ನಲಿನ್ ಅತುಲ್ ಸಲಹೆ, ಕೊಪ್ಪಳದಲ್ಲಿ ಪೂರ್ವಭಾವಿ ಸಭೆ
ಕನ್ನಡಪ್ರಭ ವಾರ್ತೆ ಕೊಪ್ಪಳ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಾತ್ಮಾ ಗಾಂಧೀಜಿ ಜಯಂತಿ ಹಿನ್ನೆಲೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಹಾತ್ಮಾ ಗಾಂಧೀಜಿ 155ನೇ ಜಯಂತಿ ಆಚರಣೆ ನಿಮಿತ್ತ ಶ್ರಮದಾನ, ಸರ್ವಧರ್ಮ ಪ್ರಾರ್ಥನೆ, ಗಾಂಧೀಜಿ ಅವರ ಪ್ರಿಯ ಭಜನೆಗಳು, ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿ ವಸ್ತು ಬಳಕೆ ಮತ್ತಿತರ ವಿಷಯ ಕುರಿತು ಅಚ್ಚುಕಟ್ಟಾಗಿ ಕಾರ್ಯಕ್ರಮ ರೂಪಿಸಬೇಕು. ವಿದ್ಯಾರ್ಥಿ ಯುವಜನರಲ್ಲಿ ಮಹಾತ್ಮಾ ಗಾಂಧೀಜಿ ಅವರ ಬದುಕು ಸ್ವಾತಂತ್ರ್ಯ ಚಳವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮೊದಲಾದ ವಿಷಯಗಳ ಕುರಿತು ಪ್ರೌಢಶಾಲೆ, ಪಿಯು ಮತ್ತು ಪದವಿ -ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅ. 2ರಂದು ಬಹುಮಾನ ವಿತರಣೆಗೆ ಅಗತ್ಯ ಏರ್ಪಾಡು ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಮಹಾತ್ಮಾ ಗಾಂಧೀಜಿ ಜಯಂತಿ ಆಚರಣೆ ಹಿನ್ನೆಲೆ ಅಕ್ಟೋಬರ್ ಮಾಹೆಯಲ್ಲಿ ವಿಶೇಷ ಕಾರ್ಯಕ್ರಮಗಳು ನಡೆಯಬೇಕು. ಗ್ರಾಮೀಣ ನೈರ್ಮಲ್ಯದ ಬಗ್ಗೆ ಅರಿವು, ಅಸ್ಪೃಶ್ಯತೆ ನಿವಾರಣೆ ಜಾಗೃತಿ ಹಾಗೂ ಮದ್ಯಪಾನ ತಡೆ ಜಾಗೃತಿಗಾಗಿ ಗ್ರಾಮವೊಂದರಲ್ಲಿ ವಿಶೇಷ ಕಾರ್ಯಕ್ರಮ ರೂಪಿಸಲು ಜಿಲ್ಲಾಧಿಕಾರಿ ಸಲಹೆ ಮಾಡಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಪರ್ವತಗೌಡ ಹಿರೇಗೌಡರ, ರೇಷ್ಮೆ ಇಲಾಖೆಯ ಉಪ ನಿರ್ದೇಶಕ ಎಸ್. ಸುಂದರರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮಾರಬನಹಳ್ಳಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಸುರೇಶ ಕೋಕರೆ, ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ನಾಗರಾಜ, ಜಿಲ್ಲಾ ವಾಲ್ಮೀಕಿ ಅಭಿವೃದ್ಧಿ ನಿಗಮದ ಮ್ಯಾನೇಜರ್ ಎಂ.ಎಸ್. ದೊಡ್ಡಮನಿ ಇದ್ದರು.