ಗದಗ: ಸಂಸ್ಕೃತಿ ಮತ್ತು ಸಂಗೀತ ದಿಗ್ಗಜರನ್ನು ನಾಡಿಗೆ ನೀಡಿದ ಗದಗ ನಗರದಲ್ಲಿ ಶನಿವಾರ ರಾತ್ರಿ ಹಿಂದೂ ಸಮಾಜೋತ್ಸವ ಶೋಭಾಯಾತ್ರೆಯು ಭವ್ಯವಾಗಿ ಜರುಗಿತು.
ಇಂದು ಲವ್ ಜಿಹಾದ್, ಡ್ರಗ್ ಜಿಹಾದ್, ಆರ್ಥಿಕ ಮತ್ತು ಶೈಕ್ಷಣಿಕ ಜಿಹಾದ್‌ಗಳ ಮೂಲಕ ಹಿಂದೂ ಸಮಾಜವನ್ನು ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಜನಸಂಖ್ಯಾ ಅಸಮತೋಲನವು ಸಂವಿಧಾನದ ಅಸ್ತಿತ್ವಕ್ಕೆ ಧಕ್ಕೆ ತರಬಹುದು. ಹಿಂದೂ ಸಮಾಜ ಬಹುಸಂಖ್ಯಾತರಾಗಿ ಇರುವವರೆಗೆ ಮಾತ್ರ ಈ ದೇಶದ ಸಂವಿಧಾನ ಮತ್ತು ಸಂಸ್ಕೃತಿ ಸುಭದ್ರವಾಗಿರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ಸಂಘದ ಶತಮಾನೋತ್ಸವದ ಪ್ರಯುಕ್ತ ಸಮಾಜದಲ್ಲಿ ಪ್ಲಾಸ್ಟಿಕ್ ಮುಕ್ತ ಮತ್ತು ಪ್ರಕೃತಿ ಪೂರಕ ಜೀವನ, ಸಂವಿಧಾನದ ಹಕ್ಕುಗಳ ಜೊತೆಗೆ ಕರ್ತವ್ಯ ಪಾಲನೆ, ಭಾರತೀಯ ಸಂಸ್ಕೃತಿ ಮತ್ತು ಉತ್ಪನ್ನಗಳಿಗೆ ಒತ್ತು ನೀಡುವು ವಿಷಯಗಳ ಕುರಿತು ಮಾತನಾಡಿದರು.
ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ಮಾತನಾಡಿ, ತಾಯಿ ಮತ್ತು ಭೂಮಿಗೆ ಗೌರವ ನೀಡುವುದೇ ನಿಜವಾದ ಧರ್ಮ ಎಂದರು.ಮುಕ್ಕಣ್ಣೇಶ್ವರ ಮಠದ ಶಂಕರಾನಂದ ಶ್ರೀಗಳು, ಅಡ್ನೂರು ಮಠದ ಪಂಚಾಕ್ಷರಿ ಶಿವಾಚಾರ್ಯ ಶ್ರೀಗಳು ಆಶೀರ್ವಚನ ನೀಡಿದರು. ಹಿಂದೂ ಸಮಾಜೋತ್ಸವದ ಅಧ್ಯಕ್ಷ ಬಸವರಾಜ ಬಿಂಗಿ ಸೇರಿದಂತೆ ಅನೇಕ ಪ್ರಮುಖರು ವೇದಿಕೆಯಲ್ಲಿದ್ದರು.ಹಿಂದೂ ಸಮ್ಮೇಳನದ ಶೋಭಾಯಾತ್ರೆಗೆ ಚಾಲನೆ
ಸಮ್ಮೇಳನದ ಹಿನ್ನೆಲೆಯಲ್ಲಿ ಇಡೀ ನಗರದಾದ್ಯಂತ ಭಾಗವಾಧ್ವಜಗಳು, ದೊಡ್ಡ ಪ್ರಮಾಣದ ಬ್ಯಾನರ್ ಗಳಿಂದ ನಗರಕ್ಕೆ ನಗರವೇ ಕೇಸರಿ ಬಣ್ಣದಲ್ಲಿ ಕಂಗೊಳಿಸಿತು. ಅವಳಿ ನಗರದ ವಿವಿಧೆಡೆ ಶೋಭಾಯಾತ್ರೆಗೆ ಸಂಭ್ರಮದಿಂದ ಸ್ವಾಗತ ದೊರಕಿತು.ಹಿಂದೂ ಸಮಾಜೋತ್ಸವ ಸಮಿತಿ ಉಪಾಧ್ಯಕ್ಷ ಕೇಶವರಾಮ್ ಕೊಳ್ಳಿ, ಸಂಘಟನಾ ಕಾರ್ಯದರ್ಶಿ ಜಗದೀಶ್ ಎಸ್.ಪಿ., ಚಿನ್ಮಯಾನಂದ ಟೆಂಗಿನಕಾಯಿ, ಶಶಿಧರ ದಿಂಡೂರ, ರಘುನಾಥಸಾ ಮೆರವಾಡೆ, ರಾಜಣ್ಣ ಮಲ್ಲಾಡದ, ಮಂಜುನಾಥ ಕೊಟ್ನೆಕಲ್, ಚಂದ್ರಕಾಂತ ಚವ್ಹಾಣ, ಪ್ರೇಮಾ ಕಡೆಮನಿ, ಕಾರ್ಯದರ್ಶಿ ಪ್ರಕಾಶ ಉಗಲಾಟದ, ಶೈಲೇಶ್ ಬಾಗಮಾರ, ಹರೀಶ ಪೂಜಾರ, ರಾಜಶೇಖರ ಕುಂಬಿ, ನಾಗವೇಣಿ ಕಟ್ಟಿಮನಿ, ಡಾ. ಉಮೇಶ ಹಾದಿ, ಚಿನ್ಮಯಾನಂದ ಟೆಂಗಿನಕಾಯಿ ಇದ್ದರು.