ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಗೌರವದಿಂದ ಬದುಕಲಿ: ಶಾಸಕ ಬಾಲಕೃಷ್ಣ

KannadaprabhaNewsNetwork |  
Published : Feb 13, 2024, 12:47 AM IST
ಮಾಗಡಿ ತಾಲೂಕಿನ ಬೆಳಗುಂಬ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಆಗಮಿಸಿದ ಸಂವಿಧಾನ ಜಾಗೃತಿ ರಥಕ್ಕೆ ಶಾಸಕ ಬಾಲಕಷ್ಣ ಅದ್ದೂರಿ ಸ್ವಾಗತ ಕೋರಿದರು. | Kannada Prabha

ಸಾರಾಂಶ

ಕೆಲವು ಪಕ್ಷಗಳು ಸಂವಿಧಾನವನ್ನು ಬದಲಾಯಿಸುವ ಮಾತುಗಳನ್ನಾಡುತ್ತಾರೆ. ಇದು ಸಂವಿಧಾನದ ಮೇಲೆ ನಡೆಯುವ ದೌರ್ಜನ್ಯವಾಗಿದೆ.

ಕನ್ನಡಪ್ರಭ ವಾರ್ತೆ ಮಾಗಡಿ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ನೆಮ್ಮದಿಯಿಂದ ಬದುಕುವ ವಾತಾವರಣವನ್ನು ನಿರ್ಮಿಸುವ ಗುರಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಂದಿದ್ದಾರೆ ಎಂದು ಶಾಸಕ ಬಾಲಕಷ್ಣ ಹೇಳಿದರು.

ತಾಲೂಕಿನ ಬೆಳಗುಂಬ ಗ್ರಾಪಂ ವ್ಯಾಪ್ತಿಯ ಸಿಡಗನಹಳ್ಳಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಕೆಲವು ಪಕ್ಷಗಳು ಸಂವಿಧಾನವನ್ನು ಬದಲಾಯಿಸುವ ಮಾತುಗಳನ್ನಾಡುತ್ತಾರೆ. ಇದು ಸಂವಿಧಾನದ ಮೇಲೆ ನಡೆಯುವ ದೌರ್ಜನ್ಯವಾಗಿದೆ.

ಡಾ.ಅಂಬೇಡ್ಕರ್ ರ ಆಶಯವನ್ನು ನಾವೆಲ್ಲರೂ ಪ್ರಾಮಾಣಿಕವಾಗಿ ಈಡೇರಿಸುವ ಮೂಲಕ ಸಂವಿಧಾನವನ್ನು ಕಾಪಾಡಬೇಕು. ನಮ್ಮ ಸರ್ಕಾರದ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಮಂತ್ರಿ ಮಂಡಲದ ಎಲ್ಲಾ ಸಚಿವರು ಮತ್ತು ಶಾಸಕರು 75ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾವನ್ನು ರಾಜ್ಯಾದ್ಯಂತ ಸಂಚರಿಸಿ ಈ ನಾಡಿನ ಕಟ್ಟಕಡೆಯ ವ್ಯಕ್ತಿಗೂ ಸಂವಿಧಾನದ ಮಹತ್ವ, ಹಕ್ಕುಗಳು, ಸಮಾನತೆ ಸಾರ್ವಭೌಮತ್ವವನ್ನು ತಿಳಿಸುವ ಕೆಲಸವನ್ನು ಮಾಡುತ್ತಿದ್ದು. ಗ್ರಾಮೀಣ ಜನರು ಈ ಸಂವಿಧಾನದ ಆಶಯಗಳನ್ನು ಅರ್ಥೈಸಿಕೊಂಡು ಸಮಾಜದಲ್ಲಿ ಸಮಾನತೆಯಿಂದ ಬದುಕಬೇಕೆಂದರು.

ಬೆಳಗುಂಬ ಗ್ರಾಪಂ ಅಧ್ಯಕ್ಷ ತಿರುಮಲೆ ಭೈರಪ್ಪ ಮಾತನಾಡಿದರು.

ಪಟ್ಟಣದಲ್ಲಿ ಅಂಬೇಡ್ಕರ್ ಜಾಗೃತಿ ಜಾಥ ರಥಕ್ಕೆ ಅದ್ಧೂರಿ ಸ್ವಾಗತ ಕೋರಲಾಯಿತು, ಮುಖಂಡರಾದ ಇಓ ಚಂದ್ರು, ಸಮಾಜಕಲ್ಯಾಣ ಅಧಿಕಾರಿ ಪ್ರಕಾಶ್, ಸಹಾಯಕ ನಿರ್ದೇಶಕ ಗಂಗಾಧರ್, ಎಸ್ಸಿ,ಎಸ್ಟಿ ನಾಮನಿರ್ದೇಶಕ ನರಸಿಂಹಮೂರ್ತಿ, ಕೃಷಿ ಸಹಾಯಕ ನಿರ್ದೇಶಕಿ ವಿಜಯ ಸವಣೂರು, ವಲಯ ಅರಣ್ಯಾಧಿಕಾರಿ ಚೈತ್ರ, ಆರೋಗ್ಯ ಅಧಿಕಾರಿ ಡಾ.ಚಂದ್ರಶೇಖರ್, ಪುರಸಭಾ ಮುಖ್ಯಾಧಿಕಾರಿ ಶಿವರುದ್ರಯ್ಯ, ಸಾಮಾಜಿಕ ಅರಣ್ಯ ಅಧಿಕಾರಿ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್, ಗ್ರಾಪಂ ಮಾಜಿ ಅಧ್ಯಕ್ಷ ಕೋಟಪ್ಪ, ಸುರೇಶ್, ಜಯರಾಮ್, ವೆಂಕಟೇಶ್, ವಿಶ್ವ ಪುರಸಭೆ ಸದಸ್ಯರಾದ ಕೆ.ವಿ.ಬಾಲು, ಮಾಡಬಾಳ್ ಸಿ.ಜಯರಾಂ ಸೇರಿ ಅನೇಕ ಗಣ್ಯರು ಭಾಗವಹಿಸಿದ್ದರು.

PREV

Recommended Stories

ವಿಶ್ವಾದ್ಯಂತ ಒಂದೇ ದಿನ ಕಾಂತಾರ ಚಾಪ್ಟರ್ 1 ಬಿಡುಗಡೆ
ಈರುಳ್ಳಿ, ಹೂ, ಪಚ್ಚ ಬಾಳೆ ಬೆಲೆ ಧರೆಗೆ!