ಹರಪನಹಳ್ಳಿ: ಕಿತ್ತೂರು ರಾಣಿ ಚೆನ್ನಮ್ಮ ದೇಶ ಪ್ರೇಮ, ಧೈರ್ಯ, ಸ್ಥೈರ್ಯ ಇಂದಿನ ಮಹಿಳೆಯರಿಗೆ ಪ್ರೇರಣೆಯಾಗಬೇಕು ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿದರು.
ಅವರು ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಬುಧವಾರ ಮಾತನಾಡಿದರು.ಕಿತ್ತೂರು ರಾಣಿ ಚೆನ್ನಮ್ಮ ಕೇವಲ ಒಂದು ಜಾತಿಗೆ ಸೀಮಿತವಾಗದೇ ಎಲ್ಲ ಜಾತಿ ಜನಾಂಗದವರಿಗೂ ಸೇರಿದ್ದಾರೆ. ಅವರು ಹೋರಾಟ ಎಲ್ಲರಿಗೂ ಸ್ಫೂರ್ತಿ ಎಂದು ಹೇಳಿದರು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ಕಂದಾಯ ಉಪವಿಭಾಗಾಧಿಕಾರಿ ಚಿದಾನಂದಗುರುಸ್ವಾಮಿ, ಬ್ರಿಟಿಷರಿಗೆ ಸಿಂಹಸ್ವಪ್ನವಾಗಿ ರಾಣಿ ಚೆನ್ನಮ್ಮ ಹೋರಾಟ ನಡೆಸಿದರು. ತಮ್ಮ ನಾಡಿಗಾಗಿ, ಪ್ರಜೆಗಳಿಗಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದರು ಎಂದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ ಮಾತನಾಡಿ, ಹೆಣ್ಣು ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂದು ಕಿತ್ತೂರು ರಾಣಿ ಚೆನ್ನಮ್ಮ ತೋರಿಸಿಕೊಟ್ಟಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ವಿವಿಧ ಮಹನೀಯರನ್ನು ಯಾವುದೇ ಜಾತಿಗೆ ಸೀಮಿತ ಮಾಡಬಾರದು. ಅಂತಹ ಮಹನೀಯರ ಹೆಸರುಗಳನ್ನು ಪಟ್ಟಣದ ವಿವಿಧ ವೃತ್ತಗಳಿಗೆ ಪುರಸಭಾ ವತಿಯಿಂದ ನಾಮಕರಣ ವನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದು ಹೇಳಿದರು.
ಡಾ.ಸುವರ್ಣ ಆರುಂಡಿ ನಾಗರಾಜ ವಿಶೇಷ ಉಪನ್ಯಾಸ ನೀಡಿದರು. ವೀರಶೈವ ಲಿಂಗಾಯಿತ ಪಂಚಮಸಾಲಿ ಸಂಘದ ತಾಲೂಕು ಅಧ್ಯಕ್ಷ ಪಟೇಲ್ ಬೆಟ್ಟನಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ತಹಶೀಲ್ದಾರ ಬಿ.ವಿ.ಗಿರೀಶಬಾಬು, ವೀರಶೈವ ಮಹಾಸಭಾ ಅಧ್ಯಕ್ಷ ಎಂ.ರಾಜಶೇಖರ, ಅಖಿಲ ಭಾರತ ಲಿಂಗಾಯುತ ಪಂಚಮಸಾಲಿ ಮಹಾಸಭಾ ತಾಲೂಕು ಅಧ್ಯಕ್ಷ ಕೆ.ಪ್ರಭಾಕರ, ಪುರಸಭಾ ಸದಸ್ಯರುಗಳಾದ ಉದ್ದಾರ ಗಣೇಶ, ಲಾಟಿದಾದಾಪೀರ, ಜಾಕೀರ,ತಾ.ಪಂ ಇಒ ಚಂದ್ರಶೇಖರ, ಬಿಇಒ ಲೇಪಾಕ್ಷಪ್ಪ, ಪುರಸಭಾ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ, ಶಿಕ್ಷಣ ಸಂಯೋಜಕ ಗಿರಜ್ಜಿ ಮಂಜುನಾಥ, ಬಿಆರ್ ಪಿ ಚೆನ್ನಪ್ಪ ಕಂಬಳಿ, ಶಿಕ್ಷಕಿ ಗುರುಲೀಲ, ಉಮಾ, ನೀಲಗುಂದ ಸುಮಾ, ದೀಪ,ಶ್ರೀಮತಿ, ಇತರರು ಉಪಸ್ಥಿತರಿದ್ದರು.ಹರಪನಹಳ್ಳಿ ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ತಾಲೂಕು ಆಡಳಿತದವತಿಯಿಂದ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉಪವಿಭಾಗಾಧಿಕಾರಿ ಚಿದಾನಂದಗುರುಸ್ವಾಮಿ ಉದ್ಘಾಟಿಸಿದರು.