ಪ್ರತಿಯೊಬ್ಬ ಕನ್ನಡಿಗನೂ ರಾಯಭಾರಿಯಂತೆ ಕೆಲಸ ಮಾಡಿ: ಮಹೇಶ್ ಜೋಷಿ

KannadaprabhaNewsNetwork |  
Published : Oct 19, 2024, 12:33 AM IST
18ಕೆಎಂಎನ್ ಡಿ20 | Kannada Prabha

ಸಾರಾಂಶ

ಸ್ಥಳೀಯ ಸಾಹಿತಿ, ಕಲಾವಿದರಿಗೆ ಸಮ್ಮೇಳನದಲ್ಲಿ ಅವಕಾಶ ನೀಡುವುದು, ಕಾವೇರಿ ನೀರಿನ ಸಮಸ್ಯೆ ಕುರಿತು ವಿಚಾರಗೋಷ್ಠಿ ನಡೆಯಲಿದೆ. ಸಮ್ಮೇಳನಕ್ಕೆ ವಿದೇಶದಲ್ಲಿರುವ ಸರ್. ಎಂ. ವಿಶ್ವೇಶ್ವರಯ್ಯ ಅವರ ಮೊಮ್ಮಗಳು, ಪುತಿನ ಅವರ ಮಗಳು, ಕೆ.ಎಸ್. ನರಸಿಂಹಸ್ವಾಮಿ ಅವರ ಕುಟುಂಬ ಮತ್ತು ಕನ್ನಡ ನಿಘಂಟು ಬ್ರಹ್ಮ ರೆವರೆಂಟ್ ಫರ್ಡಿನೆಂಡ್ ಕಿಟೆಲ್ ಅವರ ಕುಟುಂಬದ ಸದಸ್ಯರು ಬರಲಿದ್ದಾರೆ.

ಶ್ರೀರಂಗಪಟ್ಟಣ: ಮಂಡ್ಯದಲ್ಲಿ ನಡೆಯುವ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿಯೊಬ್ಬ ಕನ್ನಡಿಗನೂ ರಾಯಭಾರಿಯಂತೆ ಕೆಲಸ ಮಾಡಬೇಕು ಎಂದು ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಹೇಳಿದರು.

ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿ, ಈ ಸಮ್ಮೇಳನ ಮುಂದೆ ನಡೆಯುವ ಸಮ್ಮೇಳನಗಳಿಗೆ ಮಾದರಿಯಾಗಲಿದೆ. ಹೊರ ರಾಜ್ಯಗಳ ಕನ್ನಡಿಗರು ಸಾಕಷ್ಟು ಸಂಖ್ಯೆಯಲ್ಲಿ ಬರಲಿದ್ದಾರೆ ಎಂದರು.

ಸ್ಥಳೀಯ ಸಾಹಿತಿ, ಕಲಾವಿದರಿಗೆ ಸಮ್ಮೇಳನದಲ್ಲಿ ಅವಕಾಶ ನೀಡುವುದು, ಕಾವೇರಿ ನೀರಿನ ಸಮಸ್ಯೆ ಕುರಿತು ವಿಚಾರಗೋಷ್ಠಿ ನಡೆಯಲಿದೆ. ಸಮ್ಮೇಳನಕ್ಕೆ ವಿದೇಶದಲ್ಲಿರುವ ಸರ್. ಎಂ. ವಿಶ್ವೇಶ್ವರಯ್ಯ ಅವರ ಮೊಮ್ಮಗಳು, ಪುತಿನ ಅವರ ಮಗಳು, ಕೆ.ಎಸ್. ನರಸಿಂಹಸ್ವಾಮಿ ಅವರ ಕುಟುಂಬ ಮತ್ತು ಕನ್ನಡ ನಿಘಂಟು ಬ್ರಹ್ಮ ರೆವರೆಂಟ್ ಫರ್ಡಿನೆಂಡ್ ಕಿಟೆಲ್ ಅವರ ಕುಟುಂಬದ ಸದಸ್ಯರು ಬರಲಿದ್ದಾರೆ ಎಂದು ತಿಳಿಸಿದರು.

ಕಸಾಪ ಜಿಲ್ಲಾ ಸಂಚಾಲಕಿ ಮೀರಾ ಶಿವಲಿಂಗಯ್ಯ ಮಾತನಾಡಿದರು. ತಹಸೀಲ್ದಾರ್ ಪರಶುರಾಮ ಸತ್ತಿಗೇರಿ, ಕಸಾಪ ತಾಲೂಕು ಅಧ್ಯಕ್ಷ ಸಿದ್ದಲಿಂಗು, ಬಿಇಒ ಮಹೇಶ್, ಪುರಸಭೆ ಮುಖ್ಯಾಧಿಕಾರಿ ರಾಜಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಂದೀಶ್, ತಾಲೂಕು ಘಟಕದ ಕಾರ್ಯದರ್ಶಿ ಸ್ವಾಮಿಗೌಡ, ಬಸವರಾಜು, ನಗರ ಘಟಕದ ಅಧ್ಯಕ್ಷ ಎಂ. ಸುರೇಶ್ ಸೇರಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ