ಕಲೆ, ಕಲಾವಿದರ ಪ್ರೋತ್ಸಾಹಿಸುವ ಕೆಲಸವಾಗಲಿ: ಚಿದಾನಂದಪ್ಪ

KannadaprabhaNewsNetwork |  
Published : Aug 05, 2025, 01:30 AM IST
ಬಳ್ಳಾರಿಯ ಬಯಲು ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ “ಹಾಡಿರೇ ರಾಗಗಳ-ತೂಗಿರೇ ದೀಪಗಳ” ಸಂಗೀತ ಗಾಯನ ಕಾರ್ಯಕ್ರಮಕ್ಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಚಾಲನೆ ನೀಡಿ ಮಾತನಾಡಿದರು.  | Kannada Prabha

ಸಾರಾಂಶ

ನಾಡೋಜ ಡಾ. ಸುಭದ್ರಮ್ಮ ಮನ್ಸೂರ್ ಬಯಲು ರಂಗಮಂದಿರದಲ್ಲಿ ಆಯೋಜಿಸಿದ್ದ ಹಾಡಿರೇ ರಾಗಗಳ-ತೂಗಿರೇ ದೀಪಗಳ ಸಂಗೀತ ಗಾಯನ ಕಾರ್ಯಕ್ರಮವು ನೆರೆದಿದ್ದ ಜನತೆಯ ತಲೆದೂಗಿಸಿತು.

ಹಾಡಿರೇ ರಾಗಗಳ-ತೂಗಿರೇ ದೀಪಗಳ ಸಂಗೀತ ಗಾಯನ ಕಾರ್ಯಕ್ರಮ

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ

ಕನ್ನಡಪ್ರಭ ವಾರ್ತೆ ಬಳ್ಳಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪರಿಶಿಷ್ಟ ಜಾತಿ ಉಪಯೋಜನೆಯಡಿ ನಗರದ ಡಾ. ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ನಾಡೋಜ ಡಾ. ಸುಭದ್ರಮ್ಮ ಮನ್ಸೂರ್ ಬಯಲು ರಂಗಮಂದಿರದಲ್ಲಿ ಆಯೋಜಿಸಿದ್ದ ಹಾಡಿರೇ ರಾಗಗಳ-ತೂಗಿರೇ ದೀಪಗಳ ಸಂಗೀತ ಗಾಯನ ಕಾರ್ಯಕ್ರಮವು ನೆರೆದಿದ್ದ ಜನತೆಯ ತಲೆದೂಗಿಸಿತು.ಬಳ್ಳಾರಿಯ ಎಸ್.ಎಂ. ಹುಲುಗಪ್ಪ ತಂಡದಿಂದ ಜಾನಪದ ಗೀತೆಗಳು, ಸಿರುಗುಪ್ಪದ ಅಂಬಣ್ಣ ದಳವಾಯಿ ಅವರಿಂದ ಸುಗಮ ಸಂಗೀತ, ಬಳ್ಳಾರಿಯ ಕೆ.ಜಡೇಶ್ ಅವರಿಂದ ಭಾವ ಗೀತೆಗಳು, ಸಿರುಗುಪ್ಪ ತಾಲೂಕಿನ ಉತ್ತನೂರಿನ ರಾಮಪ್ಪ ಅವರಿಂದ ರಂಗ ಗೀತೆಗಳು, ಕುರುಗೋಡು ತಾಲೂಕಿನ ಕಲ್ಲುಕಂಬದ ಬಿ.ಆನಂದ ಅವರಿಂದ ಕ್ರಾಂತಿ ಗೀತೆಗಳು, ಸಂಗನಕಲ್ಲಿನ ಉಷಾ ಅವರಿಂದ ವಚನ ಗೀತೆಗಳು, ಯರ‍್ರಗುಡಿಯ ಸುಂಕಪ್ಪ ಎಚ್.ಜಿ. ಅವರಿಂದ ಹೋರಾಟ ಗೀತೆಗಳು, ಇಬ್ರಾಹಿಂಪುರದ ಎಚ್. ಯರ‍್ರಿಸ್ವಾಮಿ ಅವರಿಂದ ಕ್ರಾಂತಿ ಗೀತೆಗಳು, ಕುರುಗೋಡಿನ ಕೆ.ಹನುಮಂತಪ್ಪ ಜೋಗಿ ಅವರಿಂದ ಕಿನ್ನರಿ ಜೋಗಿ ಪದಗಳು, ಕಂಪ್ಲಿ ತಾಲೂಕಿನ ಮೆಟ್ರಿಯ ಸಿ.ಡಿ. ಮೌನೇಶ್ ಅವರಿಂದ ತತ್ವಪದ ಮತ್ತು ದಾಸರ ಪದಗಳು, ಸಂಡೂರು ತಾಲೂಕಿನ ಭುಜಂಗನಗರದ ತಾಯಪ್ಪ ಅವರಿಂದ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ, ಸಂಗನಕಲ್ಲಿನ ಮಾರೆಮ್ಮ ಅವರಿಂದ ಸಂಪ್ರದಾಯ ಗೀತೆಗಳು, ಸಿರುಗುಪ್ಪ ತಾಲೂಕಿನ ಅರಳಿಗನೂರಿನ ನೀಲಗಂಗಮ್ಮ ಅವರಿಂದ ಶೋಭಾನೆ ಪದಗಳು ಸೇರಿದಂತೆ ವಿವಿಧ ಸಂಗೀತ ಗಾಯನ ಕೇಳುಗರ ಮನಸೂರೆಗೊಂಡವು. ಮುದ್ದಟನೂರು ಎಚ್‌.ತಿಪ್ಪೇಸ್ವಾಮಿ ಹಾರ್ಮೋನಿಯಂ ಹಾಗೂ ವಿರುಪಾಕ್ಷಪ್ಪ ತಬಲಾ ಸಾಥ್ ನೀಡಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಜಾನಪದ, ತತ್ವಪದ, ಸುಗಮ ಸಂಗೀತ, ಶೋಭಾನೆ ಪದಗಳು, ರಂಗಗೀತೆ ಸೇರಿದಂತೆ ಈ ನೆಲ ಮೂಲದ ಕಲಾಪ್ರಕಾರಗಳನ್ನು ಪ್ರಸ್ತುತಪಡಿಸುವ ಕಲೆ ಮತ್ತು ಕಲಾವಿದರರ ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ ಎಂದರು. ಜಾನಪದ ಸಾಹಿತ್ಯ ಹಾಗೂ ತತ್ವಪದಗಳಿಗೆ ತನ್ನದೇ ಆದ ಇತಿಹಾಸ ಹೊಂದಿದೆ. ಈ ಹಿಂದೆ ಕೆಲಸದಿಂದ ದಣಿದು ಬಂದ ಹಿರಿಯರು ಪದ ಹೇಳುತ್ತಾ ದಣಿವಾರಿಸಿಕೊಳ್ಳುತ್ತಿದ್ದರು. ಈ ಪ್ರಕಾರಗಳ ಕಲೆ ಮತ್ತು ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಉತ್ತಮ ಕಾರ್ಯಕ್ರಮ ಇದಾಗಿದೆ. ಹಿಂದಿನ ಕಾಲದಲ್ಲಿ ತತ್ವಪದ, ಜಾನಪದ ಗೀತೆಗಳು ವ್ಯಕ್ತಿಯನ್ನು ಕೆಳಮಟ್ಟದಿಂದ ಮೇಲ್ಮಟ್ಟಕ್ಕೆ ಉತ್ತಮ ನಾಗರಿಕರನ್ನಾಗಿ ಬೆಳೆಸುತ್ತಿದ್ದವು. ಗ್ರಾಮೀಣ ಭಾಗದಲ್ಲಿ ಜನಜೀವನ ಮತ್ತು ಉನ್ನತ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜನಪದ ಕಲೆಗಳು ಹಳ್ಳಿಗಳಲ್ಲಿ ಹವ್ಯಾಸ ಜೀವನವಾಗಿದ್ದವು ಎಂದರು.ತೊಗಲುಗೊಂಬೆಯ ಬೆಳಗಲ್ಲು ವೀರಣ್ಣ, ಕಲಾವಿದರಾದ ಮನ್ಸೂರ್ ಸುಭದ್ರಮ್ಮ ಸೇರಿದಂತೆ ಜಿಲ್ಲೆಯಲ್ಲಿ ಹಲವಾರು ರೀತಿಯ ಕಲಾವಿದರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು. ಜಾನಪದಕಾರರು, ತತ್ವಪದಕಾರರು ಎಲೆ ಮರೆ ಕಾಯಿಯಂತೆ ಬಯಸುವವರು. ಯಾವುದೇ ಪ್ರಚಾರವನ್ನು ಬಯಸುವವರಲ್ಲ, ತಮ್ಮದೇ ಆದ ಸಾಹಿತ್ಯ ಲೋಕ, ತತ್ವಪದ ಲೋಕದಲ್ಲಿ ಬದುಕಿದವರು ಎಂದು ಬಿಂಬಿಸಿದರು. ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷ ಟಿ.ಎಚ್.ಎಂ. ಬಸವರಾಜ, ಹಿರಿಯ ರಂಗಭೂಮಿ ಕಲಾವಿದೆ ಆದವಾನಿ ಬಿ.ವೀಣಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಹಿರಿಯ ತತ್ವಪದಗಳ ಕಲಾವಿದ ಸಿ.ಡಿ. ಮಾರೆಪ್ಪ, ಕರ್ನಾಟಕ ಬಯಲಾಟ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೆ.ರಂಗಾರೆಡ್ಡಿ ಸೇರಿದಂತೆ ವಿವಿಧ ಕಲಾವಿದರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

PREV

Recommended Stories

ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ