ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ವೈ.ಎಂ. ಸತೀಶ್

KannadaprabhaNewsNetwork |  
Published : May 01, 2024, 01:17 AM IST
ಬಳ್ಳಾರಿಯ ಗಾಂಧಿಭವನದಲ್ಲಿ ಬಿಜೆಪಿ ಯುವಮೋರ್ಚಾದಿಂದ ಹಮ್ಮಿಕೊಂಡಿದ್ದ ಯುವಸಂಕಲ್ಪ ಸಮಾವೇಶಕ್ಕೆ ಯುವಮತದಾರರು ಚಾಲನೆ ನೀಡಿದರು.  | Kannada Prabha

ಸಾರಾಂಶ

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕದ ಕಳೆದ ಒಂದು ದಶಕದ ಅವಧಿಯಲ್ಲಿ ಅನೇಕ ಮಹತ್ವದ ಯೋಜನೆಗಳನ್ನು ಕೈಗೊಂಡಿದೆ ಎಂದು ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಹೇಳಿದರು.

ಕನ್ನಡಪ್ರಭ ವಾರ್ತೆ ಬಳ್ಳಾರಿ

ದೇಶದ ಸಮಗ್ರ ಅಭಿವೃದ್ಧಿ ಹಾಗೂ ರಾಷ್ಟ್ರ ರಕ್ಷಣೆಗಾಗಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಹೇಳಿದರು.

ನಗರದ ಗಾಂಧಿ ಭವನದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಹಮ್ಮಿಕೊಂಡಿದ್ದ ಯುವ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದರು.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕದ ಕಳೆದ ಒಂದು ದಶಕದ ಅವಧಿಯಲ್ಲಿ ಅನೇಕ ಮಹತ್ವದ ಯೋಜನೆಗಳನ್ನು ಕೈಗೊಂಡಿದೆ. ಬಡ ಹಾಗೂ ಮಧ್ಯಮ ವರ್ಗದ ಹಿತ ಕಾಯಲು ಅನೇಕ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಸೌಕರ್ಯಗಳು, ಪಂಚಾಯತ್ ರಾಜ್ ಯೋಜನೆಗಳು, ಗ್ರಾಮೀಣ ಕುಡಿಯುವ ನೀರು ಪೂರೈಕೆ, ಅಟಲ್ ಪಿಂಚಣಿ ಯೋಜನೆ, ಪ್ರಧಾನಮಂತ್ರಿ ಜನ ಧನ್ ಯೋಜನೆ ಸೇರಿದಂತೆ ಹತ್ತಾರು ಯೋಜನೆಗಳಿಗೆ ಚಾಲನೆ ನೀಡಿ, ಜನ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಶ್ರಮಿಸುತ್ತಿದೆ ಎಂದರು.

ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಹಾಗೂ ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ ಮಾತನಾಡಿ, ದೇಶದ ಪ್ರಗತಿಯ ವಿಚಾರದಲ್ಲಿ ಕಾಂಗ್ರೆಸ್‌ಗೆ ಯಾವುದೇ ದೃಷ್ಟಿಕೋನವಿಲ್ಲ. ಭಾರತದಲ್ಲಿ ಹೆಚ್ಚು ವರ್ಷಗಳ ಕಾಲ ಆಡಳಿತ ನಡೆಸಿರುವ ಕಾಂಗ್ರೆಸ್‌ನಿಂದ ಯಾವುದೇ ಪ್ರಗತಿದಾಯಿಕ ಕೆಲಸಗಳಾಗಿಲ್ಲ. ಆದರೆ, ಕಳೆದ ಒಂದು ದಶಕದ ಅವಧಿಯಲ್ಲಿ ಬಿಜೆಪಿ ಇಡೀ ವಿಶ್ವವೇ ಗಮನ ಸೆಳೆಯುವಂತಹ ರೀತಿಯಲ್ಲಿ ಜನಪರ ಯೋಜನೆಗಳನ್ನು ಜಾರಿಗೊಳಿಸಿ ಸೈ ಎನಿಸಿಕೊಂಡಿದೆ ಎಂದರು.

ಯುವಮೋರ್ಚಾದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಬಾಳೆಕಾಯಿ, ಪಕ್ಷದ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕಾ, ಸಿದ್ಧಾರ್ಥಸಿಂಗ್, ಪಕ್ಷದ ಪ್ರಮುಖರಾದ ಮುರಹರಗೌಡ ಗೋನಾಳ್, ಎಚ್. ಹನುಮಂತಪ್ಪ, ವೀರಶೇಖರ ರೆಡ್ಡಿ, ಸೋಮಶೇಖರಗೌಡ, ಉಡೇದ ಸುರೇಶ್, ಕೆ.ಎಸ್. ದಿವಾಕರ, ಅಡವಿಸ್ವಾಮಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ ರೆಡ್ಡಿ, ರಾಘವೇಂದ್ರ ಸೇರಿದಂತೆ ಬಿಜೆಪಿ ಪಾಲಿಕೆ ಸದಸ್ಯರು ಹಾಗೂ ಪಕ್ಷದ ಜಿಲ್ಲಾ ಪದಾಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ