ಅರ್ಹ ಪ್ರತಿಯೊಬ್ಬ ನಾಗರಿಕ ಮತದಾರರ ಪಟ್ಟಿಗೆ ಸೇರ್ಪಡೆಯಾಗಲಿ: ವಿಪುಲ್ ಬನ್ಸಲ್

KannadaprabhaNewsNetwork |  
Published : Sep 24, 2026, 02:15 AM IST
ಸಭೆಯಲ್ಲಿ ಜಿಲ್ಲಾ ಮತದಾರರ ಪಟ್ಟಿಯ ವೀಕ್ಷಕ ವಿಪುಲ್ ಬನ್ಸಲ್ ಮಾತನಾಡಿದರು. | Kannada Prabha

ಸಾರಾಂಶ

ಅರ್ಹ ಪ್ರತಿಯೊಬ್ಬ ನಾಗರಿಕನೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದು ಪ್ರಜಾಪ್ರಭುತ್ವದ ಮೂಲ ಆಶಯವಾಗಿದೆ.

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಸಭೆಯಲ್ಲಿ ಜಿಲ್ಲಾ ಮತದಾರರ ಪಟ್ಟಿಯ ವೀಕ್ಷಕ

ಕನ್ನಡಪ್ರಭ ವಾರ್ತೆ ಗದಗ

ಅರ್ಹ ಪ್ರತಿಯೊಬ್ಬ ನಾಗರಿಕನೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದು ಪ್ರಜಾಪ್ರಭುತ್ವದ ಮೂಲ ಆಶಯವಾಗಿದೆ. ಹೀಗಾಗಿ, ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಅತ್ಯಂತ ನಿಖರವಾಗಿ ಮತ್ತು ಪಾರದರ್ಶಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ವಾಣಿಜ್ಯ ತೆರಿಗೆಗಳ ಇಲಾಖೆ ಆಯುಕ್ತ ಹಾಗೂ ಜಿಲ್ಲಾ ಮತದಾರರ ಪಟ್ಟಿಯ ವೀಕ್ಷಕ ವಿಪುಲ್ ಬನ್ಸಲ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಸಭೆ ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅರ್ಹ ಮತದಾರರ ನೋಂದಣಿ 18 ವರ್ಷ ತುಂಬಿದ ಯುವಕ-ಯುವತಿಯರು ಹಾಗೂ ಇಲ್ಲಿಯವರೆಗೆ ಮತದಾರರ ಪಟ್ಟಿಗೆ ಸೇರ್ಪಡೆಯಾಗದ ಅರ್ಹ ನಾಗರಿಕರ ಹೆಸರುಗಳನ್ನು ಆದ್ಯತೆಯ ಮೇರೆಗೆ ಸೇರ್ಪಡೆಗೊಳಿಸಲು ಕ್ರಮವಹಿಸಬೇಕು ಎಂದರು.

ದೋಷರಹಿತ ಮತದಾರರ ಪಟ್ಟಿಯಲ್ಲಿರುವವರ ಹೆಸರು, ವಿಳಾಸ, ಭಾವಚಿತ್ರ ಮುಂತಾದ ತಿದ್ದುಪಡಿಗಳನ್ನು (ನಮೂನೆ 8)ರಲ್ಲಿ ತ್ವರಿತವಾಗಿ ಪರಿಶೀಲಿಸಿ ಸರಿಪಡಿಸುವುದು ಹಾಗೂ ಮೃತಪಟ್ಟ ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು (ನಮೂನೆ 7) ನಿಯಮಾನುಸಾರ ತೆಗೆದುಹಾಕುವುದು. ಬಿಎಲ್ಓಗಳ ಕರ್ತವ್ಯ ಜವಾಬ್ದಾರಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್‌ ಮಾತನಾಡಿ, ಗದಗ ಜಿಲ್ಲೆಯಲ್ಲಿ ಒಟ್ಟು 122 ಗ್ರಾಮ ಪಂಚಾಯಿತಿಗಳಿದ್ದು ವಿಧಾನಸಭಾ ಮತ ಕ್ಷೇತ್ರವನ್ನು ನಾಲ್ಕು ವಿಭಾಗಗಳಾಗಿ ಶಿರಹಟ್ಟಿ 65 ಗದಗ 66 ರೋಣ 67 ನರಗುಂದ 68 ವಿಂಗಡಿಸಲಾಗಿದೆ. ಒಟ್ಟು 353 ಗ್ರಾಮಗಳು ಮತ್ತು 203 ವಾರ್ಡ್ ಗಳಿವೆ. ಜಿಲ್ಲೆಯಲ್ಲಿ ರಾಜಕೀಯ ಪಕ್ಷಗಳಾದ ಐಎನ್‌ಸಿ 967, ಬಿಜೆಪಿ 967, ಜೆಡಿಎಸ್ 62, ಸಿಪಿಐಎಂ 30 ಬಿಎಲ್ಎಗಳನ್ನು ಮಾಡಿವೆ. ಜಿಲ್ಲಾದ್ಯಂತ ಚುನಾವಣಾ ಮತಗಟ್ಟೆಗಳು 983 ಇವೆ, ಬಿಎಲ್ಓ ಗಳು 983 ಜನ ಮತ್ತು ಬಿಎಲ್ಓ ಸೂಪರ್ವೈಸರ್ಸ್ 97 ಜನ ನೇಮಿಸಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದರು.

ಜಿಪಂ ಸಿಇಒ ಮುಕುಲ್ ಜೈನ್ ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 9,02,947 ಮತದಾರರು ಇದ್ದು 7,82,232 ಡಿಜಿಟಲೀಕರಣಗೊಂಡಿದ್ದು ಪ್ರತಿಶತ 86.63 ಎನ್ಯುಮರೇಷನ್‌ ಫಾರ್ಮ್ ಡಿಜಿಟಲೀಕರಣಗೊಂಡಿವೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಮಾತನಾಡಿ, ಜಿಲ್ಲೆಯಲ್ಲಿ ಯುವ ಮತದಾರರು ಪಟ್ಟಿಯಲ್ಲಿ ಪುರುಷರು 2232 ಮತ್ತು ಮಹಿಳೆಯರು 1903 ಸೇರಿ ಒಟ್ಟು 4135 ಯುವ ಮತದಾರರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ವಿಶೇಷ ಅಭಿಯಾನದಲ್ಲಿ ಪಾಲ್ಗೊಂಡು ನೋಂದಾಯಿಸಿದ್ದಾರೆ. ಮತದಾರ ಪಟ್ಟಿ ವಿಶೇಷ ಅಭಿಯಾನದಲ್ಲಿ ಒಟ್ಟು 8166 ಹೊಸಬರು ಅರ್ಜಿ ಸಲ್ಲಿಸಿದ್ದಾರೆ ಎಂದರು.

ಸಭೆಯಲ್ಲಿ ಎಸಿ ಗಂಗಪ್ಪ ಎಂ., ಜಿಪಂ ಮುಖ್ಯ ಯೋಜನಾಧಿಕಾರಿ ಎ.ಎ. ಕಂಬಾಳಿಮಠ, ತಹಶೀಲ್ದಾರ ಶ್ರೀನಿವಾಸ ಮೂರ್ತಿ, ಆಹಾರ ಇಲಾಖೆಯ ಉಪನಿರ್ದೇಶಕ ಎಂ.ಎಸ್. ಪಾಟೀಲ, ಚುನಾವಣಾ ಶಾಖೆಯ ತಹಸೀಲ್ದಾರ ಸಂತೋಷ ಹಿರೇಮಠ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಹಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಎಂ.ಎಂ. ತುಂಬರಮಟ್ಟಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿ ಅಧಿಕಾರಿಗಳು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೌರಕಾರ್ಮಿಕರ ಸೇವೆ ಸಮಾಜಕ್ಕೆ ಅಮೂಲ್ಯ: ರೆಡ್ಡಿ ರಾಯನಗೌಡ
ವಿಶ್ವಕರ್ಮರ ಕಾಯಕಕ್ಕೆ ಆಧುನಿಕತೆಯ ಸ್ಪರ್ಶ ಅಗತ್ಯ: ನಟರಾಜ್ ಸೋನಾರ್