ದ್ವೇಷ, ಅಸೂಯೆ ಬಿಟ್ಟು ಸಹಬಾಳ್ವೆ ಬದುಕು ಕಲಿಯಿರಿ: ಸಿ.ಎಸ್.ಪುಟ್ಟರಾಜು

KannadaprabhaNewsNetwork |  
Published : Dec 10, 2025, 12:45 AM IST
9ಕೆಎಂಎನ್ ಡಿ15 | Kannada Prabha

ಸಾರಾಂಶ

ಗ್ರಾಮೀಣ ಬದುಕಯೇ ಸುಂದರ. ಕಷ್ಟ-ಸುಖ, ನೋವು-ನಲಿವು ಎಲ್ಲವನ್ನು ಒಳಗೊಂಡಿರುವ ನಮ್ಮ ಹಳ್ಳಿಗಳ ಸುಧಾರಣೆಗೆ ಪ್ರತಿಯೊಬ್ಬರು ಮುಂದಾಗಬೇಕಿದೆ. ಎನ್‌ಎಸ್‌ಎಸ್ ಶಿಬಿರಗಳ ಮೂಲಕ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದ ಜನರ ಬದುಕನ್ನು ಅರ್ಥ ಮಾಡಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಮನುಷ್ಯನ ಬದುಕು ಕ್ಷಣಿಕ. ಪ್ರತಿಯೊಬ್ಬರೂ ದ್ವೇಷ, ಅಸೂಯೇ, ಅಹಂಕಾರವನ್ನು ಬಿಟ್ಟು ಸಹಭಾಳ್ವೆಯಿಂದ ಬದುಕುವುದನ್ನು ಕಲಿಯಬೇಕು ಎಂದು ಎಸ್‌ಟಿಜಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.

ತಾಲೂಕಿನ ಚಾಗಶೆಟ್ಟಹಳ್ಳಿಯಲ್ಲಿ ಎಸ್‌ಟಿಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಗ್ರಾಮೀಣ ಬದುಕಯೇ ಸುಂದರ. ಕಷ್ಟ-ಸುಖ, ನೋವು-ನಲಿವು ಎಲ್ಲವನ್ನು ಒಳಗೊಂಡಿರುವ ನಮ್ಮ ಹಳ್ಳಿಗಳ ಸುಧಾರಣೆಗೆ ಪ್ರತಿಯೊಬ್ಬರು ಮುಂದಾಗಬೇಕಿದೆ ಎಂದರು.

ಎನ್‌ಎಸ್‌ಎಸ್ ಶಿಬಿರಗಳ ಮೂಲಕ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದ ಜನರ ಬದುಕನ್ನು ಅರ್ಥ ಮಾಡಿಕೊಳ್ಳಬೇಕು, ಜೊತೆಗೆ ಜನರಿಗೆ ಸ್ವಚ್ಛತೆ, ಆರೋಗ್ಯದ ಬಗ್ಗೆಯೂ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದರು.

ಗ್ರಾಮದ ಜನರು ಎನ್‌ಎಸ್‌ಎಸ್ ಶಿಬಿರಾರ್ಥಿಗಳನ್ನು ಏಳು ದಿನಗಳ ಕಾಲ ತಮ್ಮ ಮಕ್ಕಳಂತೆ ನೋಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹಳ್ಳಿಗಳಲ್ಲಿ ಶಿಬಿರ ಆಯೋಜನೆ ಮಾಡಿ ಶಿಬಿರಗಳ ಮೂಲಕ ಜನರಿಗೆ ಶೈಕ್ಷಣಿಕ, ಆರ್ಥಿಕ, ಆರೋಗ್ಯ, ಕೃಷಿ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಬೇಬಿಬೆಟ್ಟದ ಶ್ರೀರಾಮಯೋಗೇಶ್ವರ ಮಠದ ಪೀಠಾಧ್ಯಕ್ಷ ಶಿವಬಸವ ಸ್ವಾಮೀಜಿ, ವಿಜಯ ಕಾಳಿಮಠದ ಗುರೂಜಿ ರಾಜೇಶ್, ಎಸ್‌ಟಿಜಿ ಶಿಕ್ಷಣ ಸಂಸ್ಥೆಯ ಸಿಇಒ ಸಿ.ಪಿ.ಶಿವರಾಜು, ಪ್ರಾಂಶುಪಾಲ ಡಾ.ನಿಶಾಂತ್ ಎ.ನಾಯ್ಡು, ಮಂಡ್ಯ ವಿವಿ ಎನ್‌ಎಸ್‌ಎಸ್ ಯೋಜನಾಧಿಕಾರಿ ಡಾ.ಪ್ರಮೀಳ, ಸಬ್ ಇನ್ಸ್‌ಪೆಕ್ಟರ್ ಉಮೇಶ್, ಗ್ರಾಪಂ ಅಧ್ಯಕ್ಷೆ ಆಶಾರಾಣಿ, ಉಪಾಧ್ಯಕ್ಷೆ ಮಹದೇವಮ್ಮ, ಜೆಡಿಎಸ್ ಅಧ್ಯಕ್ಷ ಎಸ್.ಎ.ಮಲ್ಲೇಶ್, ಕಂದಾಯ ನಿರೀಕ್ಷ ಟಿ.ಪಿ.ರೇವಣ್ಣ, ಮಾಣಿಕ್ಯನಹಳ್ಳಿ ಅಶೋಕ್, ಚಲುವರಾಜು, ಗ್ರಾಪಂ ಸದಸ್ಯ ಕಾಂತರಾಜು, ಎಸ್.ಆನಂದ್, ಶಿವಕುಮಾರ್, ಶಿಂಢಬೋಗನಹಳ್ಳಿ ನಾಗಣ್ಣ, ಗ್ರಾಮಸ್ಥರಾದ ನಂಜಪ್ಪ, ಕೃಪ, ಬಸಪ್ಪ, ಸೋಮಣ್ಣ, ಮಹೇಶ, ಶಂಕರಣ್ಣ, ನಾಗೇಂದ್ರ, ಮನು, ಎನ್‌ಎಸ್‌ಎಸ್ ಶಿಬಿರಾಧಿಕಾರಿ ಕುಮಾರ್ ಬಿ.ಎಸ್, ಸಹ ಶಿಬಿರಾಧಿಕಾರಿ ವಿ.ಶ್ರೀಧರ, ರಘುನಂದನ್, ಪೂಜಾ, ಓಂಕಾರ್, ನಿರಂಜನ್, ರಂಜಿತ್, ಸುರಭಿ ಸೇರಿದಂತೆ ಗ್ರಾಮಸ್ಥರು, ಯಜಮಾನರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡ್ರಗ್ಸ್‌ ಆರ್ಭಟಕ್ಕೆ ಮದ್ಯ ಮಾರಾಟವೇ ಕುಸಿತ!
24,300 ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಅಸ್ತು : ಸಿದ್ದರಾಮಯ್ಯ