ಜನರಿಗೆ ಶುದ್ಧ ಕುಡಿವ ನೀರು ಪೂರೈಕೆಯಾಗಲಿ

KannadaprabhaNewsNetwork |  
Published : Nov 24, 2026, 12:15 AM IST
ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜುಬಿನ್ ಮೊಹಪಾತ್ರ ಅವರು ಸೋಮವಾರ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ ನಡೆಸಿ, ಕಲುಷಿತ ನೀರು ನಾಗರಿಕರಿಗೆ ಸರಬರಾಜು ಆಗದಂತೆ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. | Kannada Prabha

ಸಾರಾಂಶ

Let clean drinking water be supplied to the people.

- ಜಿ.ಪಂ. ಸಿಇಒ ಜುಬೀನ್ ಮೊಹಪಾತ್ರ ಸೂಚನೆ । ಯಾದಗಿರಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ

---------------

ಕನ್ನಡಪ್ರಭ ವಾರ್ತೆ ಯಾದಗಿರಿ

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜುಬಿನ್ ಮೊಹಪಾತ್ರ ಸೋಮವಾರ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ ನಡೆಸಿ ಜಿಲ್ಲೆಯ ಕುಡಿಯುವ ನೀರಿನ ಮೂಲಗಳ ಹಾಗೂ ಓವರ್ ಹೆಡ್ ಟ್ಯಾಂಕ್ ಸ್ವಚ್ಛತೆಗೆ ವಿಶೇಷ ಗಮನ ನೀಡಬೇಕು. ಹಾಗೂ ಯಾವುದೇ ಪರಿಸ್ಥಿತಿಯಲ್ಲಿ ಕಲುಷಿತ ನೀರು ನಾಗರಿಕರಿಗೆ ಸರಬರಾಜು ಆಗದಂತೆ ಅವಶ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಲ ಮೂಲಗಳ ಪರೀಕ್ಷೆ, ಅಂಗನವಾಡಿ ಮತ್ತು ಶಾಲಾ ಕೇಂದ್ರಗಳಿಗೆ ಕುಡಿಯುವ ನೀರಿನ ಸಮರ್ಪಕ ಸರಬರಾಜು, ಜಲ ಜೀವನ್ ಮಿಷನ್ ಮತ್ತು ಇತರೆ ಯೋಜನೆ ಕಾಮಗಾರಿಗಳ ಪ್ರಗತಿಯನ್ನು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಖುದ್ದಾಗಿ ಪರಿಶೀಲಿಸಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳ ಬಗ್ಗೆ ತೀವ್ರ ನಿಗಾ ಇಡಬೇಕು. ನಾಗರಿಕರಿಗೆ ಅಶುದ್ಧ ಹಾಗೂ ಕಲುಷಿತ ನೀರು ಪೂರೈಕೆಯಾಗದಂತೆ ನಿಗಾವಹಿಸಲು ತಿಳಿಸಿದ ಅವರು, ಜಿಲ್ಲೆಯಲ್ಲಿನ ಸಣ್ಣ ಹಾಗೂ ದೊಡ್ಡ ಪ್ರಮಾಣದ ಓವರ್ ಹೆಡ್ ಟ್ಯಾಂಕ್ಗಳ ಸ್ವಚ್ಛತೆಗೆ ವಿಶೇಷ ಗಮನ ನೀಡಬೇಕು. ಸಮರ್ಪಕ ಕ್ರೀಯಾ ಯೋಜನೆಯನ್ವಯ ಸೂಕ್ತ ಕ್ರಮ ಆಗಬೇಕೆಂದು ಅವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಆರ್ಸೆನಿಕ್, ಫ್ಲೋರೈಡ್ ಹಾಗೂ ಹೆಚ್ಚು ಐರನ್ ಕಂಟೆಂಟ್ ಹೊಂದಿರುವ ನೀರು ಪ್ರದೇಶ ಹಾಗೂ ಸ್ಥಳಗಳನ್ನು ಗುರುತಿಸಿ, ವರದಿ ಸಿದ್ಧಪಡಿಸಬೇಕು. ಮಾರ್ಗಸೂಚಿ ಅನ್ವಯ ಅಂತರ್ಜಲ ಸಂಪನ್ಮೂಲಗಳ ಪರೀಕ್ಷೆ ನಡೆಸಬೇಕು. ಮುಂದಿನ ಒಂದು ತಿಂಗಳ ಅವಧಿಯಲ್ಲಿ ಆಯಾ ಬೋರ್ವೆಲ್ಗಳ ಜಿಯೋ ಟ್ಯಾಗ್ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಜನಜೀವನ ಮಿಷನ್ ಹಾಗೂ ಜಲಧಾರೆ ಕಾಮಗಾರಿಗಳನ್ನು ಚುರುಕುಗೊಳಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಏಜೆನ್ಸೀಸ್ ಗೆ ಸೂಚನೆ ನೀಡಿದರು.

ಸಮಸ್ಯಾತ್ಮಕ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಗಾಗಿ, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ₹1 ಕೋಟಿ ಅನುದಾನ ಕ್ರಿಯಾಯೋಜನೆ ಹಾಗೂ ಜಿಲ್ಲಾ ಡಿ. ಎಮ್. ಎಫ್ ಅನುದಾನದಡಿ ಎಷ್ಟು ಹಳ್ಳಿಗಳಿಗೆ ನೀರು ಪೂರೈಕೆಯಾಗಲಿದೆ ಎಂಬುದರ ಬಗ್ಗೆ ಗ್ರಾಮವಾರು ಪಟ್ಟಿ ಸಲ್ಲಿಸಲು ಯೋಜನಾ ನಿರ್ದೇಶಕ ಬಸವರಾಜ ಶರಬೈ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಉಪ ಕಾರ್ಯದರ್ಶಿಗಳಾದ ಶರಣಬಸವ ಸಮಿತಿಯ ಸದಸ್ಯರು, ಕಾರ್ಯಪಾಲಕ ಅಭಿಯಂತರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಸೇರಿದಂತೆ ತಾಲೂಕ ಮಟ್ಟದ ಅಧಿಕಾರಿಗಳು ಮತ್ತು ಮೆಗಾ ಕನಸ್ಟ್ರಕ್ಸನ್ ಇಂಜಿನೀಯರಿಂಗ್ ಸಂಸ್ಥೆಯ ಪ್ರತಿನಿಧಿ, ಜೆಜೆಎಂ, ಸ್ವಚ್ಛ ಭಾರತ್‌ ಅಭಿಯಾನ ಮುಂತಾದ ಸಿಬ್ಬಂದಿ ಸಭೆಯಲ್ಲಿ ಉಪಸ್ಥಿತರಿದ್ದರು.

-----ಫೋಟೊ-----

23ವೈಡಿಆರ್‌1 : ಯಾದಗಿರಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜುಬಿನ್ ಮೊಹಪಾತ್ರ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ ನಡೆಸಿ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಶ್ವ ವಿಕಲಚೇತನರ ದಿನಾಚರಣೆ ವ್ಯವಸ್ಥಿತವಾಗಿ ಆಯೋಜಿಸಿ: ಡಾ. ದುರಗೇಶ್
ಯುವಜನ ಓದುವ ಹವ್ಯಾಸ ಬೆಳೆಸಿಕೊಳ್ಳಲಿ: ಶಾಸಕ ದಿನಕರ ಶೆಟ್ಟಿ