ಕನ್ನಡಪ್ರಭ ವಾರ್ತೆ ಚಾಮರಾಜನಗರ
ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರೇ ಹೇಳಿದ್ದಾರೆ. ಯಾವುದೇ ಕಾರಣಕ್ಕೆ ನಮ್ಮ ಪಕ್ಷದ ಚುನಾವಣೆ ಬದಲಾವಣೆ ಮಾಡುವ ಪ್ರಸ್ತಾಪ ಇಟ್ಟಿಲ್ಲ. ಅಂಬೇಡ್ಕರ್ ಅವರೇ ಮತ್ತೆ ಬಂದರು ಸಂವಿಧಾನ ಬದಲಾವಣೆ ಸಾಧ್ಯವಿಲ್ಲ.೨೦ ಕೆರೆಗಳಿಗೆ ನೀರು ತುಂಬಿಸಿದ್ದು ಬಿಜೆಪಿ:
ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ಅವರು ಈ ಭಾಗದ ೨೦ ಕೆರೆಗಳಿಗೆ ಕಬಿನಿಯಿಂದ ನೀರು ತುಂಭಿಸುವ ಮೂಲಕ ಶಾಶ್ವಾತ ಬರ ಪ್ರದೇಶ ಎಂಬ ಹಣೆಪಟ್ಟಿಯನ್ನು ಹೋಗಲಾಡಿಸಿದರು. ಅವರು ಅಂದು ಮನಸ್ಸು ಮಾಡಿ, ೨೨೦ ಕೋಟಿ ರೂ. ನೀಡಿ, ಕಾಮಗಾರಿಯನ್ನು ಆರಂಭಿಸಿ. ಯೋಜನೆಗೆ ಇದ್ದ ಎಲ್ಲಾ ಅಡೆತಡೆಗಳನ್ನು ಹೋಗಲಾಡಿಸಿ, ಈ ಭಾಗದ ಕೆರೆಗಳಿಗೆ ನೀರು ತುಂಬಿಸಿ, ಜನ ಜಾನುವಾರುಗಳಿಗೆ ಕುಡಿಯುವ ನೀರು ಕೊಟ್ಟರು. ಇಂಥ ಯೋಜನೆಯನ್ನು ತಂದ ಯಡಿಯೂರಪ್ಪ ಹಾಗೂ ಬಿಜೆಪಿ ಪಕ್ಷವನ್ನು ತಾವೆಲ್ಲರು ಬೆಂಬಲಿಸುವ ಮೂಲಕ ಬಾಲರಾಜುಗೆ ಹೆಚ್ಚು ಲೀಡ್ ಕೊಟ್ಟು ಲೋಕಸಭೆಗೆ ಕಳುಹಿಸಿಕೊಡಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್. ನಿರಂಜನ್‌ಕುಮಾರ್ ಮನವಿ ಮಾಡಿದರು. ಸಭೆಯಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ಗುಂಡ್ಲುಪೇಟೆ ಮಂಡಲದ ಅಧ್ಯಕ್ಷ ಮಹದೇವಪ್ರಸಾದ್, ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಹರವೆ ಮಹೇಶ್, ಎಪಿಎಂಸಿ ಸದಸ್ಯ ಮಹದೇವಪ್ರಸಾದ್, ಗ್ರಾ.ಪಂ. ಸದಸ್ಯ ಗಿರೀಶ್, ಸುಬ್ಬನಾಯಕ, ಹರವೆ ಮಾದಪ್ಪ, ಎಚ್.ಎಲ್. ಸುರೇಶ್, ವಕೀಲ ಮಂಜು, ಚುಡಾ ಮಾಜಿ ಅಧ್ಯಕ್ಷ ಶಾಂತಮೂರ್ತಿ, ಮಲೆಯೂರು ನಾಗೇಂದ್ರ, ಮಲ್ಲೇಶ್, ಜೆ.ಎಲ್. ಸುರೇಶ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ಮಲೆಯೂರು ಕಮಲಮ್ಮ, ಉತ್ತುವಳ್ಳಿ ಪದ್ಮ, ಮೊದಲಾದವರು ಇದ್ದರು.