ಕೈಗಾರಿಕಾ ಸಂಘಗಳು ನೋಂದಣಿ ಮಾಡಿಕೊಳ್ಳಲಿ: ಸಾಜಿದ್ ಮುಲ್ಲಾ

KannadaprabhaNewsNetwork |  
Published : Jul 06, 2026, 02:30 AM IST
ಸಭೆ ನಡೆಸಿದರು | Kannada Prabha

ಸಾರಾಂಶ

ಕೈಗಾರಿಕಾ ಸಂಘಗಳು ನೋಂದಣಿ ಮಾಡಿಕೊಳ್ಳುವುದರಿಂದ ಅಯಾ ಭಾಗದ ಕೈಗಾರಿಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಹಾಯವಾಗಲಿದೆ.

ಕೈಗಾರಿಕಾ ಇಲಾಖೆಯ ವಿವಿಧ ಸಮಿತಿಗಳ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ನಿರ್ದೇಶನ

ಕನ್ನಡಪ್ರಭ ವಾರ್ತೆ ಕಾರವಾರ

ಜಿಲ್ಲೆಯಲ್ಲಿ ಕೈಗಾರಿಕಾ ಬೆಳವಣಿಗೆಗೆ ಅನುಕೂಲವಾಗುವಂತೆ ರಚಿಸಿಕೊಂಡಿರುವ ಕೈಗಾರಿಕಾ ಸಂಘಗಳು ನೋಂದಣಿ ಮಾಡಿಕೊಂಡು ಪ್ರತಿ ವರ್ಷ ನವೀಕರಣ ಮಾಡಿಕೊಳ್ಳುವಂತೆ ಕೈಗಾರಿಕಾ ಸಂಘಗಳಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ನಿರ್ದೇಶನ ನೀಡಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕೈಗಾರಿಕಾ ಇಲಾಖೆಯ ವಿವಿಧ ಸಮಿತಿಗಳ ಸಭೆಯಲ್ಲಿ ಮಾತನಾಡಿದರು.

ಕೈಗಾರಿಕಾ ಸಂಘಗಳು ನೋಂದಣಿ ಮಾಡಿಕೊಳ್ಳುವುದರಿಂದ ಅಯಾ ಭಾಗದ ಕೈಗಾರಿಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಹಾಯವಾಗಲಿದೆ. ಆ ನಿಟ್ಟಿನಲ್ಲಿ ಸಂಘಗಳು ನೋಂದಣಿ ಮಾಡಿಕೊಳ್ಳುವುದು ಅವಶ್ಯವಾಗಿದೆ ಎಂದರು.

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಕೈಗಾರಿಕಾ ವಸಾಹತುಗಳು ಮತ್ತು ಪ್ರದೇಶಗಳಿಂದ ವಸೂಲಾಗುವ ತೆರಿಗೆಗಳಿಗೆ ಅನುಗುಣವಾಗಿ ಅಗತ್ಯವಿರುವ ನೀರು, ವಿದ್ಯುತ್, ರಸ್ತೆ, ತ್ಯಾಜ್ಯ ನಿರ್ವಹಣೆ ಹಾಗೂ ಚರಂಡಿ ಸೇರಿದಂತೆ ಇತರ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ತಮ್ಮ ವಾರ್ಷಿಕ ಕ್ರಿಯಾಯೋಜನೆಯಲ್ಲಿ ಅಳವಡಿಸಿಕೊಳ್ಳುವಂತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕೆಗಳಲ್ಲಿ ಅವಶ್ಯವಿರುವ ಕೌಶಲ್ಯ ತರಬೇತಿಗೆ ಸಂಬಂಧಿಸಿದಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯವರು ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಸಣ್ಣ ಕೈಗಾರಿಕಾ ಸಂಘದ ಸಹಕರದೊಂದಿಗೆ ಅವಶ್ಯವಿರುವ ತರಬೇತಿಗೆ ವರದಿ ತಯಾರಿಸಿ ಸಲ್ಲಿಸುವಂತೆ ಸೂಚನೆ ನೀಡಿದರು.

ಜಿಲ್ಲೆಯ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಕೈಗಾರಿಕೆಗಳಲ್ಲಿ ಅವಶ್ಯವಿರುವ ಪ್ರಸಕ್ತ ಕೌಶಲ್ಯಾಧಾರಿತ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪಠ್ಯಕ್ರಮವನ್ನು ಅಳಡಿಸಿಕೊಳ್ಳಲು ಎಲ್ಲಾ ಐಟಿಐ ಕಾಲೇಜುಗಳಿಗೆ ಸೂಚಿಸಿದ ಅವರು, ಆಯಾ ಕಾಲೇಜುಗಳಲ್ಲಿ ಕೌಶಲ್ಯಾಧರಿತ ತರಬೇತಿ ನೀಡುವಂತೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ರಫ್ತು ಉತ್ತೇಜನಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ, ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯ ಪ್ರಗತಿ ಬಗ್ಗೆ, ಪಿಎಂ ವಿಶ್ವಕರ್ಮ ಯೋಜನೆಯ ಪ್ರಗತಿ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು.

ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ ನಾಯ್ಕ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಪರಾಧ ಮುಕ್ತ ನಾಳೆಗೆ ಮುನ್ನುಡಿ ಬರೆದ ಕೈದಿಗಳ ಸೃಜನಶೀಲತೆ
ಮಾಲೀಕರ ನಿರ್ಲಕ್ಷ್ಯ: ಬೀದಿಗೆ ಬಿದ್ದ ದನಗಳು