ಧರ್ಮಸ್ಥಳ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ ೯೩ನೇ ಅಧಿವೇಶನಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಇಂದು ಕಾದಂಬರಿ ಓದುವವರ ಸಂಖ್ಯೆ ಕಡಿಮೆಯಾಗಿದೆ. ಆದರೆ ಕಥೆ ಬರೆಯುವವರ ಸಂಖ್ಯೆ ಮತ್ತು ಓದುವವರ ಸಂಖ್ಯೆ ಹೆಚ್ಚಾಗಿದೆ. ಕಥಾ ಸಾಹಿತ್ಯ ಅರ್ಥಪೂರ್ಣವಾಗಿ ಬೆಳೆಯುತ್ತಿದೆ. ಹೃದಯದಿಂದ, ಪ್ರೀತಿಯಿಂದ ಬಂದ ಆಲೋಚನೆಗಳನ್ನು ಬಳಸಿ ಉತ್ತಮ ಕಥೆಗಳನ್ನು ಬರೆಯಬಹುದು ಎಂದು ಅಭಿಪ್ರಾಯಪಟ್ಟರು.ಕನ್ನಡ ಬೆಳೆಸಬೇಕಾದರೆ, ಕನ್ನಡ ಬಳಸಬೇಕು:ಅಧ್ಯಕ್ಷತೆ ವಹಿಸಿದ ವಿಶ್ವವಾಣಿ ಪತ್ರಿಕೆಯ ಮುಖ್ಯ ಸಂಪಾದಕ ವಿಶ್ವೇಶ್ವರ ಭಟ್ ಮಾತನಾಡಿ, ಕನ್ನಡ ಬೆಳೆಸಬೇಕಾದರೆ, ಕನ್ನಡ ಬಳಸಬೇಕು ಎಂದು ಹೇಳಿದರು.ಕನ್ನಡಕ್ಕೆ ಸ್ವಂತ ಲಿಪಿ ಇದ್ದು ಎಲ್ಲ ದೃಷ್ಟಿಯಿಂದಲೂ ಕನ್ನಡ ಅತ್ಯಂತ ಪರಿಪೂರ್ಣ, ಸಮೃದ್ಧ ಹಾಗೂ ಸುಂದರ ಭಾಷೆಯಾಗಿದೆ. ಆದರೆ, ಕನ್ನಡಕ್ಕೆ ದೊಡ್ಡ ಸವಾಲು ಭಾಷೆ. ಕನ್ನಡ ಉಳಿಸಬೇಕಾದರೆ ಭಾಷಾ ಶುದ್ಧಿಯೊಂದಿಗೆ ಮನೆಯಲ್ಲಿ ಹಾಗೂ ವ್ಯವಹಾರದಲ್ಲಿ ನಿತ್ಯವೂ ಶುದ್ಧ ಕನ್ನಡ ಬಳಸಬೇಕು. ಭಾಷೆ ಸ್ವಚ್ಛವಾಗಿದ್ದರೆ ಸಾಹಿತ್ಯವೂ ಸ್ವಚ್ಛವಾಗಿರುತ್ತದೆ.ಸಾಹಿತ್ಯ ಪುಸ್ತಕಕ್ಕೆ ಮಾತ್ರ ಸೀಮಿತವಾಗಬಾರದು. ಸಾಹಿತ್ಯವು ದೈನಂದಿನ ಬದುಕು ಮತ್ತು ಸಮಾಜಕ್ಕೆ ಸಂಬಂಧಪಟ್ಟಿದೆ. ಇಂಗ್ಲಿಷ್ ಪದಗಳ ಬಳಕೆಯಿಂದ ಕನ್ನಡ ಅಪಾಯದ ಅಂಚಿನಲ್ಲಿದೆ ಎಂದು ಅವರು ಎಚ್ಚರಿಕೆ ನೀಡಿದ ಅವರು, ಕನ್ನಡ ಸಾಹಿತ್ಯದ ಬೆಳವಣಿಗೆಗೆ ಧರ್ಮಸ್ಥಳದ ಕೊಡುಗೆಯನ್ನು ಶ್ಲಾಘಿಸಿದರು.ಧರ್ಮಸ್ಥಳದ ಸಂಶಯ ಗುಂಡಿಗಳು ಮುಚ್ಚಿವೆ:
ಧರ್ಮಸ್ಥಳದ ಬಗ್ಗೆ ಇದ್ದ ಸಂಶಯದ ಗುಂಡಿಗಳೆಲ್ಲಾ ಮುಚ್ಚಿ ಹೋಗಿವೆ. ಬುರುಡೆಗಳು ಬರಿದಾಗಿವೆ. ಸುಳ್ಳು ಮಲಗಿದೆ. ಸತ್ಯ ಗೆದ್ದಿದೆ. ತನ್ಮೂಲಕ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಪ್ರಕಟವಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನಗುಮೊಗ, ಸ್ಥಿತಪ್ರಜ್ಞೆ ಮತ್ತು ನಿಷ್ಕಳಂಕ ವ್ಯಕ್ತಿತ್ವದಿಂದ ಅವರು ಮತ್ತೆ ಶೋಭಾಯಮಾನವಾಗಿ ಬೆಳಗುತ್ತಿದ್ದಾರೆ. ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಧರ್ಮಸ್ಥಳ ಕ್ಷೇತ್ರವು ಅಂತಾರಾಷ್ಟ್ರೀಯ ಮಟ್ಟದ ಧಾರ್ಮಿಕ ಶ್ರದ್ಧಾಕೇಂದ್ರವಾಗಿ ಇನ್ನಷ್ಟು ಬೆಳೆಯಲಿ, ಬೆಳಗಲಿ ಎಂದು ವಿಶ್ವೇಶ್ವರ ಭಟ್ ಹಾರೈಸಿದರು.ಶಾಂತಿ, ಸೌಹಾರ್ದತೆ ಮೂಡಿಸುವುದೇ ಸಾಹಿತ್ಯದ ಉದ್ದೇಶ: ಡಾ.ಹೆಗ್ಗಡೆಸಾಹಿತ್ಯ ಮತ್ತು ಜೀವನಕ್ಕೆ ಅವಿನಾಭಾವ ಸಂಬಂಧವಿದ್ದು, ಸರ್ವರ ಹಿತವನ್ನು ಬಯಸುವ ಸಾಹಿತ್ಯ ಸಾತ್ವಿಕವಾದ, ಸಭ್ಯ, ಸುಸಂಸ್ಕೃತ ಸಮಾಜವನ್ನು ನಿರ್ಮಾಣ ಮಾಡುತ್ತದೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.ಅವರು ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿ ಮಾತನಾಡಿದರು.ರಾಮಾಯಣ, ಮಹಾಭಾರತಗಳಿಂದ ಹಿಡಿದು ಆಧುನಿಕ ಸಾಹಿತ್ಯದ ತನಕ ಸಾಹಿತ್ಯವು ಆದರ್ಶ ಜೀವನವನ್ನು ರೂಪಿಸುತ್ತಾ ಬಂದಿದೆ. ಪುರಾಣಕಥೆಗಳು, ಧಾರ್ಮಿಕ ಕಥೆಗಳು ಮಾನವನ ಮೇಲೆ ಗಾಢ ಪರಿಣಾಮ ಬೀರಿ ಸನ್ಮಾರ್ಗದಲ್ಲಿ ನಡೆಯಲು ಪ್ರೇರಣೆ ನೀಡುತ್ತವೆ. ಸಾಹಿತ್ಯವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತದೆ. ಇಂದಿನ ಆಧುನಿಕ ಶಿಕ್ಷಣ ಪದ್ಧತಿಯಲ್ಲಿ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಧರ್ಮಸ್ಥಳದಿಂದ ಸಾಹಿತ್ಯ ಚಟುವಟಿಕೆಗಳಿಗೆ ಪ್ರೋತ್ಸಾಹ:
ಉಪನ್ಯಾಸಗಳು: ಬೆಂಗಳೂರಿನ ಶಾಂತಾ ನಾಗಮಂಗಲ, ಡಾ. ರಘು, ವಿ., ಧಾರವಾಡದ ಡಾ. ಬಿ.ಎಂ. ಶರಭೇಂದ್ರ ಸ್ವಾಮಿ ಸಾಹಿತ್ಯ ಮತ್ತು ಸಾರ್ಥಕ ಬದುಕಿನ ಬಗ್ಗೆ ಉಪನ್ಯಾಸ ನೀಡಿದರು.ರಾಜಶ್ರೀ ಎಸ್. ಹೆಗ್ಡೆ ವಂದಿಸಿದರು.ಉಜಿರೆಯ ಎಸ್‌ಡಿಎಂ ಕಾಲೇಜಿನ ಉನ್ಯಾಸಕರಾದ ಡಾ. ಶ್ರೀಧರ ಭಟ್ ಮತ್ತು ಡಾ. ದಿವಾಕೊಕ್ಕಡ ಕಾರ್ಯಕ್ರಮ ನಿರ್ವಹಿಸಿದರು.