ಹುಬ್ಬಳ್ಳಿ:
ನಗರದ ಇಂದಿರಾ ಗಾಜಿನ ಮನೆಯಲ್ಲಿ ಶುಕ್ರವಾರ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಶಾಲೆಗಳಲ್ಲಿ ಶಿಕ್ಷಕರು ಪಠ್ಯಕ್ರಮದ ಜತೆಗೆ ಪರೀಕ್ಷೆಗೆ ಸಿದ್ಧಪಡಿಸುತ್ತಾರೆ. ಎಐ ಮತ್ತು ಅಂತರ್ಜಾಲ ಕ್ಷಣಾರ್ಧದಲ್ಲಿ ಉತ್ತರ ನೀಡುತ್ತವೆ. ಆದರೆ, ಸ್ವತಂತ್ರವಾಗಿ ಆಲೋಚಿಸುವ, ಹೊಸ ವಿಚಾರಗಳನ್ನು ಸೃಷ್ಟಿಸುವ ಸಾಮರ್ಥ್ಯವನ್ನು ತಂತ್ರಜ್ಞಾನ ಬೆಳೆಸಲಾರದು. ಅದಕ್ಕಾಗಿ ಮಕ್ಕಳ ಮೆದುಳಿಗೆ ಕೆಲಸ ನೀಡುವ, ಅವರ ಸೃಜನಶೀಲತೆಗೆ ಅವಕಾಶ ಕಲ್ಪಿಸುವ ವೇದಿಕೆಗಳು ಅಗತ್ಯ ಎಂದರು.ಎಲ್ಲವೂ ಸುಲಭವಾಗಿ ಸಿಗುತ್ತಿರುವುದರಿಂದ ಸ್ವಂತ ಸಾಮರ್ಥ್ಯ ಬಳಸುವ ಪ್ರಯತ್ನ ಕಡಿಮೆಯಾಗುತ್ತಿದೆ. ಇದೇ ಪ್ರವೃತ್ತಿ ಮುಂದುವರಿದರೆ ಭವಿಷ್ಯದಲ್ಲಿ ಸಮಸ್ಯೆ ಎದುರಾಗಬಹುದು. ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ, ಚಿಂತನಾಶಕ್ತಿ ಮತ್ತು ಕಲ್ಪನಾಶಕ್ತಿ ಬೆಳೆಸುವ ಸದುದ್ದೇಶದಿಂದ ಕನ್ನಡಪ್ರಭ ಸತತ ಎಂಟನೇ ವರ್ಷ ಚಿತ್ರಕಲಾ ಸ್ಪರ್ಧೆ ಆಯೋಜಿಸುತ್ತಿರುವುದು ಶ್ಲಾಘನೀಯ. ಮಕ್ಕಳು ಈ ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕು. ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದು ಆಶಿಸಿದರು.ಮಕ್ಕಳ ಕಲ್ಪನೆಗೆ ಬಣ್ಣ ತುಂಬುವ ವೇದಿಕೆ:ಮಕ್ಕಳಲ್ಲಿರುವ ಸೃಜನಶೀಲತೆ ಮತ್ತು ಕಲಾತ್ಮಕ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಅತ್ಯಂತ ಅಗತ್ಯ. ಚಿತ್ರಕಲೆ ಮಕ್ಕಳ ಕಲ್ಪನಾಶಕ್ತಿ, ಏಕಾಗ್ರತೆ ಹಾಗೂ ಅಭಿವ್ಯಕ್ತಿ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ಎಂಟು ವರ್ಷಗಳಿಂದ ನಿರಂತರವಾಗಿ ಇಂತಹ ಸ್ಪರ್ಧೆ ಆಯೋಜಿಸುತ್ತಿರುವುದು ಅಭಿನಂದನಾರ್ಹ. ಸಾವಿರಾರು ಮಕ್ಕಳಿಗೆ ತಮ್ಮ ಪ್ರತಿಭೆ ಅನಾವರಣಗೊಳಿಸಲು ಈ ವೇದಿಕೆ ಅವಕಾಶ ಕಲ್ಪಿಸಿರುವುದು ಸಂತಸದ ಸಂಗತಿ.
ಮಕ್ಕಳ ಹಬ್ಬವಾಗಿ ಬೆಳೆದ ಚಿತ್ರಕಲಾ ಸ್ಪರ್ಧೆಇದು ಸ್ಪರ್ಧೆಯಲ್ಲ. ಮಕ್ಕಳ ಹಬ್ಬ. ಒಂದಿಡಿ ದಿನ ಮಕ್ಕಳು ಒಂದೆಡೆ ಸೇರಿ ಕುಂಚದ ಮೂಲಕ ಅರಳಿಸುವ ಮೂಲಕ ತಮ್ಮಲ್ಲಿರುವ ಕಲಾ ಪ್ರತಿಭೆಯನ್ನು ಹೊರಹಾಕಲು ಈ ಸ್ಪರ್ಧೆ ಉತ್ತಮ ವೇದಿಕೆಯಾಗಿದೆ. ಮಕ್ಕಳಿಗೆ ವೇದಿಕೆ ಕಲ್ಪಿಸುವ ಮೂಲಕ ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ಮಕ್ಕಳ ಹಬ್ಬವನ್ನಾಗಿ ಆಚರಿಸುತ್ತಿರುವುದು ಸಂತಸಕರ. ಇಂತಹ ಕಾರ್ಯಕ್ರಮ ನಿರಂತರವಾಗಿ ನಡೆದು ಹೊಸ ಹೊಸ ಪ್ರತಿಭೆಗಳು ಅನಾವರಣಗೊಳ್ಳಲಿ.