ಕನ್ನಡಪ್ರಭ ವಾರ್ತೆ ಹಲಗೂರು
ಮಾರಗೌಡನಹಳ್ಳಿಯಲ್ಲಿ ಹಳೆ ವಿದ್ಯಾರ್ಥಿ ಬೀರೇಶ್ ಸಂಘದಿಂದ ಕ್ಯಾಲೆಂಡರ್‌ಗಳನ್ನು ಶಾಲೆ ಎಸ್ಡಿಎಂಸಿ ಸದಸ್ಯರು, ಶಾಲೆ ಶಿಕ್ಷಕ ವೃಂದಕ್ಕೆ ಹಾಗೂ ಪೋಷಕರಿಗೆ ವಿತರಿಸಿ ಮಾತನಾಡಿ, ತಾವು ವ್ಯಾಸಂಗ ಮಾಡಿದ ಪ್ರತಿಯೊಬ್ಬ ವಿದ್ಯಾರ್ಥಿಗಳು ನಮಗೆ ಉನ್ನತ ಶಿಕ್ಷಣ ನೀಡಿ ನಮ್ಮನ್ನು ಸಮಾಜದಲ್ಲಿ ಒಂದು ಸತ್ಪ್ರಜೆಯಾಗಿ ಮಾಡಿದ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲ ಮುಂದಾಗಬೇಕು ಎಂದರು.
ಶಾಲೆಯನ್ನು ಅಭಿವೃದ್ಧಿಪಡಿಸಲು ಹಳೆಯ ವಿದ್ಯಾರ್ಥಿಗಳ ಸೇರಿ ಸಂಘ ಸ್ಥಾಪಿಸಿಕೊಂಡಿದ್ದೇವೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ನೀವು ವ್ಯಾಸಂಗ ಮಾಡಿದ ಶಾಲೆ ಋಣ ತೀರಿಸೋ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.ಈ ವೇಳೆ ಸರ್ ಎಂ.ವಿ.ವಿಶ್ವೇಶ್ವರಯ್ಯ ವಿದ್ಯಾರ್ಥಿ ಬಳಗ, ಸರ್ಕಾರಿ ಪ್ರೌಢಶಾಲೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಶಿಕ್ಷಕರಾದ ಕೆ.ಎಂ.ಬಸವರಾಜು, ಕೃಷ್ಣಸ್ವಾಮಿ ಹಾಗೂ ಹಿರಿಯ ವಿದ್ಯಾರ್ಥಿ ಸಂಘಟನೆ ಬೀರೇಶ್, ಮಾದೇಶ್, ಧರ್ಮೇಶ್, ಜಗದೀಶ್, ಸಂತೋಷ್, ಪ್ರದೀಪ್, ಪುಟ್ಟಸ್ವಾಮಿ, ಆನಂದ , ಅಭಿಷೇಕ್ . ಸೇರಿದಂತೆ ಇತರರು ಇದ್ದರು.
ಕನ್ನಡಪ್ರಭ ವಾರ್ತೆ ಮಂಡ್ಯ
ಈ ಸಮಾವೇಶವು ಎಲ್ಲಾ ವೀರಶೈವ ಲಿಂಗಾಯತ ಸಮುದಾಯದ ಉದ್ಯಮಿಗಳನ್ನು, ವೃತ್ತಿಪರರನ್ನು ಒಂದೇ ವೇದಿಕೆಗೆ ತರುವ ಮತ್ತು ಆರ್ಥಿಕ, ಕೈಗಾರಿಕೆ, ವ್ಯಾಪಾರ ಚಟುವಟಿಕೆಗಳನ್ನು ಉತ್ತಮಗೊಳಿಸುವ ಉದ್ದೇಶವನ್ನು ಹೊಂದಿದೆ. ಮೂರು ದಿನಗಳ ಕಾಲ ಮೈಸೂರಿನ ಮಹಾರಾಜ ಗ್ರೌಂಡ್ಸ್‌ನಲ್ಲಿ ಕಾನ್‌ಕ್ಲೇವ್ ನಡೆಯಲಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಾನ್ ಕ್ಲೇವ್‌ನಲ್ಲಿ ಮೂರು ದಿನವೂ ಖ್ಯಾತ ಗಾಯಕರಾದ ರಾಜೇಶ್ ಕೃಷ್ಣನ್, ಅರ್ಚನಾ ಉಡುಪ, ಅನನ್ಯ ಭಟ್, ವಾಸುಕಿ ವೈಭವ್ ಸಂಗೀತ ಸಂಜೆ ನಡೆಯಲಿದೆ. ಆಹಾರ ಮೇಳ, ಚರ್ಚಾ ಕಾರ್ಯಕ್ರಮಗಳು, ಇತರೆ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ಸ್ಟಾರ್ಟ್ ಅಪ್‌ಗಳ ಬಲಪಡಿಸುವಿಕೆ, ಜಿಲ್ಲಾಮಟ್ಟದಲ್ಲಿ ಮಹಿಳಾ ಹಾಗೂ ಯುವ ಉದ್ಯಮಶೀಲತೆ, ಹೆಚ್ಚಿಸುವ ನಿಟ್ಟಿನಲ್ಲಿ ಮಾರ್ಗದರ್ಶನ ನೀಡುವುದು. ವಿವಿಧ ಉತ್ಪನ್ನಗಳು ಹಾಗೂ ಸೇವೆಗಳನ್ನು ಮಳಿಗೆಗಳಲ್ಲಿ ಪ್ರದರ್ಶಿಸುವ ಮೂಲಕ ಹಾಗೂ ವಿವಿಧ ಕಾರ್ಯಕ್ರಮಗಳ ಮೂಲಕ ಮೈಸೂರಿನ ಸಾಮರ್ಥ್ಯವನ್ನು ಪ್ರದರ್ಶಿಸುವುದು. ಅನುಭವಿ ಉದ್ಯಮಿಗಳು, ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಉದ್ಯಮಿಗಳು, ಅಧಿಕಾರಿಗಳು ಮತ್ತಿತರರನ್ನು ಒಳಗೊಂಡ ಉಪಯುಕ್ತ ಚರ್ಚೆಗಳನ್ನು ನಡೆಸಲಾಗುವುದು ಎಂದರು.