ಕನ್ನಡಪ್ರಭ ವಾರ್ತೆ ಮಂಡ್ಯ
ಭಾನುವಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ನಮ್ಮ ನಡೆ ಸ್ವಚ್ಛತೆ ಕಡೆ- ರನ್ ಫಾರ್ ಮಂಡ್ಯ -ಮ್ಯಾರಥಾನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯ ಅಭಿವೃದ್ಧಿಗೆ ಮಂಡ್ಯ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಅವರು ವಿನೂತನ ಕಾರ್ಯಕ್ರಮ ಹಮ್ಮಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಕನ್ನಡ ಸಾಹಿತ್ಯ ಸಮ್ಮೇಳನವನ್ನು ಪಿ.ರವಿಕುಮಾರ್ ಮುಂದಾಳತ್ವದಲ್ಲಿ ಹಾಗೂ ಜಿಲ್ಲಾಧಿಕಾರಿ ಸೇರಿ ಯಶಸ್ವಿಗೊಳಿಸಿದರು. ಅಂದು ಕೂಡ ಸ್ವಾಮೀಜಿ ಅವರ ದಿವ್ಯಸಾನಿಧ್ಯದಲ್ಲಿ ಮ್ಯಾರಥಾನ್ ಹಮ್ಮಿಕೊಂಡಿದ್ದವು ಎಂದರು.ಶಾಸಕರಾದ ಬಳಿಕ ನಗರದ ವಿವಿಧ ಬಡಾವಣೆಗಳಲ್ಲಿ ಉತ್ತಮ ರಸ್ತೆ ನಿರ್ಮಾಣ ಮಾಡಿದ್ದಾರೆ. ವಿಶ್ವದರ್ಜೆಯ ಸರ್ಕಲ್ ಮಾಡಲು ಕೈಹಾಕಿದ್ದಾರೆ. ಮತಕೊಟ್ಟು ಗೆಲ್ಲಿಸಿದ ಜನರ ಋಣ ತೀರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಇದೀಗ ಅವರ ರನ್ ಫಾರ್ ಮಂಡ್ಯ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹಾರೈಸಿದರು.
ಮಕ್ಕಳು ಮನಸ್ಸನ್ನು ಶುದ್ಧವಾಗಿ ಇಟ್ಟುಕೊಳ್ಳಬೇಕು. ಜಿಲ್ಲೆಯನ್ನು ಸ್ವಚ್ಛತೆಯಿಂದ ಶುದ್ಧವಾಗಿ ನೋಡಿಕೊಳ್ಳುವ ಕಾರ್ಯ ಮಾಡಬೇಕು. ಇಂದಿನ ಮಕ್ಕಳು ಹಾಗೂ ಯುವಕರು ಸ್ವಚ್ಛತೆಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು ಎಂದರು.
ಚಲನ ಚಿತ್ರ ನಟ ವಿರಾಟ್ ಮಾತನಾಡಿ, ಸ್ವಚ್ಛತೆ ಆರೋಗ್ಯದ ಮೂಲ. ಮನೆ ಸುತ್ತಮುತ್ತಲಿನ ಪರಿಸರ, ಮತ್ತು ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಸಾಂಕ್ರಾಮಿಕ ರೋಗಗಳನ್ನು ತಡೆಯಲು ಅತ್ಯಗತ್ಯ. ಸ್ವಚ್ಛ ಭಾರತ್ ಅಭಿಯಾನಕ್ಕೆ ಕೈ ಜೋಡಿಸುವ ಮೂಲಕ ಸುಂದರ ಪರಿಸರವನ್ನು ನಿರ್ಮಿಸೋಣ ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಪಿ.ರವಿಕುಮಾರ್, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಪಿ.ಪ್ರಕಾಶ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ನಗರಾಭಿವೃದ್ಧಿ ಕೋಶದ ಯೋಜನಾ ಅಧಿಕಾರಿ ಟಿ.ಎನ್.ನರಸಿಂಹ ಮೂರ್ತಿ, ನಗರಸಭೆ ಆಯುಕ್ತೆ ಯು.ಪಿ.ಪಂಪಾಶ್ರೀ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮ ನಡೆ ಸ್ವಚ್ಛತೆಯ ಕಡೆ- ರನ್ ಫಾರ್ ಮಂಡ್ಯ ಮ್ಯಾರಥಾನ್ ಸ್ಪರ್ಧೆಯ ಪುರುಷರ ವಿಭಾಗದಲ್ಲಿ ಬೆಂಗಳೂರಿನ ರಾಜೇಶ್‌ಕುಮಾರ್-ಪ್ರಥಮ, ಮೈಸೂರಿನ ಪುರುಷೋತ್ತಮ್-ದ್ವಿತೀಯ, ಹಾಸನದ ಶ್ರೀಧರ್- ತೃತೀಯ, ಬೆಂಗಳೂರಿನ ಬ್ರಿಜೇಶ್‌ಕುಮಾರ್ ಹಾಗೂ ಮಂಡ್ಯದ ಭರತ್‌ರೆಡ್ಡಿ ಸಮಾಧಾನಕರ ಬಹುಮಾನ ಪಡೆದರು.
ಪುರುಷ-ಮಹಿಳೆಯರ ವಿಭಾಗದಲ್ಲಿ ವಿಜೇತರಿಗೆ ಪ್ರಥಮ ಬಹುಮಾನ ೧೦ ಸಾವಿರ ರು., ದ್ವಿತೀಯ-೫ ಸಾವಿರ ರು., ತೃತೀಯ-೩ ಸಾವಿರ ರು.ಗಳನ್ನು ನೀಡಲಾಯಿತು.