ಕನ್ನಡಪ್ರಭ ವಾರ್ತೆ ಯಳಂದೂರುಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅನೇಕ ಪ್ರತಿಭಾವಂತರಿದ್ದು, ಅವಕಾಶಗಳ ಕೊರತೆಯಿದ್ದು, ಇಂತಹ ಮಕ್ಕಳಿಗೂ ಮೌಲ್ಯಯುತ ಶಿಕ್ಷಣ ಸಿಗಬೇಕು ಎಂದು ಆರಕ್ಷಕ ವೃತ್ತ ನಿರೀಕ್ಷಕ ಆರ್.ಶ್ರೀಕಾಂತ್ ಕರೆ ನೀಡಿದರು.ತಾಲೂಕಿನ ಹೊನ್ನೂರು ಗ್ರಾಮದ ಡಾ.ಭೀಮ್‌ರಾವ್ ರಾಮ್‌ಜೀ ಪ್ರೌಢಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶಾಲೆಯ ಸಹಯೋಗದೊಂದಿಗೆ 2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ದಾನಿಗಳಿಂದ ರಾಮ್ ಜೀ ಪ್ರೌಢಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಮಾಜ ಸೇವಕ, ಉದ್ಯಮಿ ಗಣಿಗನೂರು ಲೋಕೇಶ್ ಸೀಗಡಿ ಶಾಲಾ ಮಕ್ಕಳಿಗೆ ಉಚಿತವಾಗಿ ಸಮವಸ್ತ್ರಗಳನ್ನು ವಿತರಿಸಿದರು. ಕ್ರೀಡೆಯಲ್ಲಿ ಸಾಧನೆ ಮಾಡಿದ ಇದೇ ಶಾಲೆಯ ವಿದ್ಯಾರ್ಥಿಗಳಿಗೆ ಸಂತೇಮರಹಳ್ಳಿ ಗ್ರಾಪಂ ಸದಸ್ಯ ಶಿವಕುಮಾರ್ ಉಚಿತವಾಗಿ ಟ್ರ್ಯಾಕ್ ಸೂಟ್‌ಗಳನ್ನು ವಿತರಣೆ ಮಾಡಿದರು. ಗ್ರಾಪಂ ಉಪಾಧ್ಯಕ್ಷೆ ಭಾಗ್ಯಮ್ಮ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಂ. ವೀರಭದ್ರಸ್ವಾಮಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೈ.ಎಂ. ಮಂಜುನಾಥ್, ಕರವೇ ಜಿಲ್ಲಾ ಉಪಾಧ್ಯಕ್ಷ ವೈ.ಕೆ.ಮೋಳೆ ನಾಗರಾಜು ಗ್ರಾಪಂ ಮಾಜಿ ಅಧ್ಯಕ್ಷ ಗೌಡಹಳ್ಳಿ ರವಿ, ಪಪಂ ನಾಮನಿರ್ದೇಶಿತ ಸದಸ್ಯ ಲಿಂಗರಾಜಮೂರ್ತಿ, ಸತೀಶ್, ಚೇತನ್, ಡಾ. ನಿಖಿತಾ ಅನುರಾಧ, ಡಾ. ಪ್ರೇಮ, ರಾಧಾ, ಕಸಾಪ ಕಾರ್ಯದರ್ಶಿ ಡಿ.ಪಿ. ಮಹೇಶ್, ಗುಂಬಳ್ಳಿ ಬಸವರಾಜು, ವೈ.ಎಂ. ಭಾನುಪ್ರಕಾಶ್, ಚಾಮಲಾಪುರ ವಿಜಯ್, ಮಹದೇವ್‌ಸಿಂಗ್ ಸೇರಿದಂತೆ ಅನೇಕರು ಇದ್ದರು.