ಕನ್ನಡಪ್ರಭ ವಾರ್ತೆ, ಭದ್ರಾವತಿ
ನಗರದ ಜನ್ನಾಪುರ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಾನಪದ ಕಲಾ ಸಂಘದ ದಶಮಾನೋತ್ಸವ ಪ್ರಯುಕ್ತ ಆಯೋಜಿಸಲಾಗಿದ್ದ ಜನಪದ ಜಾತ್ರೆ ಉದ್ಘಾಟಿಸಿ ಅವರು ಮಾತನಾಡಿದರು.
ರಾಜರ ಆಳ್ವಿಕೆಯಲ್ಲಿ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಿದ್ದ ಮಾದರಿಯಲ್ಲಿಯೇ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಕಲಾವಿದರನ್ನು ಪ್ರೋತ್ಸಾಹಿಸಬೇಕು. ರಾಜರ ಕಾಲದಲ್ಲಿ ಇನಾಂ ನೀಡುತ್ತಿದ್ದಂತೆಯೇ ಇಂದು ಕಲಾವಿದರಿಗೆ ಆರ್ಥಿಕ ಸಹಕಾರ ನೀಡಿ ಪ್ರೋತ್ಸಾಹಿಸುವುದು ಅಗತ್ಯ ಎಂದರು.ಜಾನಪದ ಕಲಾವಿದ ಯುಗಧರ್ಮ ರಾಮಣ್ಣ ಮಾತನಾಡಿ, ಜಾನಪದರು ವಿದ್ಯಾವಂತರಲ್ಲ. ಆದರೆ, ಬದುಕಿನ ಮಹತ್ವ ಅರಿತವರು. ಆರೋಗ್ಯದ ಮಹತ್ವ ತಿಳಿದವರು. 64 ವಿದ್ಯೆಗಳಿಗೂ ತಾಯಿಬೇರು ಭಾರತ. ಜ್ಞಾನಪೀಠ ಪಡೆದ ಎಲ್ಲ ಸಾಹಿತಿಗಳು ಹಳ್ಳಿಯ ಮಹತ್ವ ಅರಿತಿದ್ದರು. ಆದ್ದರಿಂದ ಅವರಿಗೆ ಬದುಕು-ಬವಣೆಗಳ ಮಹತ್ವ ತಿಳಿದಿತ್ತು ಎಂದರು.
ಕಾರ್ಯಕ್ರಮದಲ್ಲಿ ಸಿಂಧು ಪ್ರಾರ್ಥಿಸಿ, ಜಗದೀಶ್ ಸ್ವಾಗತಿಸಿದರು. ಸೌಮ್ಯ ನಿರೂಪಿಸಿ, ವಂದಿಸಿದರು. ಇದಕ್ಕೂ ಮೊದಲು ಜನ್ನಾಪುರ ಶ್ರೀ ಮಹಾಗಣಪತಿ ದೇವಸ್ಥಾನ ಮುಂಭಾಗದಿಂದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದವರೆಗೂ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು.
ಕೋಟ್ ಜಾನಪದ ಪುರಾತನ ಕಲೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ಪ್ರಯತ್ನಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು. ಮಕ್ಕಳನ್ನು ದುಶ್ಚಟಗಳಿಂದ ದೂರ ಮಾಡಲು ಕಲೆಗಳನ್ನು ಕಲಿಸುವುದು ಮುಖ್ಯ. ವಿದ್ಯಾಭ್ಯಾಸದ ಜೊತೆಗೆ ಕಲೆಗಳು ಸಹ ಮುಖ್ಯ ಎಂಬುದನ್ನು ಪೋಷಕರು ಅರಿತುಕೊಳ್ಳಬೇಕು. ಮಕ್ಕಳಿಗೂ ಅರಿವು ಮೂಡಿಸಬೇಕು
- - - -ಡಿ4ಬಿಡಿವಿಟಿ: