ಕನ್ನಡಪ್ರಭ ವಾರ್ತೆ ಮೈಸೂರು
ಕರ್ನಾಟಕ ಹಿತರಕ್ಷಣಾ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಅಂಗವಾಗಿ ನಗರದ ಡಿ. ದೇವರಾಜ ಅರಸು ರಸ್ತೆ, ವಿನೋಬ ರಸ್ತೆ, ಶಿವರಾಂಪೇಟೆ ಸುತ್ತಮುತ್ತಲ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಗುಲಾಬಿ ಹೂವನ್ನು ನೀಡಿ, ಕನ್ನಡ ಪದಗಳನ್ನು ಸರಿಯಾದ ರೀತಿಯಲ್ಲಿ ಬಳಸುವಂತೆ ಅಭಿಯಾನ ನಡೆಸಿತು.ಇತ್ತೀಚೆಗೆ ಸ್ಥಳೀಯ ಹಬ್ಬಗಳ ಹೆಸರನ್ನು ಅಪಭ್ರಂಶ ಗೊಳಿಸುತ್ತಿರುವ ಉದಾಹರಣೆಗಳು ಹೆಚ್ಚುತ್ತಿವೆ. ಇತ್ತೀಚಿನ ದಿನಗಳಲ್ಲಿ ದೀಪಾವಳಿಯನ್ನು ದಿವಾಳಿ ಎಂದು ಶುಭ ಕೋರುವುದು, ಹಾಗೆಯೇ ದಸರಾವನ್ನು ದುಸ್ಸೆರಾ ಎಂದು ತಪ್ಪಾಗಿ ಶುಭ ಕೋರುತ್ತಿರುವ ಅನ್ಯ ಭಾಷೆ ಶೈಲಿಯಲ್ಲಿ ಪದಬಳಕೆ ಶುಭ ಕೋರುವುದು ಖಂಡನೀಯ, ಅದರ ಅರ್ಥವೇ ಬೇರೆ ಇರುತ್ತದೆ, ಕರ್ನಾಟಕ ಹಿತ ರಕ್ಷಣಾ ವೇದಿಕೆ ವತಿಯಿಂದ ಎಲ್ಲ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಗುಲಾಬಿ ನೀಡಿ ಈ ಮನವಿ ಮಾಡಿಕೊಳ್ಳಲಾಯಿತು.
ಕೆಲವು ಅಂಗಡಿ ಮುಂಗಟ್ಟುಗಳಲ್ಲಿ ದೀಪಾವಳಿಯನ್ನು ದಿವಾಳಿಯೆಂದು ಬರೆದು ಶುಭ ಕೋರುತ್ತಿರುವದನ್ನು ಖಂಡಿಸಿ ಅವರಿಗೆ ತಿಳಿ ಹೇಳಿ ದಯಮಾಡಿ ಕನ್ನಡವನ್ನು ಸರಿಯಾಗಿ ಪ್ರಯೋಗಿಸಿ ಗೌರವಿಸಿ ಎಂದು ಮನವಿ ಮಾಡಿಕೊಂಡರು.ಕರ್ನಾಟಕ ಹಿತ ರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್, ಕೆಪಿಸಿಸಿ ಸದಸ್ಯ ನಟರಾಜ್, ಗುರುರಾಜ್ ಶೆಟ್ಟಿ, ಪ್ರಮೋದ್, ನಿತಿನ್, ರವಿಚಂದ್ರ, ಮಹಾದೇವ್, ಮಂಜುನಾಥ್, ವಿಶಾಲ್, ಮಂಜು, ಮಾದೇಗೌಡ, ಸೋಮಶೇಖರ್ ಆಚಾರ್ ಇದ್ದರು.
9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಕನ್ನಡಪ್ರಭ ವಾರ್ತೆ ಮೈಸೂರುಕಾವೇರಿ ಆಯುರ್ವೇದಿಕ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಜಾಗತಿಕ ಆರೋಗ್ಯಕ್ಕಾಗಿ ಆಯುರ್ವೇದದ ಆವಿಷ್ಕಾರ ಕುರಿತು 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.ಜೆಎಸ್ಎಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ಬಿ. ಗುರುಬಸವರಾಜು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆರೋಗ್ಯದ ಮಹತ್ವ, ಆಯುರ್ವೇದ ವೈದ್ಯ ಪದ್ಧತಿ ವಿಕಸನಗೊಂಡ ರೀತಿ ಹಾಗೂ ಸಂಶೋಧನೆಯ ಬಗ್ಗೆ ತಿಳಿಸಿಕೊಡುತ್ತಾ, ಇಂದಿನ ಆಧುನಿಕ ಯುಗದಲ್ಲಿ ಆಯುರ್ವೇದದ ಪ್ರಸ್ತುತತೆ, ಆಯುರ್ವೇದದಲ್ಲಿ ವಿವರಿಸಲಾದ ಜೀವನ ಶೈಲಿಯ ಅಳವಡಿಕೆ, ದೇಹ ರಚನೆ ಮತ್ತು ಪ್ರಕೃತಿಯ ಬಗ್ಗೆ ಆಯುರ್ವೇದ ವಿದ್ಯಾರ್ಥಿಗಳು ಆಳವಾದ ಜ್ಞಾನ ಹೊಂದಬೇಕು ಎಂದು ಹೇಳಿದರು.ಕಾವೇರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಜಿ.ಆರ್. ಚಂದ್ರಶೇಖರ್ ಅಧ್ಯಕ್ಷತೆವಹಿಸಿ ಮಾತನಾಡಿ, ಆಯುರ್ವೇದದಲ್ಲಿ ವಿವರಿಸಲಾಗಿರುವ ಯೋಗ, ಧ್ಯಾನ ಹಾಗೂ ಪ್ರಾಣಾಯಾಮದ ಮಹತ್ವವನ್ನು ವಿವರವಾಗಿ ಹೇಳುವುದರೊಂದಿಗೆ ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗಾಭ್ಯಾಸ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಕಾವೇರಿ ಸಮೂಹ ಶಿಕ್ಷಣ ಸಂಸ್ಥೆಗಳ ಎಂಡಿ ಡಾ. ಸರಳಾ ಚಂದ್ರಶೇಖರ್ ಅತಿಥಿಯಾಗಿ ಪಾಲ್ಗೊಂಡಿದ್ದರು. ಆಸ್ಪತ್ರೆಯ ನಿರ್ದೇಶಕ ಡಾ.ಎನ್. ಕೃಷ್ಣಪ್ರಸಾದ್, ಕಾಲೇಜು ಪ್ರಾಂಶುಪಾಲ ಡಾ. ರಾಮಚಂದ್ರ ನೇಸರ್ಗಿ ಮೊದಲಾದವರು ಇದ್ದರು.