ಮುರಳೀಧರ ಹಾಲಪ್ಪಗೆ ಲೋಕಸಭೆ ಟಿಕೆಟ್ ನೀಡಲಿ: ಕಾಂಗ್ರೆಸ್‌ ಕಾರ್ಯಕರ್ತರು

KannadaprabhaNewsNetwork |  
Published : Feb 02, 2024, 01:01 AM IST
ಜನಸ್ನೇಹಿ, ಯುವಕರ ಕಣ್ಮಣಿ ಮುರುಳೀಧರ ಹಾಲಪ್ಪಗೆ ಲೋಕಸಭೆ ಟಿಕೇಟ್ ನೀಡಿ | Kannada Prabha

ಸಾರಾಂಶ

ಕಾಂಗ್ರೆಸ್‌ ಮುಖಂಡ ಮುರಳೀಧರ ಹಾಲಪ್ಪಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್‌ ನೀಡುವಂತೆ ಕಾಂಗ್ರಸ್‌ ಕಾರ್ಯಕರ್ತರು ಹೈಕಮಾಂಡ್ಡನ್ನು ಒತ್ತಾಯಿಸಿದ್ದಾರೆ.

ಕನ್ನಡಪ್ರಭ ವಾರ್ತೆ ತಿಪಟೂರು

ರೈತರಿಗೆ, ಸಾರ್ವಜನಿಕರಿಗೆ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಯಾವಾಗಲೂ ಸ್ಪಂದಿಸುವ ಸರಳ ಸಜ್ಜನಿಕೆಯ ವ್ಯಕ್ತಿಯಾಗಿರುವ ಹಾಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿರುವ ಮುರಳೀಧರ ಹಾಲಪ್ಪ ಅವರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಜಿಲ್ಲೆಯಿಂದ ಅಭ್ಯರ್ಥಿಯಾಗಿ ಟಿಕೇಟ್ ನೀಡಿದರೆ ಗೆಲುವು ಖಚಿತವಾಗಿರುವುದರಿಂದ ಹೈಕಮಾಂಡ್ ಇವರಿಗೆ ಟಿಕೆಟ್ ನೀಡಬೇಕೆಂದು ತಾಲೂಕು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಒಕ್ಕೊರಲಿನಿಂದ ಒತ್ತಾಯಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕು ಕಾಂಗ್ರೆಸ್ ಸಮಿತಿ ಹಾಗೂ ಹಾಲಪ್ಪ ಅಭಿಮಾನಿ ಬಳಗದ ವತಿಯಿಂದ ಬುಧವಾರ ಸುದ್ದಿಗೋಷ್ಠಿಯನ್ನು ಕರೆಯಲಾಗಿತ್ತು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಮಲ್ಲೇನಹಳ್ಳಿ ಕಾಂತರಾಜು, ಪಕ್ಷದಲ್ಲಿ ನಿಷ್ಠಾವಂತರಾಗಿ ದುಡಿಯುತ್ತಿರುವ ಹಾಲಪ್ಪ ಅವರು ರೈತರಿಗಾಗಿ ಹಾಗೂ ಯುವಜನತೆಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಚಿರಪರಿಚಿತರಾಗಿದ್ದಾರೆ. ರಾಜ್ಯ ಕೌಶಲ್ಯಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿದ್ದಾಗ ನಿರುದ್ಯೋಗ ಯುವಕ-ಯುವತಿಯರಿಗಾಗಿ ಉದ್ಯೋಗ ಸೃಷ್ಟಿಸುವ ಜೊತೆಗೆ ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಉದ್ಯೋಗ ಮೇಳಗಳನ್ನು ಆಯೋಜಿಸಿ ತಮ್ಮ ಜವಾಬ್ದಾರಿ ಮೆರೆದಿದ್ದಾರೆ ಎಂದರು.

ರೈತರೊಂದಿಗೆ ನಾವು ಎಂಬ ಸಂವಾದ ಕಾರ್ಯಕ್ರಮದ ಮೂಲಕ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಖುದ್ದು ರೈತರನ್ನು ಭೇಟಿ ಮಾಡಿಸಿ ಸರ್ಕಾರದ ಯೋಜನೆಗಳನ್ನು ರೈತ ಸಮುದಾಯಕ್ಕೆ ತಲುಪಿಸಿದ್ದಾರೆ. ಆದ್ದರಿಂದ ಹಾಳಪ್ಪ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಿದರೆ ಗೆಲವು ಖಚಿತ. ಆದ್ದರಿಂದ ಹೈಕಮಾಂಡ್ ಹಾಲಪ್ಪನವರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು.

ಜಿಪಂ ಮಾಜಿ ಸದಸ್ಯ ಕೆ.ಎಂ. ಶಾಂತಪ್ಪ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಾದ್ಯಂತ ಸಂಚರಿಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಮುರಳೀಧರ ಹಾಲಪ್ಪನವರು ಶ್ರಮಿಸಿದ್ದಾರೆ. ಕೈಗಾರಿಕೆಗಳನ್ನು ಸ್ಥಾಪಿಸಿ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕೆಂಬ ಕನಸು ಕಂಡಿದ್ದು ಹಾಗೆಯೇ ರೈತರಿಗೆ ಹಾಗೂ ಎಲ್ಲಾ ವರ್ಗದ ಜನರಿಗೆ ಸ್ಪಂದಿಸುವ ಗುಣವಿದ್ದು ಪಕ್ಷ ಇವರಿಗೆ ಟಿಕೆಟ್ ನೀಡಿದರೆ ಗೆಲವು ಖಚಿತ. ಈಗಾಗಲೇ ಜಿಲ್ಲೆಯಾದ್ಯಂತ ಕಾರ್ಯಕರ್ತರು, ಅಭಿಮಾನಿಗಳು ಹಾಲಪ್ಪನವರಿಗೆ ಟಕೆಟ್ ನಿಡಬೇಕೆಂದು ಒತ್ತಾಯಿಸುತ್ತಿದ್ದು ಹೈಕಮಾಂಡ್ ಈ ಬಗ್ಗೆ ಉತ್ತಮ ನಿರ್ಧಾರ ಕೈಗೊಳ್ಳಕೊಳ್ಳಬೇಕೆಂದು ಆಗ್ರಹಿಸಿದರು.

ತಾಲೂಕು ಯುವ ಮೋರ್ಚಾ ಕಾಂಗ್ರೆಸ್ ಸಮಿತಿ ಸದಸ್ಯ ಜಿ.ಎಸ್. ಷಡಕ್ಷರಿ, ರೈತ ಮೋರ್ಚಾ ಉಪಾಧ್ಯಕ್ಷ ಶ್ರೀನಿವಾಸ್ ಮಾತನಾಡಿ ಹಾಲಪ್ಪ ಅವರಿಗೆ ಟಿಕೆಟ್‌ ನೀಡುವಂತೆ ಹೈಕಮಾಂಟಡನ್ನು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಗಾಯತ್ರಮ್ಮ, ಲಲಿತಮ್ಮ, ಮುಖಂಡರಾದ ಬಿ.ಕೆ. ಸೋಮಶೇಖರ್, ಪುಟ್ಟರಾಜು, ತಮ್ಮಯ್ಯ, ಕೃಷ್ಣಪ್ಪ, ಮುರಳಿ, ಅಶ್ವತ್ಥ, ರಾಜಣ್ಣ ವಿಘ್ನಸಂತೆ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ