ಜನರಲ್ಲಿ ಪರಿಸರ ಜಾಗೃತಿ ಹೆಚ್ಚಾಗಲಿ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

KannadaprabhaNewsNetwork |  
Published : Aug 13, 2024, 12:51 AM IST
ಭಟ್ಕಳದ ಕರಿಕಲ್ ಶ್ರೀರಾಮ ಧ್ಯಾನ ಮಂದಿರದಲ್ಲಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅರಣ್ಯ ಹಕ್ಕು ಹೋರಾಟಗಾರರ ವೇದಿಕೆಯ ದಶಲಕ್ಷ ಗಿಡ ನೆಡುವ ಕಾರ್ಯಕ್ಕೆ ಗಿಡಕ್ಕೆ ನೀರು ಹಾಕುವುದರ ಮೂಲಕ ಚಾಲನೆ ನೀಡಿದರು. | Kannada Prabha

ಸಾರಾಂಶ

ಪರಿಸರದೊಂದಿಗೆ ಅರಣ್ಯವಾಸಿಗಳು ಸಹಭಾಗಿತ್ವದಲ್ಲಿ ಜೀವಿಸುವುದರೊಂದಿಗೆ ಅರಣ್ಯವಾಸಿಗಳು ಪರಿಸರಕ್ಕೆ ಪೂರಕವಾಗಿ ಜೀವಿಸಬೇಕೆಂಬ ಉದ್ದೇಶದಿಂದ ಗಿಡ ನೆಡುವ ಕಾರ್ಯಕ್ರಮವನ್ನು ಸಂಘಟಿಸಲಾಗಿದೆ.

ಭಟ್ಕಳ: ಅರಣ್ಯವಾಸಿಗಳಿಂದ ಹಮ್ಮಿಕೊಂಡ ದಶಲಕ್ಷ ಗಿಡ ನೆಡುವ ಅಭಿಯಾನದಿಂದ ನಿಸರ್ಗದಲ್ಲಿ ಹಸಿರು ಮತ್ತು ಪರಿಸರ ಉಳಿಸಿ ಬೆಳೆಸಲು ಸಹಕಾರಿ ಆಗಿದೆ. ಇಂತಹ ಕಾರ್ಯಕ್ರಮದಿಂದ ಜನರಲ್ಲಿ ಪರಿಸರದ ಬಗ್ಗೆ ಜಾಗೃತಿ ಹೆಚ್ಚಾಗಲಿ ಎಂದು ನಾಮಧಾರಿ ಸಮಾಜದ ಕುಲಗುರುಗಳು ಮತ್ತು ಉಜಿರೆಯ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದರು.

ಭಾನುವಾರ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ ಕರಿಕಲ್ ಧ್ಯಾನಮಂದಿರದ ಆವರಣದಲ್ಲಿ ದಶಲಕ್ಷ ಗಿಡ ನೆಡುವ ಅಭಿಯಾನದ ಅಂಗವಾಗಿ ಗಿಡಕ್ಕೆ ನೀರು ಹಾಕುವುದರೊಂದಿಗೆ ಆಶೀರ್ವಾದ ಮಾಡಿದರು.

ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಮಾತನಾಡಿ, ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ರಾಜ್ಯಾದ್ಯಂತ ಅರಣ್ಯವಾಸಿಗಳಿಂದ ದಶಲಕ್ಷ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಪರಿಸರದೊಂದಿಗೆ ಅರಣ್ಯವಾಸಿಗಳು ಸಹಭಾಗತ್ವದಲ್ಲಿ ಜೀವಿಸುವದರೊಂದಿಗೆ ಅರಣ್ಯವಾಸಿಗಳು ಪರಿಸರಕ್ಕೆ ಪೂರಕವಾಗಿ ಜೀವಿಸಬೇಕೆಂಬ ಉದ್ದೇಶದಿಂದ ಗಿಡ ನೆಡುವ ಕಾರ್ಯಕ್ರಮವನ್ನು ಸಂಘಟಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿವಿಧ ತಾಲೂಕಿನ ಅಧ್ಯಕ್ಷರಾದ ಭೀಮಸಿ ವಾಲ್ಮೀಕಿ ಯಲ್ಲಾಪುರ, ಶಿವಾನಂದ ಜೋಗಿ ಮುಂಡಗೋಡ, ರಾಜೇಶ ಮಿತ್ರ ನಾಯ್ಕ ಅಂಕೋಲಾ, ರಾಜು ಹರಿಕಾಂತ ಅಂಕೋಲಾ, ಪಾಂಡುರಂಗ ನಾಯ್ಕ ಬೆಳಕೆ, ದೇವರಾಜ ಗೊಂಡ, ರಾಮು ಮರಾಠಿ, ವಿನೋದ ನಾಯ್ಕ ಯಲ್ ಕೊಡಗಿ, ಮಂಜುನಾಥ ಮರಾಠಿ ಭಟ್ಕಳ ಮುಂತಾದವರಿದ್ದರು. ರವೀಂದ್ರ ನಾಯ್ಕ ಮತ್ತು ತಂಡದ ಪರಿಸರ ಜಾಗೃತಿ ಕಾರ್ಯವನ್ನು ಸ್ವಾಮೀಜಿಯವರು ಶ್ಲಾಘಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!