ಉಳ್ಳಾಲ: ಜಿಲ್ಲೆಯ ಎಲ್ಲ ವಿಚಾರಗಳಲ್ಲೂ ಮೊದಲು ಮೂಗು ತೂರಿಸುವ ಸ್ಪೀಕರ್ ಯು.ಟಿ.ಖಾದರ್ ತಮ್ಮ ಕ್ಷೇತ್ರದ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಸರಿಪಡಿಸುವ ಹಾಗೂ ಮುಚ್ಚಿಸುವ ಕೆಲಸ ಮೊದಲು ನಡೆಸಲಿ. ಈ ಮೂಲಕ ರಸ್ತೆಗಳ ಬಗ್ಗೆಯೂ ವಿಶೇಷ ಮುತುವರ್ಜಿ ವಹಿಸುವಂತಾಗಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆಗ್ರಹಿಸಿದ್ದಾರೆ.ರಸ್ತೆ ಹೊಂಡಗಳ ವಿರುದ್ಧ ಹಾಗೂ ರಸ್ತೆ ದುರಸ್ತಿಗೆ ಆಗ್ರಹಿಸಿ ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ವತಿಯಿಂದ ಕೋಟೆಕಾರು ಬೀರಿಯಲ್ಲಿ ಬುಧವಾರ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ, ಎಲ್ಲರ ನೆಚ್ಚಿನ ಶಾಸಕ ಎಂದು ಬೀಗುವ ಈ ಭಾಗದ ಶಾಸಕರ ಕಣ್ಣಿಗೆ ರಸ್ತೆಗಳು ಗುಂಡಿ ಬಿದ್ದಿರೋದು ಕಾಣುವುದಿಲ್ಲ. ರಸ್ತೆಗಳ ದುರವಸ್ಥೆ ಇದೇ ರೀತಿ ಮುಂದುವರಿದರೆ ಹೋರಾಟದ ತೀವ್ರತೆ ಹೆಚ್ಚಾಗಲಿದೆ ಎಂದು ಎಚ್ಚರಿಸಿದರು.ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರ್, ಮಂಗಳೂರು ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್, ದಿ.ಮೈಸೂರು ಇಲೆಕ್ಟ್ರಿಕಲ್ಸ್ ಲಿಮಿಟೆಡ್ನ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು ಮಾತನಾಡಿದರು.
ಬಿಜೆಪಿ ಮಂಡಲ ಉಪಾಧ್ಯಕ್ಷರಾದ ಸುರೇಶ್ ಆಳ್ವ ಸಾಂತ್ಯಗುತ್ತು, ಕೋಟೆಕಾರು ಪ.ಪಂ ಅಧ್ಯಕ್ಷ ದಿವ್ಯಾ ಸತೀಶ್ ಶೆಟ್ಟಿ,ಸ್ಥಾಯಿ ಸಮಿತಿ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ಪ್ರವೀಣ್ ಬಗಂಬಿಲ, ಸದಸ್ಯರಾದ ಸುಜಿತ್ ಮಾಡೂರು, ಸೋಮೇಶ್ವರ ಪುರಸಭಾ ಅಧ್ಯಕ್ಷ ಕಮಲ, ಉಪಾಧ್ಯಕ್ಷ ರವಿಶಂಕರ್ ಸೋಮೇಶ್ವರ, ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗಟ್ಟಿ, ಬಿಜೆಪಿ ಮಹಿಳಾ ಮೋರ್ಚದ ಮಂಡಲ ಅಧ್ಯಕ್ಷ ಮಾಧವಿ ಉಳ್ಳಾಲ್, ಯುವ ಮೋರ್ಚದ ಜಿಲ್ಲಾ ಉಪಾಧ್ಯಕ್ಷ ನಿಶಾಂತ್ ಪೂಜಾರಿ,ಮಂಡಲ ಅಧ್ಯಕ್ಷ ಮುರಳಿ ಕೊಣಾಜೆ, ಕೋಟೆಕಾರು ಮಹಾ ಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅತುಲ್ ಬಗಂಬಿಲ , ಹಿಂದೂ ಮುಖಂಡ ಅರ್ಜುನ್ ಮಾಡೂರು, ಸೋಮೇಶ್ವರ ಸದಸ್ಯ ಜಯ ಪೂಜಾರಿ, ಪ್ರಮುಖರಾದ ಸುಮಲತಾ ಕೊಣಾಜೆ,ಯಶವಂತ ಆಳ್ವ , ಗೋಪಾಲ್ ಕುತ್ತಾರ್ ಮತ್ತಿತರರಿದ್ದರು.ಬಿಜೆಪಿ ಮಂಗಳೂರು ಮಂಡಲದ ಪ್ರ.ಕಾ. ಮೋಹನ್ ರಾಜ್ ಕೆ.ಆರ್. ನಿರೂಪಿಸಿದರು. ದಯಾನಂದ ತೊಕ್ಕೊಟ್ಟು ವಂದಿಸಿದರು.