ಕನ್ನಡಪ್ರಭ ವಾರ್ತೆ ಹೊಸಪೇಟೆ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಕರ್ನಾಟಕ ಸಂಭ್ರಮ-50ರ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದು ಒಂದು ವರ್ಷದುದ್ದಕ್ಕೂ ನಡೆಯುವ ಕಾರ್ಯಕ್ರಮವಾಗಿದ್ದು, ಯಾವುದೇ ನಿರ್ಲಕ್ಷ್ಯ ವಹಿಸದೇ ಕಾರ್ಯಕ್ರಮದ ಯಶಸ್ಸಿಗೆ ಅಧಿಕಾರಿಗಳಿಗೆ ಸೂಚಿಸಿದರು.ಈ ಕಾರ್ಯಕ್ರಮವನ್ನು ಇಡೀ ರಾಜ್ಯಾದ್ಯಂತ ಒಂದು ವರ್ಷದ ಕಾರ್ಯಕ್ರಮವನ್ನಾಗಿ ಆಚರಿಸಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಹೆಸರು ಆಗಲಿ ಕರ್ನಾಟಕ, ಉಸಿರು ಆಗಲಿ ಕನ್ನಡ ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸಲು ನಿರ್ಧರಿಸಲಾಗಿದೆ ಎಂದರು.
ವಸತಿ, ಹಜ್ ಮತ್ತು ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್ ಮಾತನಾಡಿ, ಕರ್ನಾಟಕ ರಾಜ್ಯ ಎಂಬ ಹೆಸರನ್ನು ಮರುನಾಮಕರಣ ಮಾಡಿ ನ. ಒಂದರಂದು 50 ವರ್ಷಗಳು ತುಂಬಲಿದೆ. ಈ ಹಿನ್ನೆಲೆಯಲ್ಲಿ ಈ ವರ್ಷ ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಲು ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.ವಿಜಯನಗರ ಶಾಸಕ ಎಚ್.ಆರ್. ಗವಿಯಪ್ಪ, ಕಂಪ್ಲಿ ಶಾಸಕ ಜೆ.ಎನ್. ಗಣೇಶ, ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್, ಜಿಪಂ ಸಿಇಒ ಸದಾಶಿವ ಪ್ರಭು, ಎಸ್ಪಿ ಬಿ.ಎಲ್. ಶ್ರೀಹರಿಬಾಬು, ಪ್ರಾದೇಶಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಅರ್ಸಲನ್, ಅಪರ ಜಿಲ್ಲಾಧಿಕಾರಿ ಅನುರಾಧಾ ಜಿ. ಹಾಗೂ ಎಲ್ಲ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.