ಎಲ್ಲರಿಗೂ ಸಮಾನತೆ ಲಭ್ಯವಾಗಲಿ: ನ್ಯಾ. ಅರುಣ್ ಕುಮಾರ್

KannadaprabhaNewsNetwork | Published : Feb 21, 2024 2:01 AM

ಸಾರಾಂಶ

ಹೊಸಕೋಟೆ: ಸಮಾಜದ ಪ್ರತಿಯೊಬ್ಬರಿಗೂ ಸಮಾನತೆಯ ಬದುಕು ಲಭ್ಯವಾಗಬೇಕು ಎನ್ನುವುದೇ ವಿಶ್ವ ಸಾಮಾಜಿಕ ನ್ಯಾಯಾಧೀನದ ಉದ್ದೇಶ ಎಂದು ಜೆಎಂಎಫ್‌ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಅರುಣ್ ಕುಮಾರ್ ತಿಳಿಸಿದರು.

ಹೊಸಕೋಟೆ: ಸಮಾಜದ ಪ್ರತಿಯೊಬ್ಬರಿಗೂ ಸಮಾನತೆಯ ಬದುಕು ಲಭ್ಯವಾಗಬೇಕು ಎನ್ನುವುದೇ ವಿಶ್ವ ಸಾಮಾಜಿಕ ನ್ಯಾಯಾಧೀನದ ಉದ್ದೇಶ ಎಂದು ಜೆಎಂಎಫ್‌ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಅರುಣ್ ಕುಮಾರ್ ತಿಳಿಸಿದರು.

ನಗರದ ವಕೀಲರ ಸಂಘದ ಆವರಣದಲ್ಲಿ ಜಿಲ್ಲಾ, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ತಾರತಮ್ಯ ಮತ್ತು ಅಸಮಾನತೆ ಇಲ್ಲದೆ ವ್ಯಕ್ತಿಗೆ ಸಮಾನ ಹಕ್ಕುಗಳನ್ನು ನೀಡುವುದು ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದರು.

ವಕೀಲರ ಸಂಘದ ಅಧ್ಯಕ್ಷ ಎಂ ವೆಂಕಟಸ್ವಾಮಿ ಮಾತನಾಡಿ, ದೇಶದಲ್ಲಿ ಸಮಾನತೆ, ಸಾಮಾಜಿಕ ನ್ಯಾಯ, ಪ್ರತಿಯೊಬ್ಬ ವ್ಯಕ್ತಿಗೂ ಧಕ್ಕದ ಸಂದರ್ಭದಲ್ಲಿ ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡುವುದರ ಮೂಲಕ ಪ್ರತಿಯೊಬ್ಬರಿಗೂ ಬದುಕುವ ಹಕ್ಕು ಹಾಗೂ ಸಮಾನತೆಯ ಸಮಾಜ ನಿರ್ಮಿಸಿದರು ಎಂದರು.

ಸಂಪನ್ಮೂಲ ವ್ಯಕ್ತಿ ಮುದ್ಕೂರು ಮನೋಹರ್ ಮೂಲಭೂತ ಕಾನೂನುಗಳ ಬಗ್ಗೆ ವಿಚಾರ ಮಂಡಿಸಿದರು. ಹೊಸಕೋಟೆ ಜೆಎಂಎಫ್‌ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಬಸವರಾಜ ಜಿ ಸನದಿ, ವಕೀಲರ ಸಂಘದ ಉಪಾಧ್ಯಕ್ಷ ಕೆ ನಾಗರಾಜ್, ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್, ಚಂಟಿ ಕಾರ್ಯದರ್ಶಿ ಟೀಕೆ ಮುನಿರಾಜ್, ಖಜಾಂಚಿ ರವಿಕುಮಾರ್ ಇತರರಿದ್ದರು.ಬಾಕ್ಸ್‌...........

ಮಕ್ಕಳಲ್ಲಿ ಸಮಾನತೆ ಮೂಡಿಸಿ:

ಬಾಲ್ಯದಿಂದಲೆ ಮಕ್ಕಳಿಗೆ ಪೋಷಕರು ಸಮಾನತೆಯ ಭಾವ ಮೂಡಿಸಿದರೆ ಮಾತ್ರ ಅಸಮಾನತೆಯನ್ನು ಸಮಾಜದಲ್ಲಿ ಬುಡ ಸಮೇತ ಕಿತ್ತುಹಾಕಲು ಸಾಧ್ಯವಾಗುತ್ತದೆ. ಸಮಾನತೆ ಆರ್ಥಿಕವಾಗಿ, ರಾಜಕೀಯವಾಗಿ ಬೇಡವಾಗಿದ್ದರೂ ಸಾಮಾಜಿಕವಾಗಿ ಸಮಾನತೆ ಅತ್ಯವಶ್ಯಕ. ಈ ನಿಟ್ಟಿನಲ್ಲಿ ಇಂದಿನ ಪೋಷಕರು ಅಡಿಪಾಯ ಹಾಕಿದರೆ ಮುಂದಿನ ಪೀಳಿಗೆಗೆ ಸಮಾನತೆಯ ದೇಶ ನಿರ್ಮಾಣ ಸಾಧ್ಯ ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಚೈತ್ರ ವಿ ಕುಲಕರ್ಣಿ ತಿಳಿಸಿದರು.ಫೋಟೋ : 20 ಹೆಚ್‌ಎಸ್‌ಕೆ 1

ಹೊಸಕೋಟೆ ನಗರದ ವಕೀಲರ ಸಂಘದ ಆವರಣದಲ್ಲಿ ನಡೆದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಕಾರ್ಯಕ್ರಮವನ್ನ ಹಿರಿಯ ಸಿವಿಲ್ ನ್ಯಾಯಾಧೀಶ ಅರುಣ್ ಕುಮಾರ್ ಜಿ, ವಕೀಲರ ಸಂಘದ ಅಧ್ಯಕ್ಷ ಎಂ ವೆಂಕಟಸ್ವಾಮಿ ಉದ್ಘಾಟಿಸಿದರು.

Share this article