ಬದಲಾವಣೆ ಸಮಾಜದ ಒಳಿತಿನೆಡೆಗೆ ಇರಲಿ: ಕೆ.ಜಯಪ್ರಕಾಶ್‌ ಹೆಗ್ಡೆ

KannadaprabhaNewsNetwork |  
Published : Jun 30, 2025, 12:34 AM IST
29ಹೆಗ್ಡೆ | Kannada Prabha

ಸಾರಾಂಶ

ಶ್ರೀ ಕಲ್ಲಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ಕೋಟದ ಹರ್ತಟ್ಟು ಗಿಳಿಯಾರು ನಾಗರಿಕರ ಆಶ್ರಯದಲ್ಲಿ ‘ಗಮ್ಮತ್ತಿಗೆ ಆಟ - ಗಂಜಿ ಊಟ’ ಎಂಬ ಗ್ರಾಮೀಣ ಸೋಗಡುಗಳ ಅನಾವರಣ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಕುಂದಾಪುರ

ಸಾಮಾಜಿಕ ಬದಲಾವಣೆ ಆರೋಗ್ಯಕರವಾಗಿ ಮನುಕುಲದ ಒಳಿತಿಗಾಗಿರಬೇಕು ಎಂದು ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.ಭಾನುವಾರ ಇಲ್ಲಿನ ಶ್ರೀ ಕಲ್ಲಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ಕೋಟದ ಹರ್ತಟ್ಟು ಗಿಳಿಯಾರು ನಾಗರಿಕರ ಆಶ್ರಯದಲ್ಲಿ ‘ಗಮ್ಮತ್ತಿಗೆ ಆಟ - ಗಂಜಿ ಊಟ’ ಎಂಬ ಗ್ರಾಮೀಣ ಸೋಗಡುಗಳ ಅನಾವರಣ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ನಮ್ಮ ಜೀವನ ಕ್ರಮಗಳು ಬದಲಾವಣೆಗೊಳ್ಳುತ್ತಿದೆ. ಅದಲ್ಲೂ ಬಹುಮುಖ್ಯವಾಗಿ ಕೃಷಿ ಪದ್ಧತಿಗಳು ಆಧುನಿಕತೆಯಲ್ಲಿ, ಅತಿಯಾದ ರಾಸಾಯನಿಕಗಳ ಬಳಕೆ ಮನುಷ್ಯನ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಕರಾವಳಿಯ ವಿವಿಧ ಜನಪದ ಪ್ರಕಾರಗಳಲ್ಲಿ ಕಂಬಳವು ಒಂದು, ಅದರ ಉಳಿಗಾಗಿ ಸಾಕಷ್ಟು ಶ್ರಮಿಸಿದ್ದೇವೆ, ಯಾವುದೇ ಆಟಗಳಲ್ಲಿ ಜೂಜು ಒಳ್ಳೆಯದಲ್ಲ. ಅದರ ಬದಲಾಗಿ ನಾವು ನಮ್ಮ ಕುಷಿ ಹಾಗೂ ಪರಂಪರೆಯ ಉಳಿವಿಗಾಗಿ ಮಾಡಬೇಕುಸ ಎಂದು ಅಭಿಪ್ರಾಯಪಟ್ಟರು.ಕಾರ್ಯಕ್ರಮವನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ ಕುಂದರ್ ಉದ್ಘಾಟಿಸಿದರು. ಮುಖ್ಯ ಅಭ್ಯಾಗತರಾಗಿ ಕಲ್ಲಟ್ಟು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಾಜಿ ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್, ಕೋಟ ಪಂಚಾಯಿತಿ ಉಪಾಧ್ಯಕ್ಷ ಪಾಂಡು ಪೂಜಾರಿ, ಸದಸ್ಯ ಅಜಿತ್ ದೇವಾಡಿಗ, ಸಾಮಾಜಿಕ ಕಾರ್ಯಕರ್ತ ಕೆ.ದಿನೇಶ್ ಗಾಣಿಗ, ಸಂಘಟಕರಾದ ತಿಮ್ಮ ಕಾಂಚನ್, ಶೇಖರ್ ದೇವಾಡಿಗ, ಶ್ರೀಧರ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕೋಡಿ ರಾಜೇಶ್ ಕರ್ಕೇರ ಸ್ವಾಗತಿಸಿ ನಿರೂಪಿಸಿ ವಂದಿಸಿದರು.

ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಕಂಬಳ, ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ವಿಘ್ನೇಶ ದೇವಾಡಿ,ಗ ಸಮಾಜಸೇವಕ ಮಂಜುನಾಥ ಪೂಜಾರಿ ಅವರಿಗೆ ಸನ್ಮಾನ, ೬೫ ವರ್ಷ ಮೇಲ್ಪಟ್ಟ ಮಹಿಳಾ ಕೃಷಿಕರಿಗೆ ಕ್ರೀಡೆ, ಮಡಿಕೆ ಸ್ಪರ್ಧೆ, ಹಗ್ಗಜಗಾಟ, ತ್ರೋಬಾಲ್, ತೆಂಗಿನಕಾಯಿ ಎಸೆತ ಇತ್ಯಾದಿ ಗ್ರಾಮೀಣ ಕ್ರೀಡೆಗಳು ಜರಗಿದವು.

PREV

Recommended Stories

ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!