ಕನ್ನಡಪ್ರಭ ವಾರ್ತೆ ಗದಗ
ಶುಕ್ರವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಸಾರ್ವಜನಿಕರಿಂದ ಅಹವಾಲು ಹಾಗೂ ಮನವಿ ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಮ್ಮ ಸಂವಿಧಾನ ಸಮಪಾಲು,ಸಮಬಾಳು ಎನ್ನುವ ಪವಿತ್ರ ಧ್ಯೇಯೋದ್ದೇಶವನ್ನು ಹೊಂದಿದ್ದು, ದೇಶದ ಪ್ರತಿಯೊಬ್ಬ ಪ್ರಜೆಯೂ ಗೌರವಯುತ ಜೀವನ ನಡೆಸಲು ಅವರಿಗೆ ಸೌಲಭ್ಯ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಕಾನೂನುಗಳು ಹಾಗೂ ವಿವಿಧ ಸೌಲಭ್ಯಗಳು ತಾಯಿ ಗರ್ಭದಲ್ಲಿರುವಾಗಲೇ ಆ ಮಗುವಿಗೆ ಪ್ರಾರಂಭವಾಗುತ್ತವೆ. ಸಂವಿಧಾನ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಬಾಧ್ಯತೆಗಳನ್ನು ಕೊಟ್ಟಿದ್ದು, ಅವುಗಳು ಸದುಪಯೋಗವಾಗಬೇಕು. ನಮಗೆ ದೇಶ ಏನು ಕೊಟ್ಟಿದೆ ಎನ್ನುವುದರ ಬದಲು ದೇಶಕ್ಕಾಗಿ ನಾವು ಏನು ಕೊಟ್ಟಿದ್ದೇವೆ ಎಂದು ಪ್ರತಿಯೊಬ್ಬರೂ ತಮ್ಮಷ್ಟಕ್ಕೆ ತಾವೇ ಅರ್ಥೈಸಿಕೊಳ್ಳಬೇಕಾಗಿದೆ ಎಂದರು.ಯಾವುದೇ ಆಮಿಷಕ್ಕೆ ಒಳಗಾಗದೇ ಸಂದರ್ಭಾನುಸಾರ ಕಾನೂನು ನಿಯಮಾವಳಿಗಳ ಪ್ರಕಾರ ಭ್ರಷ್ಟಾಚಾರರಹಿತ ಸೇವೆ ಸಲ್ಲಿಸುವುದು ಪ್ರತಿಯೊಬ್ಬ ನೌಕರನ ಕರ್ತವ್ಯ. ಸಾರ್ವಜನಿಕರಿಂದ ತೆರಿಗೆ ರೂಪದಲ್ಲಿ ಬಂದ ಹಣವನ್ನು ಸರ್ಕಾರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ವಿನಿಯೋಗಿಸುತ್ತದೆ. ಆಸ್ಪತ್ರೆಗಳ ನಿರ್ಮಾಣ, ರಸ್ತೆ, ಶಿಕ್ಷಣ, ಹೀಗೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಇಲಾಖಾಧಿಕಾರಿಗಳು ವಿನಾಕಾರಣ ವಿಳಂಬ ನೀತಿ ಅನುಸರಿಸಬಾರದು. ನೌಕರರ ಕರ್ತವ್ಯ, ದುರ್ನಡತೆಗೆ ಸಂಬಂಧಿಸಿದ ದೂರುಗಳನ್ನು ಪರಿಶೀಲಿಸಲು ಮತ್ತು ವರದಿ ಮಾಡಲು ಸ್ಥಾಪಿಸಿರುವ ಸಂಸ್ಥೆಯೇ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಾಗಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನೂಕು ನುಗ್ಗಲಾಗದಂತೆ ಒಬ್ಬೊಬ್ಬರಾಗಿ ತಮ್ಮ ಅಹವಾಲುಗಳೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದೂರು ನೀಡಲು ಹೇಳಿದರು.
ವೆಂಕಟೇಶ ಅಲ್ಕೋಡ ಹಾಗೂ ತಂಡದವರು ನಾಡಗೀತೆ ಪ್ರಸ್ತುತಪಡಿಸಿದರು. ಪ್ರಾಚಾರ್ಯ ಬಸವರಾಜ ಗಿರಿತಿಮ್ಮಣ್ಣವರ ನಿರೂಪಿಸಿದರು.