ಸ್ತ್ರೀ ಶಕ್ತಿಯು ಇಚ್ಛಾಶಕ್ತಿಯಾಗಿ ರೂಪುಗೊಳ್ಳಲಿ

KannadaprabhaNewsNetwork |  
Published : Mar 15, 2026, 01:15 AM IST
 | Kannada Prabha

ಸಾರಾಂಶ

ಭಾರತದಲ್ಲಿ ಹೆಣ್ಣಿಗೆ ದೊಡ್ಡ ಗೌರವವಿದೆ. ಸ್ತ್ರೀ ಶಕ್ತಿಯು ಇಚ್ಛಾಶಕ್ತಿಯಾಗಿ ರೂಪುಗೊಂಡು ಮಹಿಳೆಯರು ಸಮಾಜ ಪರಿವರ್ತನೆಗೆ ನೆರವಾಗಬೇಕು. ನಮ್ಮ ಸಂಸ್ಕೃತಿ, ಪರಂಪರೆ, ಆಚಾರ, ವಿಚಾರಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವಲ್ಲಿ ಮಹಿಳೆಯರ ಜವಾಬ್ದಾರಿ ಹೆಚ್ಚಾಗಿದೆ ಎಂದು ಹಿರೇಮಠದ ಡಾ. ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಕನ್ನಡಪ್ರಭ ವಾರ್ತೆ ತುಮಕೂರು

ಭಾರತದಲ್ಲಿ ಹೆಣ್ಣಿಗೆ ದೊಡ್ಡ ಗೌರವವಿದೆ. ಸ್ತ್ರೀ ಶಕ್ತಿಯು ಇಚ್ಛಾಶಕ್ತಿಯಾಗಿ ರೂಪುಗೊಂಡು ಮಹಿಳೆಯರು ಸಮಾಜ ಪರಿವರ್ತನೆಗೆ ನೆರವಾಗಬೇಕು. ನಮ್ಮ ಸಂಸ್ಕೃತಿ, ಪರಂಪರೆ, ಆಚಾರ, ವಿಚಾರಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವಲ್ಲಿ ಮಹಿಳೆಯರ ಜವಾಬ್ದಾರಿ ಹೆಚ್ಚಾಗಿದೆ ಎಂದು ಹಿರೇಮಠದ ಡಾ. ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕ, ಜಿಲ್ಲಾ ಮಹಿಳಾ ಘಟಕ ಹಾಗೂ ವಿವಿಧ ಘಟಕಗಳ ಆಶ್ರಯದಲ್ಲಿ ಶನಿವಾರ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸ್ವಾಮೀಜಿ, ಹೆಣ್ಣನ್ನು ಗೌರವಿಸುವ ಶ್ರೇಷ್ಠ ಸಂಸ್ಕೃತಿ ನಮ್ಮದು ಎಂದರು.

ಬೆಳ್ಳಾವಿ ಕಾರದೇಶ್ವರ ಮಠದ ಕಾರದ ವೀರಬಸವ ಸ್ವಾಮೀಜಿ ಮಾತನಾಡಿ, ಲಿಂಗ ತಾರತಮ್ಯ ನಿವಾರಣೆ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಸಮಾನ ಅವಕಾಶ ದೊರೆಯಬೇಕು ಎಂಬ ಉದ್ದೇಶದಿಂದ ಆರಂಭವಾದ ಮಹಿಳಾ ದಿನಾಚರಣೆ ಇಂದು ಸಾಮಾಜಿಕ ಜಾಗೃತಿಗೂ ಕಾರಣವಾಗಿದೆ. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಶಕ್ತವಾಗಿ ತೊಡಗಿಕೊಂಡು ಯಶಸ್ವಿಯಾಗುತ್ತಿದ್ದಾರೆ ಎಂದು ಹೇಳಿದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಮಹಿಳೆಯರಿಗೆ ಮತದಾನದ ಹಕ್ಕು ಇಲ್ಲದ ಹಕ್ಕು ಇಲ್ಲದ ಸಂದರ್ಭದಲ್ಲಿ ಹಕ್ಕು, ಸಮಾನತೆಗಾಗಿ ರೂಪುಗೊಂಡ ಹೋರಾಟವನ್ನು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಸಾಧನೆಗಳನ್ನು ಸಂಭ್ರಮಿಸುವ ಆಚರಣೆಯಾಗಿದೆ ಎಂದರು.

ಕಾಲೇಜು ಪ್ರಾಂಶುಪಾಲರಾದ ಡಾ. ಪ್ರೇಮಾ ಸಿದ್ಧರಾಜು ಅವರು ಮಹಿಳಾ ಸಬಲೀಕರಣದ ಸವಾಲುಗಳು ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜ್ ಮಾತನಾಡಿ, 12ನೇ ಶತಮಾನದಲ್ಲೇ ಮಹಿಳೆಯರಿಗೆ ಸಮಾನತೆ, ಸ್ವಾತಂತ್ರ್ಯದ ಜಾಗೃತಿ ಮೂಡಿತ್ತು. ಈಗ ನಮ್ಮಲ್ಲಿ ಸಮಾನತೆ, ಸ್ವಾತಂತ್ರವಿದ್ದರೂ ನಮ್ಮ ಸಂಸ್ಕಾರ ಕಣ್ಮರೆಯಾಗುತ್ತಿದೆ. ಇಂದಿನ ಯುವಜನರು ನಮ್ಮ ಸಂಸ್ಕಾರ, ಸಂಸ್ಕೃತಿಯನ್ನು ಮರೆಯುತ್ತಿರುವುದು ಕಳವಳಕಾರಿ ಎಂದು ಹೇಳಿದರು.

ಮಹಾಸಭಾ ಮಹಿಳಾ ಘಟಕ ರಾಜ್ಯಾಧ್ಯಕ್ಷೆ ಮುಕ್ತಾಂಬ, ಮಹಾಸಭಾದ ಜಿಲ್ಲಾಧ್ಯಕ್ಷ ಡಾ.ಎಸ್. ಪರಮೇಶ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಮಮತಾ ದಿವಾಕರ್, ಪ್ರಧಾನ ಕಾರ್ಯದರ್ಶಿ ಶಿಲ್ಪ ನವೀನ್ ಹಿರೇಮಠ್ ಹಾಗೂ ಪದಾಧಿಕಾರಿಗಳು, ಮಹಾಸಭಾ ಯುವ ಘಟಕ ಜಿಲ್ಲಾಧ್ಯಕ್ಷ ಡಾ.ದರ್ಶನ್ ಕೆ.ಎಲ್, ಮಹಾಸಭಾ ಜಿಲ್ಲಾ ಕಾರ್ಯದರ್ಶಿ ತಳವಾರನಹಳ್ಳಿ ವಿಜಯಕುಮಾರ್ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳಾ ಸಾಧಕಿಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಇದರ ಅಂಗವಾಗಿ ನಡೆಸಿದ ಆಟೋಟ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿ: ತಪ್ಪಿದ ಭಾರೀ ದುರಂತ
ಮುತ್ತೋಡಿ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು