ದೇಶದ ಅಭಿವೃದ್ಧಿಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ಮಾಜಿ ಎಂಲ್‌ಸಿ ಡಾ.ಎಂ.ಆರ್.ಹುಲಿನಾಯ್ಕರ್

KannadaprabhaNewsNetwork | Published : Apr 19, 2024 1:09 AM

ಸಾರಾಂಶ

10 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಜಗತ್ತಿನ ಶ್ರೇಷ್ಠ ನಾಯಕರಾಗಿ ಹೆಸರಾಗಿರುವ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬುದು ಜನರ ಆಸೆಯಾಗಿದೆ.

ಕನ್ನಡಪ್ರಭ ವಾರ್ತೆ ತುಮಕೂರು10 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಜಗತ್ತಿನ ಶ್ರೇಷ್ಠ ನಾಯಕರಾಗಿ ಹೆಸರಾಗಿರುವ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬುದು ಜನರ ಆಸೆಯಾಗಿದೆ. ಹಿಂದುಳಿದ ವರ್ಗದ ಸಾಮಾನ್ಯ ಕುಟುಂಬದಿಂದ ಬಂದ ಮೋದಿಯವರು ಉನ್ನತ ಸ್ಥಾನಕ್ಕೇರಿ ಎಲ್ಲ ವರ್ಗದ ಜನರ ಬದುಕಿನ ಸುಧಾರಣೆಗೆ ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ, ರಾಜ್ಯ ಬಿಜೆಪಿ ಒಬಿಸಿ ಮುಖಂಡ ಡಾ.ಎಂ.ಆರ್.ಹುಲಿನಾಯ್ಕರ್ ಹೇಳಿದರು. ನಗರದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ರಕ್ಷಣೆ, ಆರ್ಥಿಕ, ಸಾಮಾ ಜಿಕ ಬದಲಾವಣೆಗೆ ಪರಿಣಾಮಕಾರಿ ಯೋಜನೆ ರೂಪಿಸಲು ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಎಲ್ಲ ಕಡೆ ಎನ್.ಡಿ.ಎ ಅಭ್ಯರ್ಥಿಗಳನ್ನು ಆಯ್ಕೆಮಾಡಬೇಕು. ತುಮಕೂರು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಗೆಲುವಿಗೆ ಹಿಂದುಳಿದ ವರ್ಗ ಸಂಕಲ್ಪ ಮಾಡಿದೆ. ಎಲ್ಲ ವರ್ಗದ ಜನ ಸ್ವಾವಲಂಬಿಯಾಗಿ ಬಾಳಬೇಕು ಎನ್ನುವುದು ಮೋದಿಯವರ ಆಶಯ ವಾಗಿದೆ. ಮೋದಿ ಸರ್ಕಾರವು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ಕಲ್ಪಿಸಿದೆ ಎಂದರು.ಹಿಂದುಳಿದ ವರ್ಗಗಳ ಜನರಿಗೆ ಕೆನೆಪದರು ಆದಾಯ ಮಿತಿಯನ್ನು 2017ರಲ್ಲಿ ಆರು ಲಕ್ಷದಿಂದ ಎಂಟು ಲಕ್ಷ ರು.ಗೆ ಏರಿಸ ಲಾಗಿದೆ. ಸಂವಿಧಾನದ 127ನೇ ತಿದ್ದುಪಡಿಯಿಂದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಆಂತರಿಕ ಅವಕಾಶ ನೀಡಲಾಗಿದೆ. ಈ ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾ ಭ್ಯಾಸಕ್ಕಾಗಿ 1,083 ಕೋಟಿ ರು.ಗಳ ವಿದ್ಯಾರ್ಥಿ ವೇತನ ನೀಡಲಾಗಿದೆ ಎಂದು ಹೇಳಿದರು.

ರಾಜ್ಯ ಬಿಜೆಪಿ 0ಬಿಸಿ ಮುಖಂಡ ಶಂಕರಪ್ಪ, ಜಿಲ್ಲಾ ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷ ಕೆ. ವೇದಮೂರ್ತಿ ಮಾತನಾಡಿದರು. ಮಧುಗಿರಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್, ಮುಖಂಡರಾದ ಎಸ್.ಶಿವಪ್ರಸಾದ್, ನಗರ ಪಾಲಿಕೆ ಮಾಜಿ ಸದಸ್ಯ ವಿಷ್ಣುವರ್ಧನ್, ವಕ್ತಾರ ಟಿ.ಆರ್.ಸದಾಶಿವಯ್ಯ, ಮಾಧ್ಯಮ ಪ್ರಮುಖ್ ಜೆ.ಜಗದೀಶ್, ಮುಖಂಡರಾದ ಚಂದ್ರಬಾಬು, ಹನುಮಂತರಾಜು, ರಂಗನಾಥ್, ಮೇಲಾಕಪ್ಪ ಭಾಗವಹಿಸಿದ್ದರು.

Share this article