  
Published : Feb 19, 2024, 01:38 AM IST
ಹುಣಸಗಿ ಪಟ್ಟಣದ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಪಿಎಸ್ಐ ಸಂಗೀತಾ ಮಾತನಾಡಿದರು | Kannada Prabha

ಸಾರಾಂಶ

ಹುಣಸಗಿ ಪಟ್ಟಣದ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಪಿಎಸ್ಐ ಸಂಗೀತಾ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಹುಣಸಗಿ

ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದ ಮಹತ್ವ ಮತ್ತು ಸದಾಶಯಗಳನ್ನು ಪ್ರತಿಯೊಬ್ಬರು ಅರಿಯಬೇಕಿದೆ. ದೇಶವು ಸಂವಿಧಾನದ ತತ್ವ ಸಿದ್ಧಾಂತ ಮೇಲೆ ನಡೆದಿದ್ದು, ಯಾವುದೇ ಒಂದು ವಿಷಯದಲ್ಲೂ ಸಂವಿಧಾನವಿಲ್ಲದೆ ಕೆಲಸವಾಗುವುದಿಲ್ಲ ಎಂದು ಪಿಎಸ್‌ಐ ಸಂಗೀತಾ ಹೇಳಿದರು.

ಹುಣಸಗಿ ಪಟ್ಟಣದ ಮಹಾಂತಸ್ವಾಮಿ ವೃತ್ತಕ್ಕೆ ಆಗಮಿಸಿದ್ದ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಮುಖಂಡರು ಹಾಗೂ ಅಧಿಕಾರಿಗಳು ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡರು.

ನಂತರ ಬಾಲಕಿಯರ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಚಾಲನೆ ಸುರಪುರ ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕಿ ಡಾ. ಶೃತಿ ಎಂ. ಮಾತನಾಡಿ, ಸಂವಿಧಾನ ಅಂಗೀಕಾರವಾಗಿ 75 ವರ್ಷ ಪೂರ್ಣಗೊಂಡಿರುವ ಅಂಗವಾಗಿ ಸಂವಿಧಾನದ ಮಹತ್ವ ಮತ್ತು ಆಶಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಈ ಉದ್ದೇಶಕ್ಕಾಗಿ ಹಲವಾರು ವಿಭಿನ್ನ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.

ತಹಸೀಲ್ದಾರ್ ಬಸಲಿಂಗಪ್ಪ ನೈಕೋಡಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು.

ಪಟ್ಟಣದ ಪ್ರಮುಖ ಬೀದಿಯಲ್ಲಿ ಬೃಹತ ಮೆರವಣಿಗೆ ನಡೆಸಿ ಬಸ್ ನಿಲ್ದಾಣದ ಡಾ. ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಪೀಠಿಕೆ ಓದಿ ಜನರಲ್ಲಿ ಜಾಗೃತಿ ಮೂಡಿಸಲಾಯಿತು.

ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಕುರಿತು ವೇಷ ಭೂಷಣ ರೂಪಕಗಳನ್ನು ಪ್ರದರ್ಶಿಸಿದರು. ಪಟ್ಟಣ ಪಂಚಾಯಿತಿ ಅಧಿಕಾರಿ ಸಿದ್ರಾಮೇಶ್ವರ, ಮುಖಂಡರಾದ ಚಂದ್ರಶೇಖರ್ ದಂಡಿನ್, ಸಿದ್ರಾಮಪ್ಪ ಮುದಗಲ್, ಸಂಗಣ್ಣ ವೈಲಿ, ಆರ್.ಎಂ. ರೇವಡಿ, ತಿಪ್ಪಣ್ಣ ಕಡಿಮನಿ, ಶರಣಪ್ಪ ಮಾಸ್ತರ್, ಸಿದ್ದಣ್ಣ ಮೇಲಿನಮನಿ, ಮುದಕಪ್ಪ ಆನೇಕಿ, ಭೀಮಣ್ಣ ನಾಟೇಕರ್, ನಂದಪ್ಪ ಪೀರಾಪೂರ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಪಚುನಾವಣೆ ಪ್ರಚಾರ ಅಖಾಡಕ್ಕೆ ಇಂದು ಸಿಎಂ
ಜಿಬಿಎ ಬಜೆಟ್‌ಗೆ ರಾಜ್ಯ, ಕೇಂದ್ರ ಸರ್ಕಾರದಿಂದ ₹4196 ಕೋಟಿ ನೀರಿಕ್ಷೆ