- ಪುರಸಭೆ ಪೌರಕಾರ್ಮಿಕರಿಗೆ ಸುರಕ್ಷಾ ಪರಿಕರ ವಿತರಣೆ
ಕನ್ನಡಪ್ರಭ ವಾರ್ತೆ ಚನ್ನಗಿರಿ
ಚನ್ನಗಿರಿ ಪಟ್ಟಣವನ್ನು ಪ್ರತಿದಿನ ಸ್ವಚ್ಛಗೊಳಿಸುವ ಪೌರಕಾರ್ಮಿಕರ ಆರೋಗ್ಯ ಕಾಪಾಡುವ ಉದ್ದೇಶದಿಂದ ಸುರಕ್ಷಾ ಪರಿಕರಗಳನ್ನು ನೀಡಲಾಗುತ್ತಿದೆ. ಇದನ್ನು ಬಳಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಪಟ್ಟಣದ ಸ್ವಚ್ಛತೆಗೆ ಕಾಳಜಿ ವಹಿಸಬೇಕು ಎಂದು ಪುರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ನರಸಿಂಹಮೂರ್ತಿ ಹೇಳಿದರು.ಶುಕ್ರವಾರ ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಪೌರಕಾರ್ಮಿಕರಿಗೆ ಸ್ವಚ್ಛತಾ ಪರಿಕರಗಳನ್ನು ವಿತರಿಸಿ ಅವರು ಮಾತನಾಡಿದರು. ಜನರು ಮುಂಜಾನೆ ಏಳುವ ಮೊದಲೇ ಎದ್ದು ಪಟ್ಟಣದ ಸ್ವಚ್ಛತೆಯಲ್ಲಿ ತೊಡಗಿಕೊಳ್ಳುವ ಪೌರಕಾರ್ಮಿಕರು ಸಮಾಜದ ಪ್ರಾಥಮಿಕ ವೈದ್ಯರಾಗಿದ್ದಾರೆ. ಅವರ ಸುರಕ್ಷತೆ ಕಾಪಾಡುವುದು ನಮ್ಮಗಳ ಜವಾಬ್ದಾರಿ ಎಂದರು.
ಈಗಾಗಲೇ ಸ್ವಚ್ಛತಾ ಕಾರ್ಮಿಕರಿಗೆ ಮಾಸ್ಟರ್ ಹೆಲ್ತ್ ಚೆಕಪ್, ಆಯುಷ್ಮಾನ್, ಪ್ರಧಾನಮಂತ್ರಿ ಜೀವವಿಮಾ ಸೌಲಭ್ಯ, ಗೃಹಭಾಗ್ಯ ಇತರೆ ಸೌಕರ್ಯಗಳನ್ನು ನೀಡಿದ್ದು, ಪೌರಕಾರ್ಮಿಕರ ಹಿತರಕ್ಷಣೆಗೆ ನಮ್ಮ ಇಲಾಖೆ ಬದ್ಧವಾಗಿದೆ ಎಂದರು.
- - -
ಚನ್ನಗಿರಿ ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಮುಖ್ಯಾಧಿಕಾರಿ ಕೃಷ್ಣ ಡಿ. ಕಟ್ಟಿಮನಿ ಪೌರಕಾರ್ಮಿಕರಿಗೆ ಸುರಕ್ಷಾ ಪರಿಕರಗಳನ್ನು ವಿತರಿಸಿದರು.