ಭಕ್ತಶ್ರೇಷ್ಠ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಚೆಂಡೂರುಕನ್ನಡಪ್ರಭ ವಾರ್ತೆ ಯಲಬುರ್ಗಾ
ತಾಲೂಕಿನ ಬಂಡಿಹಾಳ ಗ್ರಾಮದಲ್ಲಿ ಹಾಲುಮತ ಸಮುದಾಯ ಗ್ರಾಮ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಭಕ್ತಶ್ರೇಷ್ಠ ಕನಕದಾಸರ ಕನಕದಾಸರ ಜಯಂತಿ ಕಾರ್ಯಕ್ರಮದ ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೋಬ್ಬರು ಸಂಗೋಳ್ಳಿ ರಾಯಣ್ಣನಂತಹ ಪರಾಕ್ರಮಿಯು ಸ್ವಾತಂತ್ರ‍್ಯ ಹೋರಾಟದಲ್ಲಿ ಧುಮುಕಿ ಯುದ್ಧಗಳನ್ನು ಎದುರಿಸಿದ್ದು ಅವಿಸ್ಮರಣೀಯವಾಗಿದೆ ಎಂದರು.
ಕನಕದಾಸರು ಕುಲ-ಕುಲ ಎಂದು ಹೊಡೆದಾಡದಿರಿ, ದೇಹ, ಆತ್ಮ, ಗಾಳಿ, ನೀರು, ಬೆಳಕು ಇವುಗಳಿಗೆ ಯಾವ ಕುಲವಿದೆ ಎಂದು ತಿಳಿಸಿಕೊಟ್ಟ ಮಹಾನ್ ಸಂತರಾಗಿದ್ದಾರೆ.೧೫ ಮತ್ತು ೧೬ನೇ ಶತಮಾನದ ಜನಪ್ರಿಯ ಭಕ್ತಿಪಂಥದ ಮುಖ್ಯ ದಾಸಶ್ರೇಷ್ಠರಲ್ಲಿ ಕನಕದಾಸರು ಒಬ್ಬರು. ದಾಸ ಸಾಹಿತ್ಯದಲ್ಲಿ ಜೀವನ ಪಾಠ ಕಂಡುಕೊಂಡವರು. ಅವರ ಜೀವನ ಚರಿತ್ರೆ, ಕೀರ್ತನೆಗಳು ಎಲ್ಲರಿಗೂ ಸ್ಫೂರ್ತಿಯಾಗಿವೆ ಎಂದು ಹೇಳಿದರು.ಕನಕದಾಸ ಜಯಂತಿ ನಿಮಿತ್ತ ಗ್ರಾಮದಲ್ಲಿ ಬೆಳಗ್ಗೆ ಭಾವಚಿತ್ರ ಮೆರವಣಿಗೆ, ಅಭಿಷೇಕ, ಅನ್ನಸಂರ್ತಪಣೆ, ಡೊಳ್ಳು ಕುಣಿತ, ಮಹಿಳೆಯರಿಂದ ಕುಂಭಕಳಸ ಸೇವೆ ಜರುಗಿತು.